ಆಪ್ ಸಂಸದ ಸಂಜಯ್ ಸಿಂಗ್ ಪ್ರತಿಭಟನೆಗೆ ಸಂಸದೆ ಜಯಾ ಬಚ್ಚನ್ ಬೆಂಬಲ
ನವದೆಹಲಿ, ಜುಲೈ. 28: ಸಮಾಜವಾದಿ ಪಕ್ಷದ ಸಂಸದೆ ಮತ್ತು ಬಾಲಿವುಡ್ ನಟಿ ಜಯಾ ಬಚ್ಚನ್ ಶುಕ್ರವಾರ ಆಮ್ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ್ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ. ಮಣಿಪುರ ಹಿಂಸಾಚಾರದ ವಿಚಾರದಲ್ಲಿ ಭಾಗಿಯಾಗಿ ಸದನದಿಂದ ಅಮಾನತುಗೊಂಡಿರುವ ಅವರು ಅಂದಿನಿಂದ ಸಂಸತ್ತಿನ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಸಭಾಧ್ಯಕ್ಷರ ಸೂಚನೆಗಳನ್ನು "ಪದೇ ಪದೇ ಉಲ್ಲಂಘಿಸಿದ್ದಕ್ಕಾಗಿ" ಅಧಿವೇಶನದ ಉಳಿದ ಅವಧಿಗೆ ಅವರನ್ನು ಅಮಾನತುಗೊಳಿಸಲಾಗಿದೆ. ಆಮ್ ಆದ್ಮಿ ಪಕ್ಷದ ನಾಯಕ ಸೋಮವಾರ ಸಂಸತ್ತಿನ ಆವರಣದಲ್ಲಿರುವ ಮಹಾತ್ಮ ಗಾಂಧಿ ಅವರ ಪ್ರತಿಮೆ ಬಳಿ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಪ್ರಾರಂಭಿಸಿದ್ದಾರೆ. ಇವರಿಗೆ ಕೆಲವು ವಿರೋಧ ಪಕ್ಷದ ನಾಯಕರು ಬೆಂಬಲ ಸೂಚಿಸಿದ್ದಾರೆ.

ಸುದ್ದಿ ಸಂಸ್ಥೆ ಪಿಟಿಐ ಹಂಚಿಕೊಂಡ ವಿಡಿಯೋದಲ್ಲಿ ಸಂಸದೆ ಜಯಾ ಬಚ್ಚನ್ ಅವರು ಎಎಪಿ ನಾಯಕ ಸಂಜಯ್ ಸಿಂಗ್ ಅವರೊಂದಿಗೆ ಚರ್ಚೆಯಲ್ಲಿ ತೊಡಗಿರುವುದು ಕಂಡುಬಂದಿದೆ. ಮಾತುಕತೆ ನಂತರ, ಅವರು "ಮಣಿಪುರವನ್ನು ಉಳಿಸಿ" ಮತ್ತು "ಮಣಿಪುರಕ್ಕಾಗಿ ಭಾರತ" ಎಂಬ ಫಲಕಗಳನ್ನು ಹಿಡಿದುಕೊಂಡು ಅವರೊಂದಿಗೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ಆಪ್‌ನ ಸಂಜಯ್ ಸಿಂಗ್ ಅವರನ್ನು ಅಮಾನತುಗೊಳಿಸಿದಾಗಿನಿಂದ ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟಲ್ ಇನ್‌ಕ್ಲೂಸಿವ್ ಅಲೈಯನ್ಸ್ (INDIA) ನಾಯಕರಿಂದ ಬೆಂಬಲವನ್ನು ಪಡೆಯುತ್ತಿದ್ದಾರೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ವಿರುದ್ಧ ಈ ಮೈತ್ರಿಯನ್ನು ರಚಿಸಲಾಗಿದೆ ಮತ್ತು ಇದರಲ್ಲಿ 26 ಪಕ್ಷಗಳು ಸೇರಿಕೊಂಡಿವೆ.
ಲೋಕಸಭೆಯಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ವಿರುದ್ಧ INDIA ಪಕ್ಷಗಳು, "ಅವಿಶ್ವಾಸ ನಿರ್ಣಯ"ವನ್ನು ಮಂಡಿಸಿದ್ದು, ಅದನ್ನು ಸ್ಪೀಕರ್ ಓಂ ಬಿರ್ಲಾ ಅವರು ಅಂಗೀಕರಿಸಿದ್ದಾರೆ. ಈ ಕುರಿತು ಚರ್ಚೆಯ ವೇಳಾಪಟ್ಟಿಯನ್ನು ತಿಳಿಸುವುದಾಗಿ ತಿಳಿಸಿದ್ದಾರೆ.

ಸಂಜಯ್ ಸಿಂಗ್ ಅಮಾನತು
ಎಎಪಿ ನಾಯಕ ಅಧ್ಯಕ್ಷರ ನಿರ್ದೇಶನಗಳನ್ನು ಪದೇ ಪದೇ ಉಲ್ಲಂಘಿಸಿದ ಕಾರಣ ಮಾನ್ಸೂನ್ ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಂಡಿದ್ದಾರೆ. ಸದನದ ನಾಯಕ ಪಿಯೂಷ್ ಗೋಯಲ್ ಅವರು ಸಂಜಯ್ ಸಿಂಗ್ ಅವರ ಅಮಾನತು ಪ್ರಸ್ತಾವನೆಯನ್ನು ಪ್ರಸ್ತಾಪಿಸಿದ ನಂತರ ಸದಸನದಿಂದ ಅಮಾನತು ಮಾಡಲಾಗಿದೆ. ನಂತರ ಸದನದಲ್ಲಿ ಧ್ವನಿ ಮತದ ಮೂಲಕ ಅಂಗೀಕರಿಸಲಾಗಿದೆ.
ಮಣಿಪುರದ ಹಿಂಸಾಚಾರದ ಕುರಿತು ಚರ್ಚೆಗಾಗಿ ಅವರು ಸತತವಾಗಿ ಮಾಡಿದ ಮನವಿಗಳು ಮತ್ತು ಈ ವಿಷಯದ ಬಗ್ಗೆ ಪ್ರಧಾನಿಯವರಿಂದ ಹೇಳಿಕೆ ನೀಡಬೇಕೆಂಬ ಅವರ ಬೇಡಿಕೆಯ ಪರಿಣಾಮವಾಗಿ ಸಂಜಯ್ ಸಿಂಗ್ ಅವರನ್ನು ಅಮಾನತುಗೊಳಿಸಲಾಗಿದೆ. ಪ್ರಶ್ನೋತ್ತರ ಅವಧಿಯಲ್ಲಿ, ಪ್ರತಿಪಕ್ಷಗಳ ಪ್ರತಿಭಟನೆಯ ನಡುವೆ ಸದನವು ಕಲಾಪವನ್ನು ಪ್ರಾರಂಭಿಸಿದಾಗ, ಸಂಜಯ್ ಸಿಂಗ್ ಅವರು ಅಧಿವೇಶನಕ್ಕೆ ಅಡ್ಡಿಪಡಿಸಿದ್ದಾರೆ.
ಅಮಾನತ್ತಿನ ನಂತರ ಪ್ರತಿಭಟನೆ ನಡೆಸುತ್ತಿರುವ ಅವರಿಗೆ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾದರು. ಹಿಂದಿನ ದಿನ, ಮಂಗಳವಾರ, ರಾಜ್ಯಸಭಾ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಮತ್ತು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ತೃಣಮೂಲ ಕಾಂಗ್ರೆಸ್ ಸಂಸದ ಶತ್ರುಘ್ನ ಸಿನ್ಹಾ ಮತ್ತು ಕಾಂಗ್ರೆಸ್ ಸಂಸದ ಪ್ರಮೋದ್ ತಿವಾರಿ ಸೇರಿದಂತೆ ಹಲವು ವಿರೋಧ ಪಕ್ಷದ ನಾಯಕರು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸಂಜಯ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ.
ಎಎಪಿ ಸಂಸದ ಸಂಜಯ್ ಸಿಂಗ್ ಅವರನ್ನು ಮುಂಗಾರು ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸಿರುವುದಕ್ಕೆ ವಿರೋಧ ವ್ಯಕ್ತಪಡಿಸಿ ವಿರೋಧ ಪಕ್ಷದ ನಾಯಕರ ಗುಂಪು ಸೋಮವಾರ ಸಂಸತ್ತಿನ ಹೊರಗೆ ರಾತ್ರೋರಾತ್ರಿ ಪ್ರತಿಭಟನೆ ನಡೆಸಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ಮಣಿಪುರ ವಿಷಯದ ಬಗ್ಗೆ ಸದನದಲ್ಲಿ ಚರ್ಚೆಯನ್ನು ಪ್ರಾರಂಭಿಸಬೇಕು ಎಂದು ವಿಪಕ್ಷಗಳು ಒತ್ತಾಯಿಸಿವೆ.












Click it and Unblock the Notifications