ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಬೈನಲ್ಲಿ ಜೂನ್ 8ರ ಬಳಿಕ ಭಾರಿ ಮಳೆಯ ಎಚ್ಚರಿಕೆ

By ವಿಕಾಸ್
|
Google Oneindia Kannada News

ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ವಿವಿಧೆಡೆ ಮುಂಗಾರು ಮಳೆ ಉತ್ತಮವಾಗಿ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ ಎರಡು ದಿನಗಳಲ್ಲಿ ಮಹಾರಾಷ್ಟ್ರದ ಕರಾವಳಿ ಮತ್ತು ಗೋವಾಗಳಲ್ಲಿ ಮಳೆ ಅಬ್ಬರಿಸುವ ನಿರೀಕ್ಷೆಯಿದೆ. ಜೂನ್ 8 ರಿಂದ 12ರವರೆಗೆ ಮುಂಬೈನಲ್ಲಿ ಭಾರಿ ಪ್ರಮಾಣದ ಸುರಿಯಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕ ಮತ್ತು ರಾಯಲಸೀಮೆಯ ಉಳಿದ ಭಾಗಗಳು, ದಕ್ಷಿಣ ಕೊಂಕಣ, ಗೋವಾ, ಆಂಧ್ರಪ್ರದೇಶದ ಕರಾವಳಿ ಮತ್ತು ತೆಲಂಗಾಣ, ಬಂಗಾಳದ ವಿವಿಧ ಭಾಗಗಳಲ್ಲಿ ನೈರುತ್ಯ ಮುಂಗಾರು ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಬುಧವಾರ ಬೆಳಿಗ್ಗೆ ನೀಡಿರುವ ವರದಿ ತಿಳಿಸಿದೆ.

ಮಹಾರಾಷ್ಟ್ರದ ನೈರುತ್ಯ, ಅರೇಬಿಯನ್ ಸಮುದ್ರ, ಗುಜರಾತ್‌ನ ಕೆಲವು ಭಾಗಗಳು, ಮಧ್ಯಪ್ರದೇಶ, ಸಿಕ್ಕಿಂ, ಪಶ್ಚಿಮ ಬಂಗಾಳ ದಕ್ಷಿಣ ಭಾಗಗಳು, ಛತ್ತೀಸಗಡ, ಈಶಾನ್ಯ ರಾಜ್ಯಗಳು ಮತ್ತು ಬಂಗಾಳ ಕೊಲ್ಲಿಯ ಹೆಚ್ಚಿನ ಭಾಗಗಳಲ್ಲಿ ಜೂನ್ 9ರಿಂದ 11ರವರೆಗೆ ಮುಂಗಾರು ಪ್ರಬಲಗೊಳ್ಳಲು ಪೂರಕವಾದ ಸನ್ನಿವೇಶವಿದೆ ಎಂದು ಅದು ಹೇಳಿದೆ.

ನೈರುತ್ಯ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದ ಕರಾವಳಿಯಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆ ಉತ್ತಮಗೊಳ್ಳುವ ನಿರೀಕ್ಷೆಯಿದೆ.

ಜೂನ್ 9ರಿಂದ 11ರವೆರೆಗ ಮುಂಬೈ ಮಹಾನಗರಿಯಲ್ಲಿ ಭಾರಿ ಪ್ರಮಾಣದಲ್ಲಿ ವರ್ಷಧಾರೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಮುಂಬೈನಲ್ಲಿರುವ ಪ್ರಾದೇಶಿಕ ಹವಾಮಾನ ಕೇಂದ್ರವು ಮುಂಬೈ ಮತ್ತು ಥಾಣೆಯಲ್ಲಿ ಮಳೆಯ ಎಚ್ಚರಿಕೆ ನೀಡಿದೆ. ಈ ಅವಧಿಯಲ್ಲಿ ಜನರು ಹೊರಾಂಗಣ ಚಟುವಟಿಕೆಗಳಿಂದ ದೂರವಿರುವಂತೆ ಮತ್ತು ಹವಾಮಾನ ಇಲಾಖೆಯ ಮಾಹಿತಿಗಳನ್ನು ಅನುಸರಿಸುವಂತೆ ಅದು ಸೂಚಿಸಿದೆ.

Monsoon updates: Heavy downpour expected in Mumbai after June 8; moderate rains likely in Goa

ಐಎಂಡಿ ಬಿಡುಗಡೆ ಮಾಡಿರುವ ಉಪಗ್ರಹ ಚಿತ್ರದಲ್ಲಿ ಭಾರತದ ವಿವಿಧ ಭಾಗಗಳು, ಅರೇಬಿಯನ್ ಸಮುದ್ರ, ಬಂಗಾಳ ಕೊಲ್ಲಿ ಮತ್ತು ಹಿಂದೂ ಮಹಾಸಾಗರದ ಮೇಲೆ ಆವರಿಸಿರುವ ಮೋಡ.
Monsoon updates: Heavy downpour expected in Mumbai after June 8; moderate rains likely in Goa

ಉಪಖಂಡದಲ್ಲಿ ಹಿಂದೂ ಮಹಾಸಾಗರದಿಂದ ಆಸ್ಟ್ರೇಲಿಯಾದವರೆಗಿನ ಹವಾಮಾನದ ಪರಿಸ್ಥಿತಿಯನ್ನು ತಿಳಿಸುವ ಐಎಂಡಿ ಉಪಗ್ರಹ ಚಿತ್ರ

ಮುಂಗಾರು ಇನ್ನಷ್ಟು ಪ್ರಬಲಗೊಳ್ಳಲಿದ್ದು, ಕರ್ನಾಟಕದ ಕರಾವಳಿ, ಕೇರಳ, ಕೊಂಕಣ ಸಾಲು ಮತ್ತು ಗೋವಾಗಳಲ್ಲಿ ಮಳೆ ಹೆಚ್ಚಳವಾಗಲಿದೆ. ಇದರಿಂದ ಪ್ರವಾಹ ಪರಿಸ್ಥಿತಿಯೂ ತಲೆದೋರಬಹುದು ಎಂದು ಐಎಂಟಿ ತಿಳಿಸಿದೆ.

ಮುಂದಿನ 48 ಗಂಟೆಗಳಲ್ಲಿ ನೈರುತ್ಯ ಮಾರುತಗಳು ತೆಲಂಗಾಣದ ವಿವಿಧ ಭಾಗಗಳಲ್ಲಿ ಆವರಿಸಲಿದೆ. ದಕ್ಷಿಣದ ಜಿಲ್ಲೆಗಳು ಹಗುರದಿಂದ ಸಾಧಾರಣ ಅಥವಾ ಒಂದೆರಡು ಭಾರಿ ಮಳೆಯನ್ನು ಎದುರಿಸುವ ಸಾಧ್ಯತೆ ಇದೆ ಎಂದು ಐಎಂಡಿ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಈ ಬಾರಿಯ ಮುಂಗಾರಿನಲ್ಲಿ ಮಳೆಯ ಹಂಚಿಕೆಯು ದೇಶದ ಕೇಂದ್ರ ಭಾಗದಲ್ಲಿ ಸಾಮಾನ್ಯವಾಗಿರಲಿದೆ. ಆದರೆ ದಕ್ಷಿಣ ಭಾರತದ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ಕೇರಳ, ಪುದುಚೆರಿ ಮತ್ತು ತಮಿಳುನಾಡುಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಲಿದೆ.

ದೀರ್ಘಾವಧಿ ಸರಾಸರಿಯಲ್ಲಿ (ಎಲ್‌ಪಿಎ) ದೇಶದಲ್ಲಿ ಜುಲೈ ತಿಂಗಳಿನಲ್ಲಿ ಶೇ 101ರಷ್ಟು ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ ತಿಂಗಳಿನಲ್ಲಿ ಶೇ 9ರ ವ್ಯತ್ಯಾಸದಲ್ಲಿ ಶೇ 94ರಷ್ಟು ಎಲ್‌ಪಿಎ ನಿರೀಕ್ಷಿಸಲಾಗಿದೆ.

English summary
Monsoon updates: Rains are expected to lash coastal Maharashtra and Goa in the next two days while heavy downpour is expected in Mumbai from June 8 to June 12, according to the India Meteorological Department (IMD) forecast.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X