ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅತಿ ಹೆಚ್ಚು ಕೊರೊನಾ ಲಸಿಕೆ ವ್ಯರ್ಥವಾಗಿರುವುದು ಯಾವ ರಾಜ್ಯದಲ್ಲಿ?

|
Google Oneindia Kannada News

ನವದೆಹಲಿ, ಏಪ್ರಿಲ್ 20: ಭಾರತದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿದ್ದು, ಲಸಿಕಾ ಅಭಿಯಾನವನ್ನು ಚುರುಕುಗೊಳಿಸಲಾಗಿದೆ. ದೇಶದ ಎಲ್ಲಾ ರಾಜ್ಯಗಳಿಗೆ ಕೊರೊನಾ ಲಸಿಕೆಗಳನ್ನು ಹೆಚ್ಚಿನ ಮಟ್ಟದಲ್ಲಿ ಪೂರೈಸುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ.

ಇದಾಗ್ಯೂ ಕೆಲವು ರಾಜ್ಯಗಳಲ್ಲಿ ಕೊರೊನಾ ಲಸಿಕೆಗಳ ಅಭಾವ ಉಂಟಾಗಿದೆ. ಮತ್ತೊಂದೆಡೆ ಹಲವು ರಾಜ್ಯಗಳಲ್ಲಿ ಕೊರೊನಾ ಲಸಿಕೆ ವ್ಯರ್ಥವಾಗುತ್ತಿರುವ ಸಂಗತಿ ಬೆಳಕಿಗೆ ಬಂದಿದೆ.

18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ಪ್ರಮುಖಾಂಶಗಳು 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ಪ್ರಮುಖಾಂಶಗಳು

ದೇಶದಲ್ಲಿ ಏಪ್ರಿಲ್ 11ರವರೆಗೂ ಹತ್ತು ಕೋಟಿ ಡೋಸ್ ಲಸಿಕೆಯನ್ನು ಜನರಿಗೆ ನೀಡಲಾಗಿದ್ದು, ಇಲ್ಲಿಯವರೆಗೂ ಸುಮಾರು 44 ಲಕ್ಷ ಡೋಸ್‌ಗಳ ಲಸಿಕೆಯನ್ನು ವ್ಯರ್ಥ ಮಾಡಿರುವುದಾಗಿ ತಿಳಿದುಬಂದಿದೆ.

More Than 44 Lakh Corona Vaccin Doses Wasted In Country

ಮಾಹಿತಿ ಹಕ್ಕು ಕಾಯ್ದೆಯಡಿ, ಭಾರತದಲ್ಲಿ ಇದುವರೆಗೂ ಎಷ್ಟು ಕೊರೊನಾ ಲಸಿಕೆಗಳು ವ್ಯರ್ಥವಾಗಿವೆ ಎಂಬುದರ ಕುರಿತು ವ್ಯಕ್ತಿಯೊಬ್ಬರು ಮಾಹಿತಿ ಕೋರಿದ್ದು, ಅದಕ್ಕೆ ಕೇಂದ್ರ ಸರ್ಕಾರ ಉತ್ತರಿಸಿದೆ.

ಕೊರೊನಾ ಲಸಿಕೆಯನ್ನು ವ್ಯರ್ಥ ಮಾಡುವುದರಲ್ಲಿ ತಮಿಳುನಾಡು ಮೊದಲ ರಾಜ್ಯ ಎನಿಸಿಕೊಂಡಿದೆ. ತಮಿಳುನಾಡಿನಲ್ಲಿ ಇದುವರೆಗೂ 12.10% ಡೋಸ್ ಲಸಿಕೆ ವ್ಯರ್ಥವಾಗಿದೆ. ಹರಿಯಾಣ ಎರಡನೇ ಸ್ಥಾನದಲ್ಲಿದ್ದು, 9.74% ಲಸಿಕೆ ವ್ಯರ್ಥವಾಗಿದೆ. ಪಂಜಾಬ್‌ನಲ್ಲಿ 8.12, ಮಣಿಪುರದಲ್ಲಿ 7.8% ಹಾಗೂ ತೆಲಂಗಾಣ ಐದನೇ ಸ್ಥಾನದಲ್ಲಿದ್ದು, 7.55 % ಲಸಿಕೆ ವ್ಯರ್ಥವಾಗಿರುವುದಾಗಿ ತಿಳಿದುಬಂದಿದೆ.

ಕೇರಳ, ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶ, ಮಿಜೋರಾಂ, ಗೋವಾ, ಅಂಡಮಾನ್ ನಿಕೋಬಾರ್ ಹಾಗೂ ಲಕ್ಷದದ್ವೀಪದಲ್ಲಿ ಕೊರೊನಾ ಲಸಿಕೆಗಳು ವ್ಯರ್ಥವಾಗುವ ಪ್ರಮಾಣ ಕಡಿಮೆಯಿದೆ.

ಭಾರತದಲ್ಲಿ ಜನವರಿ 16ರಿಂದ ಲಸಿಕಾ ಅಭಿಯಾನವನ್ನು ಆರಂಭಿಸಲಾಗಿದೆ.

English summary
vaccinations are being wasted on a large scale in many states. It is reported that when 10 crore doses of vaccines are given to the people by the 11th of this month, more than 44 lakh doses have been wasted,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X