ಭಾರತದಲ್ಲಿ 31 ದಿನದಲ್ಲಿ 87 ಲಕ್ಷ ಫಲಾನುಭವಿಗಳಿಗೆ ಕೊರೊನಾ ಲಸಿಕೆ

ನವದೆಹಲಿ, ಫೆಬ್ರವರಿ.16: ಭಾರತದಲ್ಲಿ ಕೊರೊನಾವೈರಸ್ ಸೋಂಕಿತರಿಗೆ ಲಸಿಕೆ ನೀಡುವ ಪ್ರಕ್ರಿಯೆಗೆ ವೇಗ ನೀಡಲಾಗುತ್ತಿದೆ. ಕಳೆದ 31 ದಿನಗಳಲ್ಲಿ 87 ಲಕ್ಷಕ್ಕೂ ಅಧಿಕ ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕಳೆದ 31 ದಿನಗಳಲ್ಲಿ ದೇಶಾದ್ಯಂತ ಇದುವರೆಗೂ 87,20,822 ವೈದ್ಯಕೀಯ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು, ಪೊಲೀಸರು, ಜಿಲ್ಲಾಧಿಕಾರಿ ಸೇರಿದಂತೆ ಸರ್ಕಾರದ ಪ್ರಮುಖ ವಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಎರಡನೇ ಹಂತದ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ನಡೆಯುತ್ತಿದೆ. ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಮತ್ತು ಆಸ್ತ್ರಾಜೆನಿಕ್ ಸಂಶೋಧಿಸಿದ ಹಾಗೂ ಪುಣೆಯ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

More Than 87 Lakh Beneficiaries Got Vaccinated Against Coronavirus Across India

ಅತಿಹೆಚ್ಚು ಲಸಿಕೆ ನೀಡಿದ ಟಾಪ್-5 ರಾಜ್ಯಗಳು:

ರಾಜ್ಯ - ಲಸಿಕೆ ಹಾಕಿಸಿಕೊಂಡ ಫಲಾನುಭವಿಗಳು

ಉತ್ತರ ಪ್ರದೇಶ - 9,34,962

ಮಹಾರಾಷ್ಟ್ರ - 7,13,133

ಗುಜರಾತ್ - 6,99,352

ರಾಜಸ್ಥಾನ - 6,27,710

ಮಧ್ಯಪ್ರದೇಶ - 5,75,728

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+