ಭಾರತ: 13 ದಿನಗಳಲ್ಲಿ 10 ಕೋಟಿ ಮಂದಿಗೆ ಕೊರೊನಾವೈರಸ್ ಲಸಿಕೆ

ನವದೆಹಲಿ, ಸಪ್ಟೆಂಬರ್ 7: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆಯ ಭೀತಿ ನಡುವೆ ಭಾರತವು ಲಸಿಕೆ ವಿತರಣೆಯಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ದೇಶದಲ್ಲಿ ಈವರೆಗೂ 70 ಕೋಟಿಗೂ ಅಧಿಕ ಡೋಸ್ ಲಸಿಕೆ ವಿತರಿಸಲಾಗಿದೆ.

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 235 ದಿನಗಳಾಗಿದೆ. ಕಳೆದ 9 ರಿಂದ 10 ಗಂಟೆಗಳಲ್ಲಿ 67 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಮಂಗಳವಾರ ರಾತ್ರಿ 7 ಗಂಟೆ ವೇಳೆಗೆ 67,43,698 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಈ ಪೈಕಿ 44,74,810 ಮಂದಿಗೆ ಮೊದಲ ಡೋಸ್ ಹಾಗೂ 22,68,888 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ.

ಕಳೆದ 13 ದಿನಗಳಲ್ಲೇ 10 ಕೋಟಿ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ಸುಖ್ ಮಾಂಡವೀಯಾ ತಿಳಿಸಿದ್ದಾರೆ. ಭಾರತದಲ್ಲಿ ಈವರೆಗೂ 70,63,55,796 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೂ 69,51,79,965 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

More Than 70 Crore Beneficiaries Got Vaccinated Against Coronavirus Across India

ಯಾವ ಹಂತದವರಿಗೆ ಎಷ್ಟು ಲಸಿಕೆ ವಿತರಣೆ?:

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,61,604 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 85,17,232 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,32,425 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,37,16,515 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೂ 53,96,20,217 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 16,67,35,579 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ನಾಲ್ಕು ಹಂತದಲ್ಲಿ ಕೊರೊನಾವೈರಸ್ ಲಸಿಕೆ

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿತ್ತು.

ಕೊವಿಡ್-19 ಲಸಿಕೆ ಪೂರೈಕೆ ಆಗಿದ್ದೆಷ್ಟು, ಬಳಸಿದ್ದೆಷ್ಟು?

2021ರ ಸೆಪ್ಟೆಂಬರ್ 7ರ ಅಂಕಿ-ಅಂಶಗಳ ಪ್ರಕಾರ, 69,51,79,965 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

* ಪೂರೈಕೆಯಾದ ಲಸಿಕೆ ಪ್ರಮಾಣ - 69,51,79,965

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 77,93,360

* ಕೊವಿಡ್-19 ಲಸಿಕೆಯ ಲಭ್ಯತೆ - 5,31,15,610

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+