ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಹುಲ್ ಗಾಂಧಿ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ

|
Google Oneindia Kannada News

ನವದೆಹಲಿ, ಜುಲೈ 03: ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನೀಡಿದ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ, ಅಂಗೀಕಾರವಾಗುವವರೆಗೂ ಅವರೇ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಹೇಳಿದೆ.

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ ಕೊಟ್ಟಿರುವ ಕಾರಣ, ಎಐಸಿಸಿಯ ಹಂಗಾಮಿ ಅಧ್ಯಕ್ಷರಾಗಿ ಮೋತಿಲಾಲ್ ವೊಹ್ರಾ ಅವರನ್ನು ನೇಮಿಸುವ ಸಾಧ್ಯತೆ ಇದೆ ಎನ್ನಲಾಗಿತ್ತು ಆದರೆ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಇದನ್ನು ತಳ್ಳಿ ಹಾಕಿದೆ.

90 ವರ್ಷ ವಯಸ್ಸಿನ ಮೋತಿಲಾಲ್ ವೊಹ್ರಾ ಅವರು ಹಿರಿಯ ಕಾಂಗ್ರೆಸ್ಸಿಗರಾಗಿದ್ದು, ಗಾಂಧಿ ಕುಟುಂಬಕ್ಕೆ ಮುಂಚಿನಿಂದಲೂ ಆಪ್ತರಾಗಿದ್ದಾರೆ ಮತ್ತು ಅತ್ಯಂತ ಅನುಭವಿ ಮತ್ತು ಹಿರಿಯ ರಾಜಕಾರಣಿ ಸಹ ಆಗಿದ್ದಾರೆ, ಹಾಗಾಗಿ ಇವರನ್ನೇ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗುತ್ತದೆ ಎಂಬ ಸುದ್ದಿ ಹರಿಡಿತ್ತು.

ನಿಜವಾದ ಅಪಾಯ ಮುಂದಿದೆ: ವಿದಾಯದ ಪತ್ರದಲ್ಲಿ ರಾಹುಲ್ ಗಾಂಧಿ ಕಳವಳನಿಜವಾದ ಅಪಾಯ ಮುಂದಿದೆ: ವಿದಾಯದ ಪತ್ರದಲ್ಲಿ ರಾಹುಲ್ ಗಾಂಧಿ ಕಳವಳ

ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಯಾವುದೇ ಹಂಗಾಮಿ ಅಧ್ಯಕ್ಷರ ನೇಮಕ ಮಾಡಲಾಗುವುದಿಲ್ಲ, ಬದಲಿಗೆ ಹೊಸ ಅಧ್ಯಕ್ಷರ ಆಯ್ಕೆಯ ವರೆಗೆ ರಾಹುಲ್ ಗಾಂಧಿ ಅವರೇ ಅಧ್ಯಕ್ಷರಾಗಿ ಮುಂದುವರೆಯುತ್ತಾರೆ ಎಂದು ಹೇಳಿದೆ.

Motilal Vora appointed as AICC interim president

ರಾಹುಲ್ ಗಾಂಧಿ ಅವರು ಇಂದು ಅಧಿಕೃತವಾಗಿ ತಮ್ಮ ರಾಜೀನಾಮೆಯನ್ನು ಘೋಷಿಸಿದ್ದಾರೆ. ಅಲ್ಲದೆ, ಶೀಘ್ರವೇ ಹೊಸ ನಾಯಕನನ್ನು ಆಯ್ಕೆ ಮಾಡಿಕೊಳ್ಳುವಂತೆ ನಾಯಕರಿಗೆ ಸೂಚಿಸಿದ್ದಾರೆ.

ಇದು ಅಧಿಕೃತ! ರಾಹುಲ್ ಗಾಂಧಿ ಇನ್ನು ಕಾಂಗ್ರೆಸ್ ಅಧ್ಯಕ್ಷರಲ್ಲ! ಇದು ಅಧಿಕೃತ! ರಾಹುಲ್ ಗಾಂಧಿ ಇನ್ನು ಕಾಂಗ್ರೆಸ್ ಅಧ್ಯಕ್ಷರಲ್ಲ!

ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕಾ ಗಾಂಧಿ, ಸಚಿನ್ ಪೈಲಟ್, ವೇಣುಗೋಪಾಲ್, ರಣದೀಪ್ ಸುರ್ಜೇವಾಲಾ, ಜ್ಯೋತಿರಾದಿತ್ಯ ಶಿಂಧೆ ಇನ್ನೂ ಹಲವು ಹೆಸರುಗಳು ಪ್ರಸ್ತುತ ಚಾಲ್ತಿಯಲ್ಲಿವೆ.

English summary
Seniour congress man Motilal Vora will not be appointed as AICC's interim president. Rahul Gandhi twill continue as AICC president till new president appointed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X