ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ಲಸಿಕೆ ವಿತರಣೆಯಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ ಭಾರತ

|
Google Oneindia Kannada News

ನವದೆಹಲಿ, ಮಾರ್ಚ್ 24: ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಭಾರತವು ಹೊಸ ಮೈಲಿಗಲ್ಲು ಸ್ಥಾಪಿಸಿದೆ. ದೇಶದಲ್ಲಿ 5 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ.

ದೇಶಾದ್ಯಂತ ಒಂದೇ ದಿನದಲ್ಲಿ 15 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯನ್ನು ನೀಡಲಾಗಿದೆ. ಮಂಗಳವಾರ ಸಂಜೆ 7 ಗಂಟೆ ವೇಳೆಗೆ ದೇಶದಲ್ಲಿ 15.80 ಲಕ್ಷ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ಉಚಿತ45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ಉಚಿತ

ಭಾರತದಲ್ಲಿ 66 ದಿನಗಳಲ್ಲಿ 5,00,75,162 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. 79,03,068 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 50,09,252 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 83,33,713 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 30,60,060 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

More Than 5 Crore Beneficiaries Got Vaccinated Against Coronavirus Across India

ಭಾರತದಲ್ಲಿ ಎರಡು ಮಾದರಿ ಲಸಿಕೆ:

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಕಳೆದ ಜನವರಿ 16ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮೊದಲು ಕೊರೊನಾವೈರಸ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದರು. ಅಂದು ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ವಿತರಿಸಲು ಆರಂಭಿಸಲಾಗಿತ್ತು. ಫೆಬ್ರವರಿ 2ರಿಂದ ಎರಡನೇ ಡೋಸ್ ಲಸಿಕೆಯ ವಿತರಣೆ ಕಾರ್ಯಾರಂಭ ಮಾಡಲಾಗಿತ್ತು.

ಎರಡನೇ ಹಂತದ ಲಸಿಕೆ ಅಭಿಯಾನ:

ಎರಡನೇ ಹಂತದ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಮಾರ್ಚ್ 1ರಿಂದ ಆರಂಭವಾಗಿದ್ದು, ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 45,65,369 ಜನರಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. 60 ವರ್ಷಕ್ಕಿಂತ ಮೇಲ್ಪಟ್ಟ 2,12,03,700 ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.

24 ಗಂಟೆಗಳಲ್ಲಿ ಯಾರಿಗೆ ಎಷ್ಟು ಲಸಿಕೆ?:

ಮೊದಲ ಡೋಸ್ - 2ನೇ ಡೋಸ್

ಆರೋಗ್ಯ ಕಾರ್ಯಕರ್ತರು - 43,489 - 49,288

ಮೊದಲ ಶ್ರೇಣಿ ಕಾರ್ಮಿಕರು - 91,586 - 1,56,583

45 ರಿಂದ 60 ವರ್ಷದೊಳಗಿನವರು - 2,67,059 - -

60 ವರ್ಷ ಮೇಲ್ಪಟ್ಟವರು - 9,72,563 - -

ಒಟ್ಟು ಕೊರೊನಾವೈರಸ್ ಲಸಿಕೆ - 13,74,697 - 2,05,871

English summary
More Than 5 Crore Beneficiaries Got Vaccinated Against Coronavirus Across India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X