• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಭಾರತದ 13 ರಾಜ್ಯದಲ್ಲಿ ಸಕ್ರಿಯ ಪ್ರಕರಣ 1 ಲಕ್ಷಕ್ಕೂ ಅಧಿಕ

|
Google Oneindia Kannada News

ನವದೆಹಲಿ, ಮೇ 11; ಭಾರತದ 13 ರಾಜ್ಯಗಳಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 1 ಲಕ್ಷಕ್ಕೂ ಅಧಿಕವಿದೆ. 6 ರಾಜ್ಯಗಳಲ್ಲಿ 50 ಸಾವಿರದಿಂದ 1 ಲಕ್ಷದ ತನಕ ಪ್ರಕರಣಗಳಿವೆ. 17 ರಾಜ್ಯಗಳಲ್ಲಿ 50 ಸಾವಿರಕ್ಕಿಂತಲೂ ಕಡಿಮೆ ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಬುಧವಾರ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಐಸಿಎಂಆರ್ ಮಹಾನಿರ್ದೇಶಕ ಬಲರಾಮ್ ಭಾರ್ಗವ್ ಈ ಕುರಿತು ಮಾತನಾಡಿದರು. ವಿವಿಧ ರಾಜ್ಯಗಳಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಿದರು.

ಕೋವಿಡ್ ಕೇಂದ್ರವಾಗಿ ಐಟಿಐ ಆಸ್ಪತ್ರೆ ಪರಿವರ್ತನೆ: ಸದಾನಂದ ಗೌಡ ಕೋವಿಡ್ ಕೇಂದ್ರವಾಗಿ ಐಟಿಐ ಆಸ್ಪತ್ರೆ ಪರಿವರ್ತನೆ: ಸದಾನಂದ ಗೌಡ

"ಆರೋಗ್ಯ ಸಚಿವಾಲಯದ ಮಾಹಿತಿಯಂತೆ ಕರ್ನಾಟಕ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ, ಓಡಿಶಾ, ಪಂಜಾಬ್, ಅಸ್ಸಾಂ, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಪುದುಚೇರಿ, ಮಣಿಪುರ, ಮೇಘಾಲಯ, ತ್ರಿಪುರ, ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶದಲ್ಲಿ ಪ್ರತಿದಿನ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ" ಎಂದರು.

ಕರ್ನಾಟಕ; ಹೊಸ ಕೋವಿಡ್ ಪ್ರಕರಣ ಕೊಂಚ ಇಳಿಕೆ ಕರ್ನಾಟಕ; ಹೊಸ ಕೋವಿಡ್ ಪ್ರಕರಣ ಕೊಂಚ ಇಳಿಕೆ

"ಮಹಾರಾಷ್ಟ್ರ, ಉತ್ತರ ಪ್ರದೇಶ, ಆಂಧ್ರ ಪ್ರದೇಶ, ದೆಹಲಿ, ರಾಜಸ್ಥಾನ, ಹರ್ಯಾಣ, ಛತ್ತೀಸ್‌ಗಢ್‌, ಬಿಹಾರ, ಗುಜರಾತ್ ರಾಜ್ಯಗಳಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದೆ" ಎಂದು ಆರೋಗ್ಯ ಸಚಿವಾಲಯ ಹೇಳಿದೆ ಎಂದು ತಿಳಿಸಿದರು.

ಆನೇಕಲ್ ಆಸ್ಪತ್ರೆ ಎಡವಟ್ಟು; ಕೋವಿಡ್ ಸೋಂಕಿತರ ಶವ ಅದಲು ಬದಲು ಆನೇಕಲ್ ಆಸ್ಪತ್ರೆ ಎಡವಟ್ಟು; ಕೋವಿಡ್ ಸೋಂಕಿತರ ಶವ ಅದಲು ಬದಲು

ಮಧ್ಯಪ್ರದೇಶ, ಉತ್ತರಾಖಂಡ್, ಜಾರ್ಖಂಡ್, ತೆಲಂಗಾಣ, ಚಂಡೀಗಢ್, ಲಡಾಕ್, ಧಮನ್ ಅಂಡ್ ದಿಯು, ಲಕ್ಷದೀಪ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಕುಸಿಯುತ್ತಿದೆ.

English summary
More than 1 lakh active cases in 13 states. 50,000 to 1 lakh active cases in 6 states as per the data of ministry of health said ICMR DG Dr. Balram Bhargava.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X