• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಂಪಿ: ಬಸ್ಸಿಗಾಗಿ ಕಾಯುತ್ತಿದ್ದವರ ಮೇಲೆ ಹರಿದ ಟ್ರಕ್- 6 ಸಾವು, 12 ಮಂದಿಗೆ ಗಾಯ

|
Google Oneindia Kannada News

ರತ್ಲಾಮ್ ಡಿಸೆಂಬರ್ 4: ಬಸ್ಸಿಗಾಗಿ ಕಾಯುತ್ತಿದ್ದ ಜನರ ಮೇಲೆ ಟ್ರಕ್ ಹರಿದು 6 ಜನ ಸಾವನ್ನಪ್ಪಿದ್ದು 12 ಮಂದಿ ಗಾಯಗೊಂಡಿರುವ ದಾರುಣ ಘಟನೆ ಮಧ್ಯಪ್ರದೇಶದ ರತ್ಲಾಮ್ ಜಿಲ್ಲೆಯಲ್ಲಿ ಭಾನುವಾರ ಸಂಭವಿಸಿದೆ. ರತ್ಲಂ ಜಿಲ್ಲೆಯಿಂದ ಸುಮಾರು 35 ಕಿಮೀ ದೂರದಲ್ಲಿರುವ ರತ್ಲಾಮ್-ಲೆಬಾದ್ ರಸ್ತೆಯಲ್ಲಿರುವ ಸತ್ರುಂಡಾ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ.

ಟ್ರಕ್ ರತ್ಲಾಮ್‌ನಿಂದ ಬದ್ನಾವರ್‌ಗೆ ಪ್ರಯಾಣಿಸುತ್ತಿದ್ದಾಗ ಅದರ ಟೈರ್ ಒಡೆದು ಈ ಅಪಘಾತ ಸಂಭವಿಸಿದೆ. ಈ ವೇಳೆ ಟ್ರಕ್ ವೇಗವಾಗಿ ಚಲಿಸುತ್ತಿದ್ದು ಏಕಾಏಕಿ ಟೈರ್ ಒಡೆದ ಪರಿಣಾಮ ನಿಯಂತ್ರಣ ತಪ್ಪಿದೆ. ಶರವೇಗದಲ್ಲಿ ಬಂದ ಟ್ರಕ್ ರಸ್ತೆ ಬಳಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ಜನರ ಗುಂಪಿಗೆ ನುಗ್ಗಿದೆ.

ಅಪಘಾತದ ಸ್ಥಳದ ವಿಡಿಯೊ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಾನುವಾರ ರತ್ಲಾಮ್‌ನಲ್ಲಿ ಜನರ ಮೇಲೆ ಟ್ರಕ್ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

English summary
Six people were killed and 12 injured when a truck ran over people in Ratlam district of Madhya Pradesh on Sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X