ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕ್ರಿಕೆಟ್ ಅಭಿಮಾನಿಗಳಿಗೆ ಡಬಲ್ ಶಾಕ್: ಎಂಎಸ್ ಧೋನಿ ಮತ್ತು ರೈನಾ ನಿವೃತ್ತಿ

|
Google Oneindia Kannada News

ನವದೆಹಲಿ, ಆಗಸ್ಟ್ 15: ಕ್ಯಾಪ್ಟನ್ ಕೂಲ್ ಎಂದೇ ಖ್ಯಾತರಾಗಿದ್ದ ಮಹೇಂದ್ರ ಸಿಂಗ್ ಧೋನಿ ಕ್ರಿಕೆಟ್ ಅಭಿಮಾನಿಗಳಿಗೆ ಆಘಾತ ನೀಡಿದ್ದಾರೆ. ಐಪಿಎಲ್ ಟೂರ್ನಿ ಆರಂಭವಾಗುವ ಹೊಸ್ತಿಲಿನಲ್ಲಿಯೇ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಆದರೆ ಐಪಿಎಲ್‌ನಲ್ಲಿ ಅವರು ಮುಂದುವರಿಯಲಿದ್ದಾರೆ. ಧೋನಿ ಅವರೊಂದಿಗೆ ಭಾರತೀಯ ಕ್ರಿಕೆಟ್ ತಂಡಕ್ಕೆ ಅತ್ಯುತ್ತಮ ಕೊಡುಗೆ ನೀಡಿದ್ದ ಸುರೇಶ್ ರೈನಾ ಕೂಡ ನಿವೃತ್ತಿ ಘೋಷಿಸಿದ್ದಾರೆ.

ಭಾರತ ಕ್ರಿಕೆಟ್‌ನ ಹೀರೋಗಳಲ್ಲಿ ಒಬ್ಬರಾದ ಮಹೇಂದ್ರ ಸಿಂಗ್ ಧೋನಿ, 15 ವರ್ಷಗಳ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕನ್ನು ಅಂತ್ಯಗೊಳಿಸಿದ್ದಾರೆ. ಇದರಲ್ಲಿ ನಾಯಕರಾಗಿ ಏಕದಿನ ಮತ್ತು ಟಿ20 ವಿಶ್ವಕಪ್‌ಗಳನ್ನು ಗೆದ್ದು ತಂದ ಖ್ಯಾತಿ ಅವರಿಗಿದೆ.

MS Dhoni And Suresh Raina Retires From International Cricket

ಧೋನಿ ನಿವೃತ್ತಿಯ ಬಗ್ಗೆ ಹಲವು ಸಮಯದಿಂದ ಊಹಾಪೋಹಗಳು ಕೇಳಿಬರುತ್ತಿದ್ದವು. ಇವುಗಳಿಗೆ ಧೋನಿ ಪ್ರತಿಕ್ರಿಯೆ ನೀಡಿರಲಿಲ್ಲ. ಕಳೆದ ಕೆಲವು ಟೂರ್ನಿಗಳಿಗೆ ಧೋನಿ ಅವರನ್ನು ಕೈಬಿಡಲಾಗಿತ್ತು. ಅವರು ಕ್ರಿಕೆಟ್ ತಂಡಕ್ಕೆ ಮರಳಲಿದ್ದಾರೆ ಎಂದು ಆಯ್ಕೆ ಸಮಿತಿಯ ಸದಸ್ಯರು ಹೇಳಿಕೆ ನೀಡಿದ್ದರೂ ಅದರ ಬಗ್ಗೆ ಅಭಿಮಾನಿಗಳಲ್ಲಿ ಅನುಮಾನವಿತ್ತು. ಅದೀಗ ಖಚಿತವಾಗಿದೆ. ಸುರೇಶ್ ರೈನಾ ಕೂಡ ಭಾರತ ತಂಡಕ್ಕೆ ಮರಳುವ ಪ್ರಯತ್ನ ಮಾಡಿದ್ದರು. ಆದರೆ ಅವರಿಗೆ ತಂಡದಲ್ಲಿ ಸ್ಥಾನ ಸಿಕ್ಕಿರಲಿಲ್ಲ. ಈ ಇಬ್ಬರೂ ಆಟಗಾರರು ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ.

ಧೋನಿ ಅವರು 2014ರಲ್ಲಿ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದರು. 2007ರಲ್ಲಿ ಕ್ರಿಕೆಟ್ ತಂಡದ ನಾಯಕತ್ವ ಪಡೆದುಕೊಂಡಿದ್ದ ಅವರು, 200 ಪಂದ್ಯಗಳಲ್ಲಿ ನಾಯಕರಾಗಿ 110ರಲ್ಲಿ ಗೆಲುವು ಕಂಡಿದ್ದರು.

2019ರ ಏಕದಿನ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಸೋಲು ಅನುಭವಿಸಿತ್ತು. ಅದು ಧೋನಿ ಆಡಿದ ಕೊನೆಯ ಏಕದಿನ ಪಂದ್ಯವಾಗಿದೆ. ಆ ಪಂದ್ಯದಲ್ಲಿ ಅವರು 72 ಎಸೆತಗಳಲ್ಲಿ 50 ರನ್ ಬಾರಿಸಿದ್ದರು. 350 ಪಂದ್ಯಗಳಿಂದ 10,733 ರನ್‌ಗಳನ್ನು ಏಕದಿನ ಕ್ರಿಕೆಟ್‌ನಲ್ಲಿ ಗಳಿಸಿದ್ದಾರೆ.

ಜಗತ್ತಿನ ಅತ್ಯಂತ ಶ್ರೀಮಂತ ಕ್ರಿಕೆಟಿಗರಲ್ಲಿ ಒಬ್ಬರೆನಿಸಿರುವ ಧೋನಿ, ಟಿ20 ಕ್ರಿಕೆಟ್‌ನಲ್ಲಿ 98 ಪಂದ್ಯಗಳನ್ನಾಡಿದ್ದು, 1617 ರನ್ ಬಾರಿಸಿದ್ದರು.

ಧೋನಿ ನಿವೃತ್ತಿ ಘೋಷಿಸಿದ ಕೆಲವೇ ನಿಮಿಷಗಳಲ್ಲಿ ಸುರೇಶ್ ರೈನಾ ಕೂಡ ನಿವೃತ್ತಿ ಪ್ರಕಟಿಸಿದ್ದಾರೆ. 2018ರ ಜುಲೈನಲ್ಲಿ ರೈನಾ ತಮ್ಮ ಕೊನೆಯ ಏಕದಿನ ಪಂದ್ಯವಾಡಿದ್ದರು.

English summary
MS Dhoni and Suresh Raina have announced their retirement from international cricket in a gap of few minutes.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X