ನಾಪತ್ತೆಯಾಗಿದ್ದ ಜೆಎನ್‌ಯು ವಿದ್ಯಾರ್ಥಿ ಪತ್ತೆ

ನವದೆಹಲಿ, ಜನವರಿ 12 : ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ದಿಂದ ನಾಪತ್ತೆಯಾಗಿದ್ದ ಸಂಶೋಧನಾ ವಿದ್ಯಾರ್ಥಿ ಪತ್ತೆಯಾಗಿದ್ದಾರೆ. ಸೋಮವಾರದಿಂದ ವಿದ್ಯಾರ್ಥಿಗಾಗಿ ಹುಡುಕಾಟ ನಡೆಸಲಾಗುತ್ತಿತ್ತು.

ಕಳೆದ ಸೋಮವಾರ ವಿಶ್ವವಿದ್ಯಾಲಯದ ಆವರಣದಿಂದ ಮುಕುಲ್ ಜೈನ್ ನಾಪತ್ತೆಯಾಗಿದ್ದರು. ಮುಕುಲ್ ದೆಹಲಿಯಿಂದ ಪಾಟ್ನಾಕ್ಕೆ ತೆರಳಿದ್ದರು. ಅವರನ್ನು ಯಾರೂ ಅಪಹರಣ ಮಾಡಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಜೆಎನ್‌ಯು ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷೆ ಗೀತಾ ಕುಮಾರಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, 'ಸಂಶೋಧನಾ ವಿದ್ಯಾರ್ಥಿ ಸುರಕ್ಷಿತವಾಗಿ ಹಿಂತಿರುಗಿದ್ದಾರೆ. ವೈಯಕ್ತಿಕ ಕೆಲಸದ ನಿಮಿತ್ತ ಹೊರಗೆ ಹೋಗಿದ್ದರು' ಎಂದು ಹೇಳಿದ್ದಾರೆ.

Mukul Jain who missing form JNU campus found

ಸೋಮವಾರ ಮಧ್ಯಾಹ್ನ 12.30ಕ್ಕೆ ಮುಕುಲ್ ಜೈನ್ ವಿಶ್ವವಿದ್ಯಾಲಯದ ಆವರಣದಿಂದ ಹೊರ ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಮಂಗಳವಾರ ಪೋಷಕರು ನಾಪತ್ತೆ ಬಗ್ಗೆ ದೂರು ನೀಡಿದ್ದರು.

ಮುಕುಲ್ ಜೈನ್ ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯದ ಮಾರ್ಗದರ್ಶಕರ ನೇತೃತ್ವದಲ್ಲಿ ಸಂಶೋಧನೆ ನಡೆಸುತ್ತಿದ್ದರು. ಜೆಎನ್‌ಯುದ ಲೈಫ್ ಸೈನ್ಸ್ ವಿಭಾಗದಲ್ಲಿ ಸಹ ಮಾರ್ಗದರ್ಶಕರನ್ನು ಪಡೆದಿದ್ದು, ಪ್ರಯೋಗಾಲಯದಲ್ಲಿ ಸಂಶೋಧನಾ ಕಾರ್ಯ ನಡೆಸುತ್ತಿದ್ದರು.

ಮುಕುಲ್ ಜೈನ್ ನಾಪತ್ತೆಯಾದ ಬಳಿಕ, ಅವರನ್ನು ಯಾರಾದರೂ ಅಪಹರಣ ಮಾಡಿರಬಹುದು ಎಂಬ ಶಂಕೆಯ ಹಿನ್ನಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+