ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಾದ್ಯಂತ ಇಂದೂ ಮುಂದುವರಿಯಲಿದೆ ಧಾರಾಕಾರ ಮಳೆ

|
Google Oneindia Kannada News

Recommended Video

ಕರ್ನಾಟಕದಾದ್ಯಂತ ಇಂದೂ ಮುಂದುವರಿಯಲಿದೆ ಧಾರಾಕಾರ ಮಳೆ | Oneindia Kannada

ಬೆಂಗಳೂರು, ಜುಲೈ 14: ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡು, ಹಾಗೂ ಕರಾವಳಿ ಬಾಗದಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಲ್ಲಂತೂ ಎಡಬಿಡದೆ ಮಳೆ ಸುರಿಯುತ್ತಲೇ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಗಳಲ್ಲಿ ಧಾರಾಕಾರ ಮಳೆ ಇಂದು ಸಹ ಸುರಿಯಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಕೊಡಗು, ಚಿಕ್ಕಮಗಳೂರು, ಬೆಂಗಳೂರು, ಚಿತ್ರದುರ್ಗ, ಚಾಮಾರಾಜನಗರ, ಚಿಕ್ಕಮಂಗಳೂರು, ಹಾಸನ, ಕೋಲಾರ, ಮೈಸೂರು, ತುಮಕೂರುಗಳಲ್ಲೂ ಇಂದು ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳುವ ಸಾಧ್ಯತೆ

ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ(ಜು.13) ಕೆಲವೆಡೆ ಜಿಟಿ ಜಿಟಿ ಮಳೆಯಾಗಿದ್ದು, ಇಂದು ಸಹ ಮೋಡ ಕವಿದ ವಾತಅವರಣ ಕಂಡುಬರುತ್ತಿದೆ. ಇಂದೂ ಉದ್ಯಾನನಗರಿಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Monsoon Update: Very heavy rain in coastal,south,north interior Karnataka

ಅಂತೆಯೇ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ವಿಜಯಪುರ, ಬೀದರ್, ಬಳ್ಳಾರಿ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲೂ ಸ್ವಲ್ಪ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರಿಯಲಿದೆ. ಗೋವಾ ಮತ್ತು ಕೊಂಕಣ ಸೀಮೆಯಲ್ಲಿ ಭಾರೀ ಮಳೆಯಾಗಲಿದೆ. ವಿದರ್ಭ, ಛತ್ತೀಸ್ ಗಢ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ಮರಾಠಾವಾಡ, ತೆಲಂಗಾಣ, ಉತ್ತರಾಖಂಡ, ಉತ್ತರ ಪ್ರದೇಶ, ಮಧ್ಯಪ್ರದೇಶ, ಪಶ್ಚಿಮಬಂಗಾಳ, ಸಿಕ್ಕಿಂ, ನಾಗಾಲ್ಯಾಂಡ್, ರಾಜಸ್ಥಾನ, ಒಡಿಶಾ, ಅಸ್ಸಾಂ ಮತ್ತು ಮೇಘಾಲಯಗಳಲ್ಲೂ ಭಾರೀ ಬೀಳಲಿದೆ.

English summary
Monsoon Update: Heavy to very heavy rain in coastal and south, north interior Karnataka. Heavy to very heavy rain with extremely heavy falls at isolated places very likely over Gujarat region; Heavy rain at a few places with very heavy rain at isolated places very likely over Konkan & Goa
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X