ಭಾರತದಲ್ಲಿ 3.30 ಲಕ್ಷ ಮಂದಿಗೆ ಕೊರೊನಾವೈರಸ್ ಅಂಟಿದರೂ ಡೋಂಟ್ ವರಿ!

ನವದೆಹಲಿ, ಜೂನ್.14: ನೊವೆಲ್ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೆ ಏರಿಕೆಯಾಗುತ್ತಲೇ ಸಾಗಿದೆ. ಜಾಗತಿಕ ಮಟ್ಟದಲ್ಲಿ ಭಾರತವು ಅತಿಹೆಚ್ಚು ಸೋಂಕಿತರನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ.

ಕಳೆದ 24 ಗಂಟೆಗಳಲ್ಲಿ ಅತಿಹೆಚ್ಚು ಅಂದರೆ 11,929 ಕೊರೊನಾ ವೈರಸ್ ಸೋಂಕಿತಲ ಪ್ರಕರಣಗಳು ಪತ್ತೆಯಾಗಿವೆ. ಹೀಗಿದ್ದರೂ ಭಾರತೀಯರು ಯಾವುದೇ ರೀತಿ ಆತಂಕಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರವು ಹೇಳುತ್ತಿದೆ.

ಭಾರತದಲ್ಲಿ ಕೊರೊನಾ ವೈರಸ್ ನಿಂದ ಮೃತಪಟ್ಟವರಿಗಿಂತಲೂ ಗುಣಮುಖರಾದವರ ಸಂಖ್ಯೆಯೇ ಹೆಚ್ಚಾಗಿದೆ. ಇದು ಕೊಂಚ ನಿಟ್ಟುಸಿರು ಬಿಡುವಂತಾ ವಿಚಾರವಾಗಿದ್ದು, ದೇಶದ ಕೊರೊನಾವೈರಸ್ ಸೋಂಕಿತರಲ್ಲಿ ಶೇ.50.60ರಷ್ಟು ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ಒಂದೇ ದಿನ ದೇಶದಲ್ಲಿ ಕೊರೊನಾವೈರಸ್ ನಿಂದ 311 ಬಲಿ

ಒಂದೇ ದಿನ ದೇಶದಲ್ಲಿ ಕೊರೊನಾವೈರಸ್ ನಿಂದ 311 ಬಲಿ

ಭಾರತದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆಯು ಎರಡನೇ ಬಾರಿ 24 ಗಂಟೆಗಳಲ್ಲೇ 11,000ದ ಗಡಿ ದಾಟಿದೆ. ಶನಿವಾರ ಒಂದೇ ದಿನ 11,929 ಜನರಿಗೆ ಕೊವಿಡ್-19 ಸೋಂಕು ಪತ್ತೆಯಾಗಿದ್ದು, ದೇಶದಲ್ಲಿ ಮಹಾಮಾರಿಗೆ 311 ಜನರು ಪ್ರಾಣ ಬಿಟ್ಟಿದ್ದಾರೆ.

ಭಾರತದಲ್ಲಿ ಶೇ.50ಕ್ಕಿಂತಲೂ ಅಧಿಕ ಸೋಂಕಿತರು ಗುಣಮುಖ

ಭಾರತದಲ್ಲಿ ಶೇ.50ಕ್ಕಿಂತಲೂ ಅಧಿಕ ಸೋಂಕಿತರು ಗುಣಮುಖ

ನೊವೆಲ್ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಏರಿಕೆಗಿಂತಲೂ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ ಏರಿಕೆಯಾಗುತ್ತಿದೆ. ಭಾರತದಲ್ಲಿ ಇದುವರೆಗೂ 1,62,378ಕ್ಕೂ ಅಧಿಕ ಸೋಂಕಿತರು ಗುಣಮುಖರಾಗಿದ್ದಾರೆ. 1,49,348ಕ್ಕೂ ಅಧಿಕ ಸೋಂಕಿತರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ತಿಳಿಸಿದೆ.

ಒಂದೇ ದಿನ 1,51,432 ಜನರಿಗೆ ಕೊವಿಡ್-19 ತಪಾಸಣೆ

ಒಂದೇ ದಿನ 1,51,432 ಜನರಿಗೆ ಕೊವಿಡ್-19 ತಪಾಸಣೆ

ಭಾರತದಲ್ಲಿ ಶನಿವಾರ ಒಂದೇ ದಿನ 1,51,432 ಜನರಿಗೆ ಕೊರೊನಾ ವೈರಸ್ ವೈದ್ಯಕೀಯ ತಪಾಸಣೆ ನಡೆಸಲಾಯಿತು. ದೇಶದಲ್ಲಿ ಇದುವರೆಗೂ 56,58,614ಕ್ಕೂ ಅಧಿಕ ಜನರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಒಂದೇ ವಾರದಲ್ಲಿ 2,000 ಜನರು ಕೊರೊನಾವೈರಸ್ ಗೆ ಬಲಿ

ಒಂದೇ ವಾರದಲ್ಲಿ 2,000 ಜನರು ಕೊರೊನಾವೈರಸ್ ಗೆ ಬಲಿ

ಕಳೆದ ಒಂದು ವಾರದಲ್ಲಿ ಕೊರೊನಾ ವೈರಸ್ ನಿಂದಾಗಿ ದೇಶದ ಚಿತ್ರಣವೇ ಬದಲಾಗಿದೆ. ಮಹಾರಾಷ್ಟ್ರ, ನವದೆಹಲಿ, ತಮಿಳುನಾಡು, ಗುಜರಾತ್ ನಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಏಳು ದಿನಗಳಲ್ಲಿ 70,000 ಮಂದಿಗೆ ಕೊರೊನಾ ವೈರಸ್ ಸೋಂಕು ತಗಲಿದ್ದು, 2,000ಕ್ಕೂ ಅಧಿಕ ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ಅಂಕಿ-ಅಂಶಗಳಿಂದ ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+