ಮಧ್ಯಪ್ರದೇಶ: ಸಹೋದರಿಯರ ಮೇಲೆ ಲೈಂಗಿಕ ದೌರ್ಜನ್ಯ, ಬಿಜೆಪಿ ಮುಖಂಡನ ಪುತ್ರ ಆರೋಪಿ

ಭೋಪಾಲ್, ಜುಲೈ. 16: ಮಧ್ಯಪ್ರದೇಶದ ದತಿಯಾ ಜಿಲ್ಲೆಯಲ್ಲಿ ಯುವತಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಅಪ್ರಾಪ್ತ ಸಹೋದರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ನಾಲ್ವರು ಆರೋಪಿಗಳಲ್ಲಿ ಮಧ್ಯಪ್ರದೇಶ ಬಿಜೆಪಿ ನಾಯಕನ ಮಗ ಸೇರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸಂತ್ರಸ್ತರ ಸಂಬಂಧಿಕರು ಮತ್ತು ಸ್ಥಳೀಯರು ಕ್ರಮಕ್ಕಾಗಿ ಒತ್ತಾಯಿಸಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ.

ಈ ಘಟನೆ ನಂತರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರದೇಶವು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರ ತವರು ಕ್ಷೇತ್ರವಾಗಿದೆ. ಅವರು ದತಿಯಾ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ. ಸಂತ್ರಸ್ತರಲ್ಲಿ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆ ಚಿಕಿತ್ಸೆ ಪಡೆಯುತ್ತಿದ್ದಾರೆ.

MP BJP leaders son is accused in gang raping woman, sexually assaulting her sister

ಆರೋಪಿಗಳೆಲ್ಲರೂ ಉನ್ನಾವೋ ಪೊಲೀಸ್ ಠಾಣೆ ವ್ಯಾಪ್ತಿಯ ನಿವಾಸಿಗಳು. ಸಂತ್ರಸ್ತೆ ಮತ್ತು ಆರೋಪಿಗಳು ವಿದ್ಯಾರ್ಥಿಗಳಾಗಿದ್ದು, ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ದಾತಿಯಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಶರ್ಮಾ ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳು ಮತ್ತು ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪ್ರದೀಪ್ ಶರ್ಮಾ ಹೇಳಿದ್ದಾರೆ.

"ತನ್ನ ಮತ್ತು ತನ್ನ ಅಕ್ಕನನ್ನು ನಾಲ್ಕು ಜನರು ಅಪಹರಿಸಿದ್ದಾರೆ ಎಂದು ದೂರುದಾರರು ಹೇಳಿದ್ದಾರೆ. ಆರೋಪಿಗಳು ಅವರನ್ನು ಮನೆಗೆ ಕರೆದೊಯ್ದು, ಅಲ್ಲಿ ಅವರು ತನ್ನ ಅಕ್ಕನನ್ನು ಅತ್ಯಾಚಾರ ಮಾಡಿದ್ದಾರೆ" ಎಂದು ಪ್ರದೀಪ್ ಶರ್ಮಾ ಹೇಳಿದ್ದಾರೆ. ಮಹಿಳೆಯ ಕಿರಿಯ ಸಹೋದರಿ ದೂರು ದಾಖಲಿಸಿದ್ದಾರೆ. ಘಟನೆಯ ನಂತರ ಸಂತ್ರಸ್ತೆ ಮತ್ತು ಆಕೆಯ ತಂಗಿ ಮನೆಗೆ ಮರಳಿದ್ದಾರೆ. ಈ ವೇಳೆ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿಸಿದ್ದಾರೆ.

ನಂತರ ಮಹಿಳೆಯನ್ನು ನೆರೆಯ ಉತ್ತರ ಪ್ರದೇಶದ ಝಾನ್ಸಿಯ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಪ್ರದೀಪ್ ಶರ್ಮಾ ಹೇಳಿದ್ದಾರೆ. ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ಪ್ರಕಾರ ಆರೋಪಿಯು ದೂರುದಾರರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಅವರು ಹೇಳಿದ್ದಾರೆ. ಪರಾರಿಯಾಗಿರುವ ಆರೋಪಿಗಳಿಗೆ 10 ಸಾವಿರ ರೂಪಾಯಿ ಬಹುಮಾನ ಘೋಷಿಸಲಾಗಿದೆ ಎಂದಿದ್ದಾರೆ.

MP BJP leaders son is accused in gang raping woman, sexually assaulting her sister

ಈ ಘಟನೆ ದುರದೃಷ್ಟಕರ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುರೇಂದ್ರ ಬುಧೋಲಿಯಾ ಹೇಳಿದ್ದು, ಸಂತ್ರಸ್ತೆಯ ಹೇಳಿಕೆಯನ್ನು ಪೊಲೀಸರು ಇನ್ನೂ ದಾಖಲಿಸಿಲ್ಲ. ಸಂತ್ರಸ್ತೆ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ಬಿಜೆಪಿ ಪದಾಧಿಕಾರಿಯ ಮಗನ ಹೆಸರನ್ನು ತೆಗೆದುಕೊಂಡರೆ, ಪಕ್ಷವು ಅವರಿಗೆ (ಸ್ಥಳೀಯ ಕಾರ್ಯಕರ್ತ) ನೋಟಿಸ್ ನೀಡುತ್ತದೆ. ನಂತರ ಪಕ್ಷ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಸುರೇಂದ್ರ ಬುಧೋಲಿಯಾ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+