ಮೋರ್ಬಿ ಸೇತುವೆ ದುರಂತ: ಒರೆವಾ ಗ್ರೂಪ್ ಎಂಡಿ ವಿರುದ್ಧ ಅರೆಸ್ಟ್ ವಾರೆಂಟ್
ಅಹಮದಾಬಾದ್ ಜನವರಿ 23: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ ಮೋರ್ಬಿ ಸೇತುವೆ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಒರೆವಾ ಗ್ರೂಪ್ ಎಂಡಿ ವಿರುದ್ಧ ಬಂಧನದ ವಾರೆಂಟ್ ಹೊರಡಿಸಲಾಗಿದೆ. ಗುಜರಾತಿನ ಮೊರ್ಬಿಯಲ್ಲಿ ತೂಗು ಸೇತುವೆ ಕುಸಿದು 141 ಜನರ ಜೀವವನ್ನು ಕಸಿದುಕೊಂಡಿತು. ಈ ಘಟನೆ ನಡೆದು ಎರಡುವರೆ ತಿಂಗಳು ಬಳಿಕ ಸೇತುವೆಯ ನವೀಕರಣ, ಕಾರ್ಯಾಚರಣೆ ಮತ್ತು ನಿರ್ವಹಣೆಯ ಜವಾಬ್ದಾರಿಯುತ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ಪೊಲೀಸರು ಬಂಧನ ವಾರಂಟ್ ಹೊರಡಿಸಿದ್ದಾರೆ.
ಅಜಂತಾ ಒರೆವಾ ಗ್ರೂಪ್‌ನ ಪ್ರವರ್ತಕ ಜೈಸುಖ್ ಪಟೇಲ್ ವಿರುದ್ಧ ಗುಜರಾತ್ ಪೊಲೀಸರು ಭಾನುವಾರ ಬಂಧನದ ವಾರಂಟ್ ಹೊರಡಿಸಿದ್ದಾರೆ. ಬ್ರಿಟಿಷರ ಕಾಲದ ತೂಗುಸೇತುವೆಯ ಕಾರ್ಯಾಚರಣೆ ಮತ್ತು ನಿರ್ವಹಣೆಯ ಜವಾಬ್ದಾರಿಯನ್ನು ಪಟೇಲ್ ಅವರ ಕಂಪನಿ ವಹಿಸಿಕೊಂಡಿದ್ದು, ಅವರ ವಿರುದ್ಧ ಪೊಲೀಸರು ಲುಕ್‌ಔಟ್ ಸುತ್ತೋಲೆ ಹೊರಡಿಸಿದ್ದಾರೆ.
ಜನವರಿ 16 ರಂದು ಜೈಸುಖ್ ಪಟೇಲ್ ಮೊರ್ಬಿ ಸೆಷನ್ಸ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪ್ರಕರಣದಲ್ಲಿ ಬಂಧಿಸುವ ಭಯದಿಂದ ಸಲ್ಲಿಸಿದ್ದರು. ಅಜಂತಾ ಮ್ಯಾನುಫ್ಯಾಕ್ಚರಿಂಗ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಸೆಷನ್ ಕೋರ್ಟ್ ಶನಿವಾರ ಫೆಬ್ರವರಿ 1 ಕ್ಕೆ ಮುಂದೂಡಿದೆ. ಪಬ್ಲಿಕ್ ಪ್ರಾಸಿಕ್ಯೂಟರ್ ಹಾಜರಾಗದ ಕಾರಣ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಪಿ ಸಿ ಜೋಶಿ ಅವರು ಜೈಸುಖ್ ಪಟೇಲ್ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯನ್ನು ಫೆಬ್ರವರಿ 1 ಕ್ಕೆ ಮುಂದೂಡಿದರು.

ಮೊರ್ಬಿ ದುರಂತದಲ್ಲಿ ಒರೆವಾ ಗುಂಪಿನ ಪಾತ್ರ
ಮೊರ್ಬಿ ಪಟ್ಟಣದ ಮಚ್ಚು ನದಿಯ ತೂಗು ಸೇತುವೆ ಕಳೆದ ವರ್ಷ ಅಕ್ಟೋಬರ್ 30 ರಂದು ಕುಸಿದು 135 ಜನರು ಸಾವನ್ನಪ್ಪಿದ್ದರು. ಮೋರ್ಬಿ ಪುರಸಭೆಯೊಂದಿಗೆ ಸಹಿ ಮಾಡಿದ ಒಪ್ಪಂದದ ಪ್ರಕಾರ ಸೇತುವೆಯನ್ನು ಒರೆವಾ ಗ್ರೂಪ್ ನಿರ್ವಹಿಸುತ್ತದೆ. ಸೇತುವೆಯ ನಿರ್ವಹಣೆಗಾಗಿ 15 ವರ್ಷಗಳ ಒಪ್ಪಂದಕ್ಕೆ ಸಹಿ ಹಾಕಿತ್ತು. ಮಾರ್ಬಿ ಮುನ್ಸಿಪಲ್ ಕಾರ್ಪೊರೇಷನ್ ಮತ್ತು ಅಜಂತಾ ಒರೆವಾ ಕಂಪನಿ ನಡುವೆ ಮಾರ್ಚ್ 2022 ರಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. ಇದು 2037 ರವರೆಗೆ ಮಾನ್ಯವಾಗಿತ್ತು.
ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ವರದಿಯು ತುಕ್ಕು ಹಿಡಿದ ಕೇಬಲ್‌ಗಳು, ಮುರಿದ ಆಂಕರ್ ಪಿನ್‌ಗಳು ಮತ್ತು ಸಡಿಲವಾದ ಬೋಲ್ಟ್‌ಗಳು ತೂಗು ಸೇತುವೆಯನ್ನು ನವೀಕರಿಸುವಾಗ ಗಮನಿಸದ ಲೋಪಗಳಾಗಿವೆ ಎಂದು ಬಹಿರಂಗಪಡಿಸಿದೆ. ಸೇತುವೆಯನ್ನು ಸಾರ್ವಜನಿಕರಿಗೆ ತೆರೆದಿಡುವ ಮೊದಲು ಅದರ ಭಾರ ಹೊರುವ ಸಾಮರ್ಥ್ಯವನ್ನು ನಿರ್ಣಯಿಸಲು ಒರೆವಾ ಗ್ರೂಪ್ ಯಾವುದೇ ಪರಿಣಿತ ಏಜೆನ್ಸಿಯನ್ನು ನೇಮಿಸಿಕೊಂಡಿಲ್ಲ ಎಂದು ವರದಿಯು ಬಹಿರಂಗಪಡಿಸಿದೆ.

ಮೊರ್ಬಿ ದುರಂತದ ತನಿಖೆಗಾಗಿ ಸರ್ಕಾರವು ರಚಿಸಿರುವ ವಿಶೇಷ ತನಿಖಾ ತಂಡವು (SIT) ಬ್ರಿಟಿಷರ ಕಾಲದ ಸೇತುವೆಯ ದುರಸ್ತಿ, ನಿರ್ವಹಣೆ ಮತ್ತು ಕಾರ್ಯಾಚರಣೆಯಲ್ಲಿ ಒರೆವಾ ಗ್ರೂಪ್‌ನ ಹಲವಾರು ಲೋಪಗಳನ್ನು ಉಲ್ಲೇಖಿಸಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications