• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Mulayam Singh Yadav Health : ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ; ಆಸ್ಪತ್ರೆಗೆ ದಾಖಲು

|
Google Oneindia Kannada News

ನವದೆಹಲಿ, ಅ. 2: ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಸಮಾಜವಾದಿ ಪಕ್ಷ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದು ಅವರನ್ನು ಹರಿಯಾಣದ ಗುರುಗ್ರಾಮದ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

ವೈದ್ಯರು ಈ ಬಗ್ಗೆ ಮಾಹಿತಿ ನೀಡಿದ್ದು, ಮುಲಾಯಂ ಆರೋಗ್ಯ ನಿಜಕ್ಕೂ ಗಂಭೀರವಾಗಿರುವುದು ತಿಳಿದುಬಂದಿದೆ. ಗುರುಗ್ರಾಮದ ಮೇದಾಂತ ಆಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ಅವರನ್ನು ದಾಖಲಿಸಿ ನಿಗಾ ಇರಿಸಲಾಗಿದೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ; ತರೂರ್, ಖರ್ಗೆ ಭಿನ್ನ ಹಾದಿ?ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ; ತರೂರ್, ಖರ್ಗೆ ಭಿನ್ನ ಹಾದಿ?

ಕೆಲ ತಿಂಗಳುಗಳಿಂದಲೂ ಮುಲಾಯಂ ಸಿಂಗ್ ಯಾದವ್ ಅವರಿಗೆ ಹಲವಾರು ಅನಾರೋಗ್ಯ ತೊಂದರೆಗಳು ಕಾಡುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ವಾರಗಳ ಹಿಂದೆಯೂ ಮುಲಾಯಂ ಅವರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಂಡು ಒಂದೆರಡು ದಿನದಲ್ಲಿ ಡಿಸ್‌ಚಾರ್ಜ್ ಆಗಿದ್ದರು. ಆದರೆ, ಭಾನುವಾರ ಅವರ ಆರೋಗ್ಯ ಪರಿಸ್ಥಿತಿ ಗಂಭೀರ ಹಂತಕ್ಕೆ ಹೋಗಿದೆ ಎನ್ನಲಾಗಿದೆ.

ಮುಲಾಯಂ ಸಹೋದರ ಶಿವಪಾಲ್ ಯಾದವ್, ಮಗ ಹಾಗೂ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರು ಆಸ್ಪತ್ರೆಗೆ ಕಡೆಗೆ ಧಾವಿಸಿದ್ದಾರೆ.

82 ವರ್ಷದ ಮುಲಾಯಂ ಸಿಂಗ್ ಯಾದವ್ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ. ಹಾಗೆಯೇ ಹಿಂದೆ ಕೇಂದ್ರ ರಕ್ಷಣಾ ಸಚಿವರೂ ಆಗಿದ್ದರು. ಸದ್ಯ ಸಮಾಜವಾದಿ ಪಕ್ಷದ ಮುಖ್ಯಸ್ಥರಾಗಿದ್ದಾರೆ.

"ಮುಲಾಯಂ ಸಿಂಗ್ ಯಾದವ್ ಅವರ ಅನಾರೋಗ್ಯದ ಬಗ್ಗೆ ಮಾಹಿತಿ ಬಂದ ನಂತರ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗೆ ಮಾತನಾಡಿದ್ದೇನೆ. ಅವರು ಶೀಘ್ರದಲ್ಲೇ ಗುಣಮುಖರಾಗಲಿ ಎಂದು ನಾನು ದೇವರನ್ನು ಪ್ರಾರ್ಥಿಸುತ್ತೇನೆ" ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗೆ ಮಾತನಾಡಿದ್ದು, ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ. ಸಾಧ್ಯವಿರುವ ಯಾವುದೇ ನೆರವು ಬೇಕಾದರೂ ಸಹಾಯ ಮಾಡಲು ಅವರು ಇದ್ದಾರೆ ಎಂದು ಪ್ರಧಾನಿ ಸಚಿವಾಲಯದ ಮೂಲಗಳು ತಿಳಿಸಿವೆ

(ಒನ್ಇಂಡಿಯಾ ಸುದ್ದಿ)

English summary
Ex CM of Uttar Pradesh and Samajawadi Party Chief Mulayam Singh Yadav has been admitted to Medanta hospital in Gurugram. Doctors have said, his condition is serious and put him in the ICU dept.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X