Mukhtar Ansari's death: ಉತ್ತರಪ್ರದೇಶದಲ್ಲಿ ಕಿಚ್ಚು ಹಚ್ಚಿದ ಗ್ಯಾಂಗ್‌ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ನಿಧನ
ಲಕ್ನೋ, ಮಾರ್ಚ್. 29: ಗ್ಯಾಂಗ್‌ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು ಉತ್ತರ ಪ್ರದೇಶ ರಾಜಕೀಯದಲ್ಲಿ ಕಿಚ್ಚು ಹಚ್ಚಿದೆ. ಸಾವಿನ ಕುರಿತು ಉತ್ತರ ಪ್ರದೇಶ ಸರ್ಕಾರವು ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲು ನಿರ್ಧರಿಸಿದ್ದು, ಈ ಬಗ್ಗೆ ಘೋಷಿಸಿದೆ. ಮೂವರು ಸದಸ್ಯರ ತಂಡದಿಂದ ಮ್ಯಾಜಿಸ್ಟ್ರೇಟ್ ತನಿಖೆ ನಡೆಯಲಿದೆ.
ರಾಜಕಾರಣಿ ಮುಖ್ತಾರ್ ಅನ್ಸಾರಿ ಗುರುವಾರ (ಮಾರ್ಚ್ 28) ಉತ್ತರ ಪ್ರದೇಶದ ಬಂದಾ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಬ್ಬರು ವೈದ್ಯರ ಸಮಿತಿ ಶುಕ್ರವಾರ (ಮಾರ್ಚ್. 29) ಮರಣೋತ್ತರ ಪರೀಕ್ಷೆ ನಡೆಸಲಿದ್ದು, ಅದನ್ನು ವಿಡಿಯೋ ಚಿತ್ರೀಕರಣ ಮಾಡಲಾಗುತ್ತದೆ. ಮುಖ್ತಾರ್ ಅನ್ಸಾರಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಯ ನಂತರ ಅವರ ಪುತ್ರ ಉಮರ್ ಅನ್ಸಾರಿಗೆ ಹಸ್ತಾಂತರಿಸಲಾಗುತ್ತದೆ.

ವೈದ್ಯಕೀಯ ಬುಲೆಟಿನ್ ಪ್ರಕಾರ, ಮುಖ್ತಾರ್ ಅನ್ಸಾರಿ ಅವರು ಆರೋಗ್ಯ ಸರಿಯಿಲ್ಲ ಎಂದು ಹೇಳಿದ ನಂತರ "ಪ್ರಜ್ಞಾಹೀನ ಸ್ಥಿತಿಯಲ್ಲಿ" ಜಿಲ್ಲಾ ಕಾರಾಗೃಹದಿಂದ ರಾಣಿ ದುರ್ಗಾವತಿ ವೈದ್ಯಕೀಯ ಕಾಲೇಜಿಗೆ ಕರೆತರಲಾಗಿತ್ತು. ಒಂಬತ್ತು ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡಿತು. ಆದರೆ ಅವರು ಹೃದಯಾಘಾತದಿಂದ ನಿಧನರಾದರು ಎಂದು ವೈದ್ಯರು ಹೇಳಿದ್ದರು.
ಇದಕ್ಕೂ ಮುನ್ನ, ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಮುಖ್ತಾರ್ ಅನ್ಸಾರಿ ಅವರನ್ನು ಮಂಗಳವಾರ ಸುಮಾರು 14 ಗಂಟೆಗಳ ಕಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮುಖ್ತಾರ್ ಅನ್ಸಾರಿ ಕುಟುಂಬವು ಬಂಡಾ ಜೈಲಿನಲ್ಲಿ ಅವನಿಗೆ ನೀಡಿದ ಆಹಾರದಲ್ಲಿ ವಿಷ ಹಾಕಲಾಗುತ್ತಿದೆ ಎಂದು ಆರೋಪಿಸಿದೆ.

ಮುಖ್ತಾರ್ ಅನ್ಸಾರಿ ಪ್ರಕರಣದ ಇತ್ತೀಚಿನ ಅಪ್‌ಡೇಟ್ಸ್
* ಮುಖ್ತಾರ್ ಅನ್ಸಾರಿ ಸಾವಿನ ನಂತರ ಉತ್ತರ ಪ್ರದೇಶದಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಕ್ರಿಮಿನಲ್ ಪ್ರೊಸೀಜರ್ ಕೋಡ್ (CrPC) ಯ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಹೇರಲಾಗಿದ್ದು, ಜನ ಗುಂಪುಗೂಡುವುದನ್ನು ನಿಷೇಧಿಸಲಾಗಿದೆ. ಬಂದಾ, ಮೌ, ಗಾಜಿಪುರ ಮತ್ತು ವಾರಣಾಸಿ ಜಿಲ್ಲೆಗಳಲ್ಲಿ ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.
ನಿಷೇಧಾಜ್ಞೆಗಳ ಹೊರತಾಗಿಯೂ, ಶುಕ್ರವಾರ ಬೆಳಗ್ಗೆ ಘಾಜಿಪುರದಲ್ಲಿರುವ ಮುಖ್ತಾರ್ ಅನ್ಸಾರಿ ಅವರ ನಿವಾಸದ ಹೊರಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿಕೊಂಡಿದ್ದರು. ಆನ್‌ಲೈನ್‌ನಲ್ಲಿ ಕಾನೂನುಬಾಹಿರ ಅಂಶಗಳ ಮೇಲೆ ನಿಗಾ ಇರಿಸಲು ಉತ್ತರ ಪ್ರದೇಶ ಪೊಲೀಸರ ಸಾಮಾಜಿಕ ಮಾಧ್ಯಮ ಘಟಕವನ್ನು ಸಹ ಸಕ್ರಿಯಗೊಳಿಸಿದ್ದಾರೆ.
ಮುಖ್ತಾರ್ ಅನ್ಸಾರಿ ಅವರ ಅಂತ್ಯಕ್ರಿಯೆಗೆ ಗಾಜಿಪುರದ ಕಾಳಿ ಬಾಗ್ ಸ್ಮಶಾನದಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಕಾಸ್ಗಂಜ್ ಜೈಲಿನಲ್ಲಿ ಬಂಧಿಯಾಗಿರುವ ಮುಖ್ತಾರ್ ಅನ್ಸಾರಿ ಅವರ ಪುತ್ರ ಅಬ್ಬಾಸ್ ಅನ್ಸಾರಿ ಅವರ ತಂದೆಯ ಸಾವಿನ ಬಗ್ಗೆ ಮಾಹಿತಿ ನೀಡಲಾಗಿದೆ. ಜೈಲಿನ ಸೂಪರಿಂಟೆಂಡೆಂಟ್ ವಿಜಯ್ ವಿಕ್ರಮ್ ಸಿಂಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ. ಮುಖ್ತಾರ್ ಅನ್ಸಾರಿಯವರ ಮತ್ತೋರ್ವ ಪುತ್ರ ಉಮರ್ ಅನ್ಸಾರಿ ಅವರು ತಮ್ಮ ತಂದೆಗೆ ಆಹಾರದಲ್ಲಿ ವಿಷವನ್ನು ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಮುಖ್ತಾರ್ ಅನ್ಸಾರಿ ಯಾರು?
63 ವರ್ಷದ ಮುಖ್ತಾರ್ ಅನ್ಸಾರಿ ಮೌ ಸದರ್‌ನಿಂದ 1996 ರಿಂದ 2022 ರವರೆಗೆ ಐದು ಬಾರಿ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ, ಎರಡು ಬಾರಿ ಸ್ವತಂತ್ರವಾಗಿ ಮತ್ತು ಒಮ್ಮೆ ಕ್ವಾಮಿ ಏಕತಾ ದಳದ ಅಭ್ಯರ್ಥಿಯಾಗಿ ಐದು ಬಾರಿ ಶಾಸಕರಾಗಿದ್ದರು. ಅವರು 2005 ರಿಂದ ಉತ್ತರ ಪ್ರದೇಶ ಮತ್ತು ಪಂಜಾಬ್‌ನಲ್ಲಿ ಜೈಲಿನಲ್ಲಿದ್ದರು.
ಅವರ ವಿರುದ್ಧ 60 ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳು ಬಾಕಿ ಉಳಿದಿವೆ. ಉತ್ತರ ಪ್ರದೇಶದ ವಿವಿಧ ನ್ಯಾಯಾಲಯಗಳು ನೀಡಿದ ತೀರ್ಪಿನಿಂದ ಸೆಪ್ಟೆಂಬರ್ 2022 ರಿಂದ ಎಂಟು ಪ್ರಕರಣಗಳಲ್ಲಿ ಮುಖ್ತಾರ್ ಅನ್ಸಾರಿ ಶಿಕ್ಷೆಗೆ ಗುರಿಯಾಗಿದ್ದರು. ಅವರನ್ನು ಬಂದಾ ಜೈಲಿನಲ್ಲಿ ಇರಿಸಲಾಗಿತ್ತು.












Click it and Unblock the Notifications