ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತ: 34 ದಿನಗಳಲ್ಲೇ 98 ಲಕ್ಷ ಜನರಿಗೆ ಕೊರೊನಾ ಲಸಿಕೆ!

|
Google Oneindia Kannada News

ನವದೆಹಲಿ, ಫೆಬ್ರವರಿ.18: ಜಗತ್ತಿನಲ್ಲಿ ಅತಿಹೆಚ್ಚು ಜನರಿಗೆ ಕೊರೊನಾವೈರಸ್ ಲಸಿಕೆ ನೀಡಿದ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವು ಈಗಾಗಲೇ ಮೂರನೇ ಸ್ಥಾನದಲ್ಲಿ ಗುರುತಿಸಿಕೊಂಡಿದೆ. ಕಳೆದ 34 ದಿನಗಳಲ್ಲಿ ದೇಶದ 98 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಕಳೆದ 34 ದಿನಗಳಲ್ಲಿ ದೇಶಾದ್ಯಂತ ಇದುವರೆಗೂ 98,46,523 ವೈದ್ಯಕೀಯ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು, ಪೊಲೀಸರು, ಜಿಲ್ಲಾಧಿಕಾರಿ ಸೇರಿದಂತೆ ಸರ್ಕಾರದ ಪ್ರಮುಖ ವಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಲಸಿಕೆ ನೀಡಲಾಗಿದೆ.

ಕೊರೊನಾ ಲಸಿಕೆ ವಿತರಣೆಯಲ್ಲಿ ಭಾರತಕ್ಕೆ 3ನೇ ಸ್ಥಾನ!ಕೊರೊನಾ ಲಸಿಕೆ ವಿತರಣೆಯಲ್ಲಿ ಭಾರತಕ್ಕೆ 3ನೇ ಸ್ಥಾನ!

ದೇಶದಲ್ಲಿ ಎರಡನೇ ಹಂತದ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ನಡೆಯುತ್ತಿದೆ. ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಮತ್ತು ಆಸ್ತ್ರಾಜೆನಿಕ್ ಸಂಶೋಧಿಸಿದ ಹಾಗೂ ಪುಣೆಯ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

 More Than 98 Lakh Beneficiaries Got Vaccinated Against Coronavirus Across India

ಅತಿಹೆಚ್ಚು ಲಸಿಕೆ ನೀಡಿದ ಟಾಪ್-5 ರಾಜ್ಯಗಳು:

ರಾಜ್ಯ - ಲಸಿಕೆ ಹಾಕಿಸಿಕೊಂಡ ಫಲಾನುಭವಿಗಳು

ಉತ್ತರ ಪ್ರದೇಶ - 10,23,988

ಮಹಾರಾಷ್ಟ್ರ - 8,05,514

ಗುಜರಾತ್ - 8,31,739

ರಾಜಸ್ಥಾನ - 7,62,602

ಮಧ್ಯಪ್ರದೇಶ - 6,05,399

English summary
More Than 98 Lakh Beneficiaries Got Vaccinated Against Coronavirus Across India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X