ಭಾರತದಲ್ಲಿ ಒಂದೇ ದಿನ 4.91 ಲಕ್ಷ ಜನರಿಗೆ ಕೊವಿಡ್-19 ಲಸಿಕೆ!
ನವದೆಹಲಿ, ಜನವರಿ.28: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ಅಭಿಯಾನವ್ನು ಕ್ಷಿಪ್ರಗತಿಯಲ್ಲಿ ನಡೆಸಲಾಗುತ್ತಿದೆ. ಮೊದಲ ಹಂತದಲ್ಲಿ ಪ್ರತಿನಿತ್ಯ ಲಕ್ಷಾಂತರ ಜನರಿಗೆ ಕೊವಿಡ್-19 ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದೆ.
ಗುರುವಾರದ ಅಂಕಿ-ಅಂಶಗಳ ಪ್ರಕಾರ, 28,47,608 ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ.
ರಾಷ್ಟ್ರವ್ಯಾಪಿ ಕೊವಿಡ್-19 ಲಸಿಕೆ ವಿತರಣೆಯ 13ನೇ ದಿನ 9,994 ಲಸಿಕೆ ವಿತರಣೆ ಕೇಂದ್ರಗಳ ಮೂಲಕ 4,91,615 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಯಿತು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಅತಿಹೆಚ್ಚು ಫಲಾನುಭವಿಗಳಿಗೆ ಲಸಿಕೆ ನೀಡಿದ ಟಾಪ್-5 ರಾಜ್ಯಗಳು:
ರಾಜ್ಯ - ಲಸಿಕೆ ಹಾಕಿಸಿಕೊಂಡ ಫಲಾನುಭವಿಗಳು
ಕರ್ನಾಟಕ - 2,84,979 ಮಂದಿ
ಉತ್ತರ ಪ್ರದೇಶ - 2,77,608
ರಾಜಸ್ಥಾನ - 2,44,204
ಮಹಾರಾಷ್ಟ್ರ - 2,18,030
ಒಡಿಶಾ - 1,94,058












Click it and Unblock the Notifications