ಮೊರ್ಬಿ ಸೇತುವೆ ಕುಸಿತ: ಬಿಜೆಪಿ ಸಂಸದರ ಕುಟುಂಬದ 12 ಮಂದಿ ಸಾವು
ರಾಜ್‌ಕೋಟ್‌ನ ಬಿಜೆಪಿ ಸಂಸದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ ಅವರ ಕುಟುಂಬದ 12 ಸದಸ್ಯರು ಭಾನುವಾರ ಸಂಜೆ ಗುಜರಾತ್‌ನ ಮೊರ್ಬಿ ಸೇತುವೆ ಕುಸಿತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಸ್ಥಳೀಯ ಸುದ್ದಿಗಾರರೊಂದಿಗೆ ಮಾತನಾಡಿದ ಮೋಹನ್‌ಭಾಯ್ ಕಲ್ಯಾಣ್‌ಜಿ ಕುಂದರಿಯಾ, "ನಾನು ಈ ದುರ್ಘಟನೆಯಲ್ಲಿ ಐದು ಮಕ್ಕಳು ಸೇರಿದಂತೆ ನನ್ನ ಕುಟುಂಬದ 12 ಸದಸ್ಯರನ್ನು ಕಳೆದುಕೊಂಡಿದ್ದೇನೆ. ನನ್ನ ಸಹೋದರಿಯ ಕುಟುಂಬ ಸದಸ್ಯರನ್ನು ಕಳೆದುಕೊಂಡಿದ್ದೇನೆ.'' ಎಂದು ತಿಳಿಸಿದ್ದಾರೆ.
"ಎಸ್‌ಡಿಆರ್‌ಎಫ್ ಮತ್ತು ಸ್ಥಳೀಯ ಆಡಳಿತವು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಅಪಘಾತದಲ್ಲಿ ಬದುಕುಳಿದ ಎಲ್ಲರನ್ನೂ ರಕ್ಷಿಸಲಾಗಿದೆ ಮತ್ತು ಮಚ್ಚು ನದಿಯಲ್ಲಿದ್ದವರ ಶವಗಳನ್ನು ಹೊರತೆಗೆಯಲು ಪ್ರಯತ್ನಗಳು ನಡೆಯುತ್ತಿವೆ. ರಕ್ಷಣಾ ದೋಣಿಗಳು ಸಹ ಸ್ಥಳದಲ್ಲಿವೆ" ಎಂದು ಬಿಜೆಪಿ ಸಂಸದರು ಹೇಳಿದರು.
ಗುಜರಾತ್‌ನ ಮೊರ್ಬಿ ನಗರದಲ್ಲಿ ಶತಮಾನಗಳಷ್ಟು ಹಳೆಯದಾದ ಮಚ್ಚು ನದಿಯ ತೂಗು ಸೇತುವೆ ಕುಸಿದು 132 ಜನರು, ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳು ಸಾವನ್ನಪ್ಪಿದ್ದಾರೆ. ಎನ್‌ಡಿಆರ್‌ಎಫ್, ಸೇನೆ ಮತ್ತು ಸ್ಥಳೀಯ ಆಡಳಿತದ ಐದು ತಂಡಗಳು ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ.

ಬಿಜೆಪಿ ಸಂಸದರ ಕುಟುಂಬದ 12 ಮಂದಿ ಸಾವು
ಸೇತುವೆ ತೆರೆಯಲು ಅನುಮತಿ ನೀಡಿದ್ದು ಹೇಗೆ ಎಂಬ ಪ್ರಶ್ನೆಗೆ ಉತ್ತರಿಸಿದ ಬಿಜೆಪಿ ಸಂಸದರು, "ಈ ದುರಂತ ಹೇಗೆ ಸಂಭವಿಸಿತು ಎಂಬುದನ್ನು ಕಂಡುಹಿಡಿಯಲು ತನಿಖೆ ನಡೆಸಲಾಗುವುದು. ತಪ್ಪಿತಸ್ಥರನ್ನು ಶಿಕ್ಷಿಸಲಾಗುವುದು, ಸತ್ತವರಲ್ಲಿ ಹೆಚ್ಚಾಗಿ ಮಹಿಳೆಯರು ಮತ್ತು ಮಕ್ಕಳು, ಸ್ಥಳೀಯರು ಮತ್ತು ಎನ್‌ಜಿಒಗಳು ಇದ್ದಾರೆ. ಬದುಕುಳಿದವರ ರಕ್ಷಣಾ ಕಾರ್ಯಾಚರಣೆ ನಡೆದಿದೆ'' ಎಂದರು.

ಮೃತರಲ್ಲಿ ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಹೆಚ್ಚು
"60 ಕ್ಕೂ ಹೆಚ್ಚು ಶವಗಳನ್ನು ವಶಪಡಿಸಿಕೊಳ್ಳಲಾಗಿದೆ, ಅದರಲ್ಲಿ ಹೆಚ್ಚು ಮಕ್ಕಳು, ಮಹಿಳೆಯರು ಮತ್ತು ವೃದ್ಧರು ಇದ್ದಾರೆ. ಉಳಿದವರನ್ನು ರಕ್ಷಿಸಲಾಗಿದೆ. NDRF ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ನಾವು ಈ ವಿಷಯವನ್ನು ಬಹಳ ಗಂಭೀರವಾಗಿ ಪರಿಗಣಿಸುತ್ತಿದ್ದೇವೆ, ಇದು ತುಂಬಾ ದುಃಖಕರವಾಗಿದೆ "ಎಂದು ಸಚಿವರು ಭಾನುವಾರ ಹೇಳಿದರು.

ಘಟನೆಯ ತನಿಖೆಗೆ ಸಮಿತಿ ರಚನೆ
ರಾಜ್ಯ ರಾಜಧಾನಿಯಿಂದ ಸುಮಾರು 300 ಕಿಮೀ ದೂರದಲ್ಲಿರುವ ಮೊರ್ಬಿಯಲ್ಲಿ ಗುಜರಾತ್ ಗೃಹ ಖಾತೆ ರಾಜ್ಯ ಸಚಿವ ಹರ್ಷ್ ಸಂಘವಿ ಸುದ್ದಿಗಾರರೊಂದಿಗೆ ಮಾತನಾಡಿ, 'ರಾಜ್ಯ ಸರ್ಕಾರವು ಕುಸಿತದ ತನಿಖೆಗಾಗಿ ಸಮಿತಿಯನ್ನು ರಚಿಸಿದೆ. ಘಟನೆಯ ತನಿಖೆಗಾಗಿ ಐವರು ಸದಸ್ಯರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ. ಸೇತುವೆ ಕುಸಿತದಲ್ಲಿ ಎಫ್‌ಐಆರ್ ಅನ್ನು ಸೆಕ್ಷನ್ 304 (ಕೊಲೆಗೆ ಸಮನಾಗಿರುವುದಿಲ್ಲ), 308 (ಸಾವಿಗೆ ಕಾರಣವಾಗುವ ಉದ್ದೇಶಪೂರ್ವಕ ಕೃತ್ಯ) ಮತ್ತು 114 (ಅಪರಾಧ ನಡೆದಾಗ ಕುಮ್ಮಕ್ಕು ನೀಡುವವರು) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ, ಯಾರೇ ಜವಾಬ್ದಾರರಾಗಿದ್ದರೂ ಕ್ರಮ ಕೈಗೊಳ್ಳಲಾಗುತ್ತದೆ' ಎಂದು ಸಂಘವಿ ಹೇಳಿದರು.

132 ಜನರು ಸಾವು
ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಹರ್ಷ ಸಾಂಘವಿ, 'ಘಟನೆಯಲ್ಲಿ ಇಲ್ಲಿಯವರೆಗೆ 132 ಜನರು ಸಾವನ್ನಪ್ಪಿದ್ದಾರೆ. ಭಾನುವಾರ ಸಂಜೆ 6.30 ರ ಸುಮಾರಿಗೆ ಸೇತುವೆ ಕುಸಿದಿದೆ. ದೀಪಾವಳಿ ರಜೆ ಮತ್ತು ಭಾನುವಾರದ ಕಾರಣ ಪ್ರವಾಸಿಗರ ನೂಕುನುಗ್ಗಲು ಇತ್ತು. ಪ್ರಮುಖ ಪ್ರವಾಸಿ ಆಕರ್ಷಣೆಯಾಗಿರುವ ಸೇತುವೆ ಕುಸಿತ ಬಳಿಕ ರಾತ್ರಿಯಿಡೀ ರಕ್ಷಣಾ ಕಾರ್ಯಾಚರಣೆ ನಡೆಸಲಾಯಿತು ಮತ್ತು ಪ್ರಧಾನಿ ಮೋದಿ ಅವರು ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ ಎಂದಿದ್ದಾರೆ.












Click it and Unblock the Notifications