ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ; ಐವರು ಸಾವು?
ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ರಿಯಾಕ್ಟರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ ಐವರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಸ್ಫೋಟಗೊಂಡಿರುವ ಕಾರ್ಖಾನೆಯ ಒಳಗಡೆ ಇನ್ನೂ ಹಲವರು ಸಿಕ್ಕಿಬಿದ್ದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಸಾವನ್ನಪ್ಪಿದವರ ಶಂಕೆ ಮತ್ತಷ್ಟು ಹೆಚ್ಚಾಗುವ ಆತಂಕ ಇದೆ. ಸ್ಪೋಟವಾದ ಸಂದರ್ಭದಲ್ಲಿ ಕಟ್ಟಡಲ್ಲಿ ಸುಮಾರು 50 ಜನ ಇದ್ದರು ಎಂದು ವರದಿಗಳು ತಿಳಿಸಿವೆ.

ಮೃತಪಟ್ಟವರಲ್ಲಿ ಒಬ್ಬರು ಕಾರ್ಖಾನೆಯ ವ್ಯವಸ್ಥಾಪಕರು ಎಂದು ಹೇಳಲಾಗಿದೆ. ಕಟ್ಟಡದಲ್ಲಿರುವ ಮತ್ತೊಂದು ರಿಯಾಕ್ಟರ್ ಮುಂದೆ ಸ್ಫೋಟಗೊಳ್ಳುವ ಆತಂಕವಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಅಧಿಕಾರಿಗಳು ಸುತ್ತಮುತ್ತಲಿನ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಿದ್ದಾರೆ.
ಸ್ಫೋಟದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಸಂಪೂರ್ಣವಾಗಿ ಮುಕ್ತಾಯವಾದ ಬಳಿಕ ಮೃತಪಟ್ಟವರ ಸಂಖ್ಯೆ ನಿಖರವಾಗಿ ತಿಳಿಯಲಿದೆ.
ಸೋಮವಾರ ಕೂಡ ಅವಘಡ
ಸೋಮವಾರ ಸಂಗಾರೆಡ್ಡಿ ಜಿಲ್ಲೆಯಲ್ಲೇ ಮತ್ತೊಂದು ಬೆಂಕಿ ಅವಘಡ ಸಂಭವಿಸಿತ್ತು. ಘಟನೆಗೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಅಧಿಕಾರಿಗಳು ಹೇಳಿರುವುದಾಗಿ ಪಿಟಿಐ ವರದಿ ಮಾಡಿತ್ತು. ಅಗ್ನಿ ಶಾಮಕ ದಳ ಕಾರ್ಯಾಚರಣೆ ಬಳಿಕ ಬೆಂಕಿ ಹತೋಟಿಗೆ ಬಂದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿರಲಿಲ್ಲ.












Click it and Unblock the Notifications