• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಭಾರತದ 10 ಜಿಲ್ಲೆಗಳಲ್ಲೇ ಶೇ.25ರಷ್ಟು ಕೊರೊನಾ ಸಕ್ರಿಯ ಪ್ರಕರಣ

|

ನವದೆಹಲಿ, ಮೇ 07: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಅಟ್ಟಹಾಸ ನಿಯಂತ್ರಣವನ್ನೂ ಮೀರಿ ಹರಡುತ್ತಿದೆ. ನಿರಂತರವಾಗಿ ಎರಡನೇ ದಿನವೂ ದೇಶದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 4 ಲಕ್ಷದ ಗಡಿ ದಾಟಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,14,188 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿದ್ದು, ಒಂದೇ ದಿನ 3,915 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದೇ ಅವಧಿಯಲ್ಲಿ 3,31,507 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಮೊದಲು ಓದಿ: ಭಾರತದಲ್ಲಿ 2 ಮುಗೀತು, ಕೊರೊನಾ 3ನೇ ಅಲೆ ಹೇಗಿರುತ್ತೆ?ಮೊದಲು ಓದಿ: ಭಾರತದಲ್ಲಿ 2 ಮುಗೀತು, ಕೊರೊನಾ 3ನೇ ಅಲೆ ಹೇಗಿರುತ್ತೆ?

ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು 2,14,91,598 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 1,76,12,351 ಸೋಂಕಿತರು ಗುಣಮುಖರಾಗಿದ್ದು, 2,34,083 ಮಂದಿ ಪ್ರಾಣ ಬಿಟ್ಟಿದ್ದಾರೆ. ಉಳಿದಂತೆ 36,45,164 ಕೊವಿಡ್-19 ಸಕ್ರಿಯ ಪ್ರಕರಣಗಳು ವರದಿಯಾಗಿವೆ. ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಪೈಕಿ ಶೇ.25ರಷ್ಟು ಸಕ್ರಿಯ ಪ್ರಕರಣಗಳು ಕೇವಲ 10 ಜಿಲ್ಲೆಗಳಿಗೆ ಸೇರಿದ್ದು, ಈ ಪಟ್ಟಿಯಲ್ಲಿ ನಮ್ಮ ಬೆಂಗಳೂರು ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದೆ.

10 ಜಿಲ್ಲೆಗಳಲ್ಲೇ ಶೇ.25ರಷ್ಟು ಕೊರೊನಾವೈರಸ್ ಪ್ರಕರಣ:

ಭಾರತದಲ್ಲಿ ಒಟ್ಟು 36,45,164 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ದೃಢಪಟ್ಟಿವೆ. ಈ ಪೈಕಿ ಶೇ.25ರಷ್ಟು ಸಕ್ರಿಯ ಪ್ರಕರಣಗಳು ಕೇವಲ 10 ಜಿಲ್ಲೆಗಳಿಗೆ ಸೇರಿರುವುದು ಅಂಕಿ-ಅಂಶಗಳ ಸಮೇತ ಸಾಬೀತಾಗಿದೆ. ಬೆಂಗಳೂರು ನಗರ ಅಗ್ರಸ್ಥಾನದಲ್ಲಿ ಗುರುತಿಸಿಕೊಂಡಿದ್ದು, ಶೇ.9.13ರಷ್ಟು ಸಕ್ರಿಯ ಪ್ರಕರಣಗಳನ್ನು ಹೊಂದಿದೆ. ಪುಣೆ, ದೆಹಲಿ, ಅಹ್ಮದಾಬಾದ್, ಎರ್ನಾಕುಲಂ, ನಾಗ್ಪುರ್, ಮುಂಬೈ, ಕೋಲ್ಕತ್ತಾ, ಜೈಪುರ್ ಮತ್ತು ಠಾಣೆ ನಂತರದ ಸ್ಥಾನದಲ್ಲಿ ಗುರುತಿಸಿಕೊಂಡಿವೆ.

English summary
More Than 25 Per cent Covid-19 Active Cases Reported In 10 Districts; Bengaluru In First Place.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X