ಭಾರತದಲ್ಲಿ ಅತಿಹೆಚ್ಚು ಲಸಿಕೆ ವಿತರಿಸಿದ ಟಾಪ್-5 ರಾಜ್ಯಗಳು
ನವದೆಹಲಿ, ಫೆಬ್ರವರಿ.03: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ಪ್ರಮಾಣ ಇಳಿಮುಖವಾಗುತ್ತಿದೆ. ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ಇನ್ನೊಂದು ಕಡೆ ಕ್ಷಿಪ್ರಗತಿಯಲ್ಲಿ ನಡೆಸಲಾಗುತ್ತಿದೆ. ದೇಶದಲ್ಲಿ ಇದುವರೆಗೂ 41 ಲಕ್ಷಕ್ಕಿಂತ ಹೆಚ್ಚು ಮಂದಿ ಆರೋಗ್ಯ ಕಾರ್ಯಕರ್ತರು ಮತ್ತು ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ.
ಜನವರಿ.16ರಂದು ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊವಿಡ್-19 ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಅಂದಿನಿಂದ ಇಂದಿನವರೆಗೂ 41,20,741 ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಯಿತು.
ಪಶ್ಚಿಮ ಬಂಗಾಳ ಮತ್ತು ಗುಜರಾತ್ ನಲ್ಲಿ ಮುಂಚೂಣಿ ಕಾರ್ಯಕರ್ತರಿಗೂ ಕೊವಿಡ್-19 ಲಸಿಕೆಯ ನೀಡಲಾಯಿತು. ಮಂಗಳವಾರ ರಾತ್ರಿ 7 ಗಂಟೆ ವೇಳೆಗೆ 19,902 ಮುಂಚೂಣಿ ಕಾರ್ಮಿಕರು ಕೊರೊನಾವೈರಸ್ ಲಸಿಕೆ ಹಾಕಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಅತಿಹೆಚ್ಚು ಫಲಾನುಭವಿಗಳಿಗೆ ಲಸಿಕೆ ನೀಡಿದ ಟಾಪ್-5 ರಾಜ್ಯಗಳು:
ರಾಜ್ಯ - ಲಸಿಕೆ ಹಾಕಿಸಿಕೊಂಡ ಫಲಾನುಭವಿಗಳು
ಉತ್ತರ ಪ್ರದೇಶ - 4,63,793
ರಾಜಸ್ಥಾನ - 3,38,960
ಮಹಾರಾಷ್ಟ್ರ - 3,18,735
ಕರ್ನಾಟಕ - 3,16,368
ಮಧ್ಯಪ್ರದೇಶ - 2,98,376












Click it and Unblock the Notifications