ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ವಾಹನಗಳ ಸರಣಿ ಅಪಘಾತ: 3 ಸಾವು, 8 ಮಂದಿಗೆ ಗಾಯ
ಔರೈಯಾ (ಯುಪಿ) ಡಿಸೆಂಬರ್ 19: ದಟ್ಟ ಮಂಜಿನಿಂದಾಗಿ ಸೋಮವಾರ ಮುಂಜಾನೆ ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇನಲ್ಲಿ ವಾಹನಗಳ ಸರಣಿ ಅಪಘಾತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಎರ್ವ ಕತ್ರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಟ್ರಕ್, ಸ್ಲೀಪರ್ ಬಸ್ ಮತ್ತು ಕಾರು ಪರಸ್ಪರ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿವಿಧ ಪ್ರದೇಶಗಳ ಪೊಲೀಸ್ ತಂಡಗಳಿಂದ ಜಂಟಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು. ಗಾಯಾಳುಗಳನ್ನು ಸೈಫೈ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದ್ದು ಮೃತರನ್ನು ಗುರುತಿಸುವ ಪ್ರಯತ್ನಗಳು ಮುಂದುವರಿದಿವೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.












Click it and Unblock the Notifications