ಭಾರತ: 14 ದಿನಗಳಲ್ಲಿ 33 ಲಕ್ಷಕ್ಕೂ ಹೆಚ್ಚು ಮಂದಿಗೆ ಕೊರೊನಾ ಲಸಿಕೆ
ನವದೆಹಲಿ, ಜನವರಿ.29: ಭಾರತದಲ್ಲಿ ಒಂದು ಕಡೆ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಇನ್ನೊಂದು ಕಡೆಯಲ್ಲಿ ಪ್ರತಿನಿತ್ಯ ಕೊವಿಡ್-19 ಲಸಿಕೆ ಪಡೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ.
ಕಳೆದ ಜನವರಿ.16ರಂದು ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊವಿಡ್-19 ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಅಂದಿನಿಂದ ಇಂದಿನವರೆಗೂ ಅಂದರೆ 14 ದಿನಗಳಲ್ಲಿ 33 ಲಕ್ಷಕ್ಕಿಂತ ಹೆಚ್ಚು ಮಂದಿಗೆ ಲಸಿಕೆಯನ್ನು ನೀಡಲಾಗಿದೆ.
ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, 33,68,734 ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ. ರಾಷ್ಟ್ರವ್ಯಾಪಿ ಕೊವಿಡ್-19 ಲಸಿಕೆ ವಿತರಣೆಯ 13ನೇ ದಿನ 10,061 ಲಸಿಕೆ ವಿತರಣೆ ಕೇಂದ್ರಗಳ ಮೂಲಕ 4,40,681 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಯಿತು ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಅತಿಹೆಚ್ಚು ಫಲಾನುಭವಿಗಳಿಗೆ ಲಸಿಕೆ ನೀಡಿದ ಟಾಪ್-5 ರಾಜ್ಯಗಳು:
ರಾಜ್ಯ - ಲಸಿಕೆ ಹಾಕಿಸಿಕೊಂಡ ಫಲಾನುಭವಿಗಳು
ಉತ್ತರ ಪ್ರದೇಶ - 4,31,879
ಕರ್ನಾಟಕ - 3,07,752
ರಾಜಸ್ಥಾನ - 2,73,866
ಮಹಾರಾಷ್ಟ್ರ - 2,57,173
ಮಧ್ಯಪ್ರದೇಶ - 2,22,193.












Click it and Unblock the Notifications