ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ 13 ಕೋಟಿಗೂ ಅಧಿಕ ಮಂದಿಗೆ ಕೊರೊನಾ ಲಸಿಕೆ!

|
Google Oneindia Kannada News

ನವದೆಹಲಿ, ಏಪ್ರಿಲ್ 21: ಭಾರತದಲ್ಲಿ ಕೊರೊನಾವೈರಸ್ ನಿಯಂತ್ರಿಸಲು ಲಸಿಕೆ ವಿತರಣೆ ಅಭಿಯಾನಕ್ಕೆ ವೇಗ ನೀಡಲಾಗಿದೆ. ಕಳೆದ 24 ಗಂಟೆಗಳಲ್ಲೇ 28 ಲಕ್ಷಕ್ಕೂ ಅಧಿಕ ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ.

ಮಂಗಳವಾರ ರಾತ್ರಿ 9 ಗಂಟೆವರೆಗೆ 28.98 ಲಕ್ಷ ಜನರಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೆ 13,00,27,370 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾ ವಾರಿಯರ್ಸ್‌ಗಳ 50 ಲಕ್ಷದ ವಿಮಾ ಯೋಜನೆ ವಿಸ್ತರಿಸಿದ ಕೇಂದ್ರಕೊರೊನಾ ವಾರಿಯರ್ಸ್‌ಗಳ 50 ಲಕ್ಷದ ವಿಮಾ ಯೋಜನೆ ವಿಸ್ತರಿಸಿದ ಕೇಂದ್ರ

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಇದರ ಮಧ್ಯೆ ಮಾಸ್ಕೋ, ರಷ್ಯಾದಲ್ಲಿ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-ವಿ ಲಸಿಕೆ ವಿತರಿಸುವುದಕ್ಕೂ ಅನುಮೋದನೆ ನೀಡಲಾಗಿದೆ.

More Than 13 Crore Beneficiaries Got Vaccinated Against Coronavirus Across India

ದೇಶದಲ್ಲಿ 92,01,040 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 58,16,538 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,15,59,218 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 58,52,669 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ನಾಲ್ಕನೇ ಹಂತದಲ್ಲಿ ಏಪ್ರಿಲ್ 1ರಿಂದ 45 ವರ್ಷಕ್ಕಿಂತ ಮೇಲ್ಪಟ್ಟರಿಗೆ ಕೊರೊನಾವೈರಸ್ ಲಸಿಕೆ ನೀಡುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಆದೇಶಿಸಿದೆ. ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 4,34,85,752 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 14,90,460 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 4,73,31,326 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 52,90,367 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

English summary
More Than 13 Crore Beneficiaries Got Vaccinated Against Coronavirus Across India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X