ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಆಸು-ಪಾಸು: ಭಾರತದಲ್ಲಿ ಸೋಂಕು, ಲಸಿಕೆ, ತಪಾಸಣೆಯ ಸ್ಪಷ್ಟ ಚಿತ್ರಣ!

|
Google Oneindia Kannada News

ನವದೆಹಲಿ, ಮೇ 05: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಅಟ್ಟಹಾಸ ಒಂದು ಕಡೆಯಲ್ಲಿ ಹೆಚ್ಚುತ್ತಿದೆ. ಇನ್ನೊಂದು ಕಡೆಯಲ್ಲಿ ಕೊವಿಡ್-19 ಲಸಿಕೆ ವಿತರಣೆಯ ವೇಗ ಸಾರ್ವಜನಿಕರ ಗಮನಕ್ಕೆ ಬಾರದ ರೀತಿಯಲ್ಲಿ ಕಡಿಮೆಯಾಗುತ್ತಿದೆ.

ದೇಶದಲ್ಲಿ ಕೊರೊನಾವೈರಸ್ ರೋಗಿಗಳ ಚಿಕಿತ್ಸೆಗೆ ಹಾಸಿಗೆ, ಆಮ್ಲಜನಕ, ವೆಂಟಿಲೇಟರ್ ಸಮಸ್ಯೆಗಳ ಜೊತೆಗೆ ಇದೀಗ ಲಸಿಕೆಯ ಕೊರತೆ ಕೂಡ ಸೇರ್ಪಡೆಯಾಗಿದೆ. ಮಂಗಳವಾರ ಒಟ್ಟು 11.49 ಲಕ್ಷ ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.

ಎಚ್ಚರ ತಪ್ಪದಿರಿ: ಭಾರತದಲ್ಲಿ ಕೊರೊನಾ ಕಡಿಮೆಯಾಗಲು ಇದೇ ಕಾರಣ!?ಎಚ್ಚರ ತಪ್ಪದಿರಿ: ಭಾರತದಲ್ಲಿ ಕೊರೊನಾ ಕಡಿಮೆಯಾಗಲು ಇದೇ ಕಾರಣ!?

ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 109 ದಿನಗಳಲ್ಲಿ 16,04,18,105 ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ. ರಾತ್ರಿ 8 ಗಂಟೆ ವೇಳೆಗೆ 11,49,009 ಮಂದಿಗೆ ಲಸಿಕೆ ನೀಡಲಾಗಿದೆ. ಈ ಪೈಕಿ 6,15,220 ಜನರಿಗೆ ಮೊದಲ ಡೋಸ್ ಹಾಗೂ 5,33,789 ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಭಾರತದಲ್ಲಿ ಕೊವಿಡ್-19 ಲಸಿಕೆ ವಿತರಣೆ ಜೊತೆಗೆ ಲಸಿಕೆ ಅಭಾವ ಎಷ್ಟರ ಮಟ್ಟಿಗೆ ಸೃಷ್ಟಿಯಾಗಿದೆ ಎನ್ನುವುದರ ಕುರಿತು ಒಂದು ವಿಶೇಷ ವರದಿ ಇಲ್ಲಿದೆ ನೋಡಿ.

18 ವರ್ಷ ಮೀರಿದ 6,62,619 ಮಂದಿಗೆ ಲಸಿಕೆ

18 ವರ್ಷ ಮೀರಿದ 6,62,619 ಮಂದಿಗೆ ಲಸಿಕೆ

ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ಹರಡುವಿಕೆ ನಿಯಂತ್ರಿಸುವ ಉದ್ದೇಶದಿಂದ ಕೆಲವು ರಾಜ್ಯಗಳಲ್ಲಿ ಮಾತ್ರ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ವಿತರಿಸಲಾಗುತ್ತಿದೆ. ದೇಶದಲ್ಲಿ ಈವರೆಗೂ 6,62,619 ಜನರಿಗೆ ಲಸಿಕೆ ನೀಡಲಾಗಿದೆ. ಯಾವ ರಾಜ್ಯಗಳಲ್ಲಿ 18 ವರ್ಷ ಮೇಲ್ಪಟ್ಟ ಎಷ್ಟು ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ ಎನ್ನುವುದರ ಚಿತ್ರ ಮುಂದಿದೆ.

ಮೊದಲ ಅಭಿಯಾನದಲ್ಲಿ ಎಷ್ಟು ಮಂದಿಗೆ ಲಸಿಕೆ

ಮೊದಲ ಅಭಿಯಾನದಲ್ಲಿ ಎಷ್ಟು ಮಂದಿಗೆ ಲಸಿಕೆ

ಭಾರತದಲ್ಲಿ ಕೊರೊನಾವೈರಸ್ ಸೋಂಕಿಗೆ ಮೊದಲ ಅಭಿಯಾನದಲ್ಲಿ ವೈದ್ಯರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ನೀಡಲು ನಿರ್ಧರಿಸಲಾಗಿತ್ತು. ಅದರಂತೆ ದೇಶದಲ್ಲಿ ಈವರೆಗೆ 94,61,633 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 63,20,945 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,35,59,294 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 73,21,052 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

2ನೇ ಹಂತದ ಅಭಿಯಾನದಲ್ಲಿ ವೃದ್ಧರಿಗೆ ಮದ್ದು

2ನೇ ಹಂತದ ಅಭಿಯಾನದಲ್ಲಿ ವೃದ್ಧರಿಗೆ ಮದ್ದು

ಕೊರೊನಾ ಲಸಿಕೆ ವಿತರಣೆ ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಆಸ್ವಸ್ಥತೆಯನ್ನು ಹೊಂದಿರುವ ಹಾಗೂ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಆರಂಭಿಸಲಾಗಿತ್ತು. ಅದರಂತೆ ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 5,33,76,589 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 43,99,995 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,29,43,090 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,23,72,888 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಪ್ರಮುಖ ರಾಜ್ಯಗಳಲ್ಲಿ ಬಾಕಿ ಉಳಿದಿರುವ ಲಸಿಕೆ ಪ್ರಮಾಣ?

ಪ್ರಮುಖ ರಾಜ್ಯಗಳಲ್ಲಿ ಬಾಕಿ ಉಳಿದಿರುವ ಲಸಿಕೆ ಪ್ರಮಾಣ?

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ವೇಗ ಅತಿಯಾಗಿ ಹರಡುತಿದೆ. ಇದರ ಮಧ್ಯೆ ರಾಜ್ಯಗಳಿಗೆ ಹಂಚಿಕೆಯಾಗಿರುವ ಕೊವಿಡ್-19 ಲಸಿಕೆಯು ಖಾಲಿ ಆಗುತ್ತಿದೆ. ತಮಿಳುನಾಡು, ದೆಹಲಿ, ತೆಲಂಗಾಣ, ಕರ್ನಾಟಕ, ಜಾರ್ಖಂಡ್, ಹರಿಯಾಣ, ಬಿಹಾರ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಎಷ್ಟು ಪ್ರಮಾಣದ ಕೊರೊನಾವೈರಸ್ ಲಸಿಕೆಯು ಬಾಕಿ ಉಳಿದಿದೆ ಎನ್ನುವುದರ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವೇ ನೀಡಿರುವ ಶೇಕಡಾವಾರು ಪ್ರಮಾಣದ ನಕ್ಷೆಯನ್ನು ನೋಡಿ.

ದೇಶದ ಯಾವ ರಾಜ್ಯದಲ್ಲಿ ಅತಿಹೆಚ್ಚು ಲಸಿಕೆ ವ್ಯರ್ಥ?

ದೇಶದ ಯಾವ ರಾಜ್ಯದಲ್ಲಿ ಅತಿಹೆಚ್ಚು ಲಸಿಕೆ ವ್ಯರ್ಥ?

ಕೊವಿಡ್-19 ಲಸಿಕೆ ಸರಬರಾಜು ಹಾಗೂ ವಿತರಣೆ ಸಂದರ್ಭದಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಪಾಲನೆ ಮಾಡಬೇಕಿರುತ್ತದೆ. ಒಂದು ಲಸಿಕೆಯ ಬಾಟಲಿಯನ್ನು ತೆರೆದ ನಂತರ 2 ಗಂಟೆಗಳಲ್ಲೇ ಅದನ್ನು ಸಂಪೂರ್ಣವಾಗಿ ವಿತರಣೆ ಮಾಡಬೇಕು. ಇಲ್ಲದಿದ್ದರೆ ಮತ್ತೊಮ್ಮೆ ಆ ಲಸಿಕೆಯನ್ನು ಬಳಸಿಕೊಳ್ಳುವುದುಕ್ಕೆ ಬರುವುದಿಲ್ಲ. ಈ ನಿಯಮಗಳ ಪಾಲನೆಯಲ್ಲಿ ಎಡವಿದ ರಾಜ್ಯಗಳಲ್ಲಿ ಅತಿಹೆಚ್ಚು ಲಸಿಕೆಯು ವಿತರಣೆಯಾಗದೇ ವ್ಯರ್ಥವಾಗಿದೆ. ಲಕ್ಷದ್ವೀಪ, ತಮಿಳುನಾಡು, ಅಸ್ಸಾಂ, ಮಣಿಪುರ, ಹರಿಯಾಣ, ದಾದ್ರಾ ಮತ್ತು ನಗರ್, ಪಂಜಾಬ್, ಬಿಹಾರ, ನಾಗಾಲ್ಯಾಂಡ್ ಮತ್ತು ಮೇಘಾಲಯದಲ್ಲಿ ಎಷ್ಟು ಪ್ರಮಾಣದ ಲಸಿಕೆ ವ್ಯರ್ಥವಾಗಿದೆ ಎನ್ನುವುದರ ನೀಲನಕ್ಷೆ ಇಲ್ಲಿದೆ ನೋಡಿ.

ದೇಶದಲ್ಲಿ ಯಾವ ಮಾದರಿ ಕೊವಿಡ್ ಲಸಿಕೆ ವಿತರಣೆ?

ದೇಶದಲ್ಲಿ ಯಾವ ಮಾದರಿ ಕೊವಿಡ್ ಲಸಿಕೆ ವಿತರಣೆ?

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಇದರ ಮಧ್ಯೆ ಮಾಸ್ಕೋ, ರಷ್ಯಾದಲ್ಲಿ ಗಮಲೇಯ ನ್ಯಾಷನಲ್ ರಿಸರ್ಚ್ ಇನ್ಸ್ ಟಿಟ್ಯೂಟ್ ಆಫ್ ಎಪಿಡೆಮಿಯಾಲಜಿ ಅಂಡ್ ಮೈಕ್ರೋಬಯಾಲಜಿ ಅಭಿವೃದ್ಧಿಪಡಿಸಿದ ಸ್ಪುಟ್ನಿಕ್-ವಿ ಲಸಿಕೆ ವಿತರಿಸುವುದಕ್ಕೂ ಅನುಮೋದನೆ ನೀಡಲಾಗಿದೆ.

ದೇಶದಲ್ಲಿ ಕೊರೊನಾವೈರಸ್ ಪ್ರಕರಣಗಳ ಅಟ್ಟಹಾಸ

ದೇಶದಲ್ಲಿ ಕೊರೊನಾವೈರಸ್ ಪ್ರಕರಣಗಳ ಅಟ್ಟಹಾಸ

ಕೊರೊನಾವೈರಸ್ ಸಾಂಕ್ರಾಮಿಕ ಅಲೆಯ ಪ್ರಮಾಣ ಭಾರತದಲ್ಲಿ ಕಿಂಚಿತ್ತೂ ಕಡಿಮೆಯಾದಂತೆ ಕಾಣುತ್ತಿಲ್ಲ. ಕಳೆದ 24 ಗಂಟೆಗಳಲ್ಲಿ3,82,315 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ಒಂದೇ ದಿನ 3,780 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದೇ ಅವಧಿಯಲ್ಲಿ 3,38,439 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 2,06,65,148 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 1,69,51,731 ಸೋಂಕಿತರು ಈವರೆಗೂ ಗುಣಮುಖರಾಗಿದ್ದು, 2,26,188 ಸೋಂಕಿತರು ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ 34,87,229 ಕೊವಿಡ್-19 ಸಕ್ರಿಯ ಪ್ರಕರಣಗಳು ವರದಿಯಾಗಿವೆ.

ಕೊರೊನಾವೈರಸ್ ಸೋಂಕು ತಪಾಸಣೆ ವೇಗ ತಗ್ಗಿತಾ?

ಕೊರೊನಾವೈರಸ್ ಸೋಂಕು ತಪಾಸಣೆ ವೇಗ ತಗ್ಗಿತಾ?

ಭಾರತದಲ್ಲಿ ಕೊರೊನಾವೈರಸ್ ಎರಡನೇ ಅಲೆಯು ದೇಶವ್ಯಾಪ್ತಿ ಆತಂಕವನ್ನು ಹೆಚ್ಚಿಸುತ್ತಿದೆ. ಈ ಹಂತದಲ್ಲಿ ಕೊವಿಡ್-19 ಸೋಂಕಿತ ತಪಾಸಣೆ ವೇಗ ಕೂಡ ಕಡಿಮೆಯಾಗುತ್ತಿದೆಯಾ ಎಂಬ ಅನುಮಾನ ಸೃಷ್ಟಿಯಾಗುತ್ತಿದೆ. ಕಳೆದ ನಾಲ್ಕು ದಿನಗಳ ಹಿಂದೆ 4 ಲಕ್ಷದ ಗಡಿ ದಾಟುತ್ತಿದ್ದ ಸೋಂಕಿತ ಪ್ರಕರಣಗಳ ಸಂಖ್ಯೆ ನಾಲ್ಕು ದಿನಗಳಿಂದ ಈಚೆಗೆ ತಗ್ಗಿದೆ. ಕೊವಿಡ್-19 ಸೋಂಕಿನ ತಪಾಸಣೆ ವೇಗವನ್ನು ಕಡಿಮೆ ಮಾಡಿರುವುದೇ ಇಷ್ಟಕ್ಕೆಲ್ಲ ಕಾರಣ ಎಂಬ ಆರೋಪ ಕೇಳಿ ಬಂದಿದೆ.

ಕಳೆದ 24 ಗಂಟೆಗಳಲ್ಲಿ 15,41,299 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿ ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆಯು ಈವರೆಗೂ 29,48,52,078 ಜನರ ಮಾದರಿಯನ್ನು ಕೊವಿಡ್-19 ಸೋಂಕು ತಪಾಸಣೆಯನ್ನು ನಡೆಸಿದೆ.

English summary
More Than 16 Crore Beneficiaries Got Vaccinated Against Coronavirus Across India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X