Mulayam Singh Yadav Health : ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು
ನವದೆಹಲಿ, ಅ. 2: ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದು ಅವರನ್ನು ಹರಿಯಾಣದ ಗುರುಗ್ರಾಮದ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.
ವೈದ್ಯರು ಈ ಬಗ್ಗೆ ಮಾಹಿತಿ ನೀಡಿದ್ದು, ಮುಲಾಯಂ ಆರೋಗ್ಯ ನಿಜಕ್ಕೂ ಗಂಭೀರವಾಗಿರುವುದು ತಿಳಿದುಬಂದಿದೆ. ಗುರುಗ್ರಾಮದ ಮೇದಾಂತ ಆಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ಅವರನ್ನು ದಾಖಲಿಸಿ ನಿಗಾ ಇರಿಸಲಾಗಿದೆ.
ಕೆಲ ತಿಂಗಳುಗಳಿಂದಲೂ ಮುಲಾಯಂ ಸಿಂಗ್ ಯಾದವ್ ಅವರಿಗೆ ಹಲವಾರು ಅನಾರೋಗ್ಯ ತೊಂದರೆಗಳು ಕಾಡುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ವಾರಗಳ ಹಿಂದೆಯೂ ಮುಲಾಯಂ ಅವರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಂಡು ಒಂದೆರಡು ದಿನದಲ್ಲಿ ಡಿಸ್‌ಚಾರ್ಜ್ ಆಗಿದ್ದರು. ಆದರೆ, ಭಾನುವಾರ ಅವರ ಆರೋಗ್ಯ ಪರಿಸ್ಥಿತಿ ಗಂಭೀರ ಹಂತಕ್ಕೆ ಹೋಗಿದೆ ಎನ್ನಲಾಗಿದೆ.

ಮುಲಾಯಂ ಸಹೋದರ ಶಿವಪಾಲ್ ಯಾದವ್, ಮಗ ಹಾಗೂ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರು ಆಸ್ಪತ್ರೆಗೆ ಕಡೆಗೆ ಧಾವಿಸಿದ್ದಾರೆ.
82 ವರ್ಷದ ಮುಲಾಯಂ ಸಿಂಗ್ ಯಾದವ್ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ. ಹಾಗೆಯೇ ಹಿಂದೆ ಕೇಂದ್ರ ರಕ್ಷಣಾ ಸಚಿವರೂ ಆಗಿದ್ದರು. ಸದ್ಯ ಸಮಾಜವಾದಿ ಪಕ್ಷದ ಮುಖ್ಯಸ್ಥರಾಗಿದ್ದಾರೆ.
उत्तर प्रदेश के पूर्व मुख्यमंत्री, श्री मुलायम सिंह यादव जी के अस्वस्थ होने की जानकारी मिलने पर मैंने उनके पुत्र अखिलेश यादव जी से फ़ोन पर बात करके उनका कुशल क्षेम जाना है। ईश्वर से यही प्रार्थना है कि वे जल्द से जल्द स्वस्थ हों।
— Rajnath Singh (@rajnathsingh) October 2, 2022
"ಮುಲಾಯಂ ಸಿಂಗ್ ಯಾದವ್ ಅವರ ಅನಾರೋಗ್ಯದ ಬಗ್ಗೆ ಮಾಹಿತಿ ಬಂದ ನಂತರ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗೆ ಮಾತನಾಡಿದ್ದೇನೆ. ಅವರು ಶೀಘ್ರದಲ್ಲೇ ಗುಣಮುಖರಾಗಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ" ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗೆ ಮಾತನಾಡಿದ್ದು, ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಸಾಧ್ಯವಿರುವ ಯಾವುದೇ ನೆರವು ಬೇಕಾದರೂ ಸಹಾಯ ಮಾಡಲು ಅವರು ಇದ್ದಾರೆ ಎಂದು ಪ್ರಧಾನಿ ಸಚಿವಾಲಯದ ಮೂಲಗಳು ತಿಳಿಸಿವೆ
(ಒನ್ಇಂಡಿಯಾ ಸುದ್ದಿ)
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications