ಭಾರತದಲ್ಲಿ 3/4ರಷ್ಟು ಮಂದಿ ಕೊರೊನಾ ಸೋಂಕಿನಿಂದ ಗುಣಮುಖ

ನವದೆಹಲಿ, ಸೆಪ್ಟೆಂಬರ್ 12: ಭಾರತದಲ್ಲಿ 3/4 ರಷ್ಟು ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

ಭಾರತದಲ್ಲಿ ಒಟ್ಟಾರೆ 46,59,985 ಸೋಂಕಿತರ ಪೈಕಿ ಶೇ.77.65ರಷ್ಟು ಜನರು ಕೊರೋನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.

ಕೇಂದ್ರ ಸರ್ಕಾರ ನೇತೃತ್ವದ ಕೊರೋನಾ ನಿರ್ವಹಣಾ ತಂತ್ರಗಳು ವ್ಯಾಪಕವಾಗಿದ್ದು, ಆಕ್ರಮಣಕಾರಿ ಪರೀಕ್ಷೆಯ ಮೂಲಕ ಆರಂಭಿಕ ಹಂತದಲ್ಲಿಯೇ ಸೋಂಕು ಪ್ರಕರಣಗಳನ್ನು ಪತ್ತೆಹಚ್ಚಲಾಗುತ್ತಿದೆ.

More Than 3/4th Covid-19 Patients Have Recovered, Discharged In India

ಆಸ್ಪತ್ರೆಗಳಲ್ಲಿನ ಗುಣಮಟ್ಟದ ಹಾಗೂ ಪರಿಣಾಮಕಾರಿ ಚಿಕಿತ್ಸೆ ಮತ್ತು ಐಸೋಲೇಷನ್ ವ್ಯವಸ್ಥೆಗಳು ದೇಶದಲ್ಲಿ ಮರಣ ಪ್ರಮಾಣವನ್ನು ಕಡಿಮೆ ಮಾಡುತ್ತಿವೆ ಎಂದು ಸಚಿವಾಲಯ ತಿಳಿಸಿದೆ.

ಚೇತರಿಸಿಕೊಂಡ ಪ್ರಕರಣಗಳ ಶೇಕಡಾವಾರು ಮತ್ತು ಸಕ್ರಿಯ ಪ್ರಕರಣಗಳ ಶೇಕಡಾವಾರು ನಡುವಿನ ಅಂತರವು ಕ್ರಮೇಣ ಹೆಚ್ಚಾಗುತ್ತಲೇ ಇದ್ದು. ದೇಶದಲ್ಲಿ 3/4 ರಷ್ಟು ಜನರು ಸೋಂಕಿನಿಂದ ಗುಣಮುಖರಾಗಿ, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರಂದು ತಿಳಿಸಿದೆ.

ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ನೀಡಿರುವ ಆರೋಗ್ಯ ಸಚಿವಾಲಯ, ಭಾರತದಲ್ಲಿ 3/4 ರಷ್ಟು ಜನರು ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿ ಒಟ್ಟಾರೆ ಚೇತರಿಕೆ ಪ್ರಮಾಣ ಶೇ.77.65ರಷ್ಟಿದೆ ಎಂದು ತಿಳಿಸಿದೆ. ಇದರೊಂದಿಗೆ ಸಕ್ರಿಯ ಪ್ರಕರಣಶ ಶೇಕಡಾವಾರು ಶೇ.20.7ಕ್ಕೆ ತಲುಪಿದೆ ಎಂದು ತಿಳಿದುಬಂದಿದೆ.

ಭಾರತದಲ್ಲಿ ಹೊಸದಾಗಿ 97,570 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಒಂದೇ ದಿನ 1201 ಮಂದಿ ಸಾವನ್ನಪ್ಪಿದ್ದಾರೆ.ಒಟ್ಟು 46,59,985 ಕೊರೊನಾ ಸೋಂಕಿತರಿದ್ದಾರೆ. 9,58,316 ಸಕ್ರಿಯ ಪ್ರಕರಣಗಳಿವೆ.36,24,197 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೂ 77,472 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

Recommended Video

      ಇದೆ ಕಾರಣಕ್ಕೆ Randeep Surjewalaಗೆ ಕರ್ನಾಟಕ ಉಸ್ತುವಾರಿ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+