ಉತ್ತರಪ್ರದೇಶದಲ್ಲಿ ಭಾರಿ ಮಳೆ, ಕರ್ನಾಟಕದಲ್ಲಿ ಸಾಧಾರಣ
ಬೆಂಗಳೂರು, ಜುಲೈ 01:ನೈಋತ್ಯ ಮುಂಗಾರು ಮಾರುತಗಳು ಸದ್ಯ ಎತ್ತ ಸಾಗಿವೆ? ಭಾರತದ ಯಾವ ಯಾವ ರಾಜ್ಯಗಳಲ್ಲಿ ಭಾರಿ ಮಳೆ ನಿರೀಕ್ಷಿಸಬಹುದು? ಯಾವ ರಾಜ್ಯಗಳಲ್ಲಿ ಮುಂಗಾರು ಕ್ಷೀಣಗೊಂಡಿದೆ? ಈ ಕುರಿತಂತೆ ಭಾರತೀಯ ಹವಾಮಾನ ಇಲಾಖೆ ಭಾನುವಾರದಂದು ನೀಡಿರುವ ಹವಾಮಾನ ಮುನ್ಸೂಚನೆ, ವರದಿ ಇಲ್ಲಿದೆ.
ಇಲಾಖೆ ವರದಿಯಂತೆ ಉತ್ತರಪ್ರದೇಶ ಹಾಗೂ ಬಿಹಾರದಲ್ಲಿ ಭಾರಿ ಗುಡುಗು ಸಹಿತ ಮಳೆ ಬೀಳಲಿದೆ. ನೈಋತ್ಯ ಮುಂಗಾರು ಮಾರುತಗಳು ರಾಜಸ್ಥಾನ್ ಹಾಗೂ ಕಛ್ ಭಾಗದಲ್ಲಿದ್ದು, ಉತ್ತರ ಭಾರತದ ಹಲವೆಡೆ ಮುಂಗಾರು ಚುರುಕುಗೊಂಡಿದೆ. ಆದರೆ, ಕರ್ನಾಟಕ ಸೇರಿದಂತೆ ದಕ್ಷಿಣದಲ್ಲಿ ಮುಂಗಾರು ಸಾಧಾರಣವಾಗಿದೆ.

ಹವಾಮಾನ ಮುನ್ಸೂಚನೆ: ಜುಲೈ 1ರಿಂದ 3ರ ತನಕ ಉತ್ತರಪ್ರದೇಶದ ಉತ್ತರ ಭಾಗ, ಬಿಹಾರ, ಪಂಜಾಬ್, ಚಂಡೀಗಢ, ಪಶ್ಚಿಮ ಹಿಮಾಲಯ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಭಾರಿ ಮಳೆ ಬೀಳಲಿದೆ.
ಗುಡುಗು ಸಹಿತ ಸಾಧಾರಣ ಮಳೆ: ಜಮ್ಮು ಮತ್ತು ಕಾಶ್ಮೀರ, ಕೊಂಕಣ ಹಾಗೂ ಗೋವಾ, ಲಕ್ಷದೀಪ ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ, ಹಿಮಾಚಲಪ್ರದೇಶ ಕೆಲ ಪ್ರದೇಶ, ಛತ್ತೀಸ್ ಗಢ, ಒಡಿಶಾ, ಮಧ್ಯ ಮಹಾರಾಷ್ಟ್ರ, ಕರ್ನಾಟಕದ ಉತ್ತರ ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆ ನಿರೀಕ್ಷಿಸಬಹುದು.

ಕರ್ನಾಟಕದ ಮಲೆನಾಡು ಹಾಗೂ ಕರಾವಳಿ, ಜಾರ್ಖಂಡ್, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ಸೌರಾಷ್ಟ್ರ, ಆಂಧ್ರಪ್ರದೇಶದ ಕರಾವಳಿ, ತಮಿಳುನಾಡು ಹಾಗೂ ಪುದುಚೇರಿಗಳಲ್ಲಿ ಮಂಗಾರು ವಾಡಿಕೆಯಂತೆ ಮಳೆ ಸುರಿಸಲಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications