ಭಾರತದಲ್ಲಿ 23 ಲಕ್ಷಕ್ಕೂ ಅಧಿಕ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ

ನವದೆಹಲಿ, ಜನವರಿ.27: ದೇಶಾದ್ಯಂತ ಈವರೆಗೆ 23,28,779 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ ಇಂದು 2,99,299 ಜನರಿಗೆ ಲಸಿಕೆ ನೀಡಲಾಯಿತು ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಮನೋಹರ್ ಅಗ್ನಾನಿ ತಿಳಿಸಿದ್ದಾರೆ.

ಬುಧವಾರದ ಅಂಕಿ-ಅಂಶಗಳ ಪ್ರಕಾರ, 23,28,779 ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ.

ರಾಷ್ಟ್ರವ್ಯಾಪಿ ಕೊವಿಡ್-19 ಲಸಿಕೆ ವಿತರಣೆಯ 12ನೇ ದಿನ 2,99,299 ಮಂದಿ ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. ಕರ್ನಾಟಕ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ರಾಜಸ್ಥಾನದಲ್ಲಿ ಶೇ.79ರಷ್ಟು ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

More Than 23 Lakh Health Workers Are Vaccinated In 12Th Days At India

ಅತಿಹೆಚ್ಚು ಫಲಾನುಭವಿಗಳಿಗೆ ಲಸಿಕೆ ನೀಡಿದ ಟಾಪ್-5 ರಾಜ್ಯಗಳು:

ರಾಜ್ಯ - ಲಸಿಕೆ ಹಾಕಿಸಿಕೊಂಡ ಫಲಾನುಭವಿಗಳು

ರಾಜಸ್ಥಾನ - 71,632 ಮಂದಿ

ಮಧ್ಯಪ್ರದೇಶ - 60,194 ಮಂದಿ

ಮಹಾರಾಷ್ಟ್ರ - 37575 ಮಂದಿ

ಪಶ್ಚಿಮ ಬಂಗಾಳ - 33,263 ಮಂದಿ

ಕರ್ನಾಟಕ - 33,124 ಮಂದಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+