ಆ ಮಾರ್ಗದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಯಾವ ನಿಲ್ದಾಣದಲ್ಲಿ ನಿಲ್ಲುವುದು?

ಮುಂಬೈ, ಅಕ್ಟೋಬರ್ 27: ಮುಂಬೈ-ಗಾಂಧಿನಗರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಮಾರ್ಗದಲ್ಲಿ ಹೆಚ್ಚುವರಿ ನಿಲುಗಡೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಗುರುವಾರದಿಂದ ಎಲ್ಲಾ ಮುಂಬೈ-ಗಾಂಧಿನಗರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು (ರೈಲು ಸಂಖ್ಯೆ. 20901/20902) ವಾಪಿ ನಿಲ್ದಾಣದಲ್ಲಿ ನಿಲ್ಲುತ್ತವೆ.

ವಾಪಿ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಮಾಡುವುದರಿಂದ ವಂದೇ ಭಾರತ್ ರೈಲುಗಳ ಆಗಮನ ಮತ್ತು ನಿರ್ಗಮನದ ಸಮಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆಯೂ ಇದೆ. "ಎಲ್ಲಾ ಪ್ರಯಾಣಿಕರ ಅನುಕೂಲಕ್ಕಾಗಿ ಪ್ರತಿಷ್ಠಿತ ರೈಲು ಸಂಖ್ಯೆ 20901/20902 ಮುಂಬೈ ಸೆಂಟ್ರಲ್ - ಗಾಂಧಿನಗರ ಕ್ಯಾಪಿಟಲ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ವಾಪಿ ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಯನ್ನು ಒದಗಿಸಲಾಗುತ್ತಿದೆ," ಎಂದು ಪಶ್ಚಿಮ ರೈಲ್ವೆ ಟ್ವೀಟ್ ಮಾಡಿದೆ.

ಅಕ್ಟೋಬರ್ 26, 2022 ರಿಂದ ಮುಂಬೈ ಸೆಂಟ್ರಲ್ - ಗಾಂಧಿನಗರ ಕ್ಯಾಪಿಟಲ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ವಾಪಿ ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗೆ ಅವಕಾಶವನ್ನು ನೀಡಲಾಗಿದೆ.

ಗಾಂಧಿನಗರ-ಮುಂಬೈ ವಂದೇ ಭಾರತ್ ಶುರುವಾಗಿದ್ದು ಯಾವಾಗ?

ಗಾಂಧಿನಗರ-ಮುಂಬೈ ವಂದೇ ಭಾರತ್ ಶುರುವಾಗಿದ್ದು ಯಾವಾಗ?

ಕಳೆದ ಸೆಪ್ಟೆಂಬರ್ 30ರಂದು ಗಾಂಧಿನಗರ-ಮುಂಬೈ ಸೆಂಟ್ರಲ್ ನಡುವೆ ಮೂರನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ತೋರಿದ್ದರು. ಈ ವಂದೇ ಭಾರತ್ 2.0 ಭಾರತದ ಎರಡು ವ್ಯಾಪಾರ ಕೇಂದ್ರಗಳ ನಡುವಿನ ಸಂಪರ್ಕವನ್ನು ಹೆಚ್ಚಿಸುತ್ತದೆ. ಗಾಂಧಿನಗರದಿಂದ ಮುಂಬೈಗೆ ಏಕಮುಖ ಪ್ರಯಾಣದ ಸಮಯ ಸುಮಾರು 6-7 ಗಂಟೆ ಆಗಲಿದೆ ಎಂದು ಅಂದಾಜಿಸಲಾಗಿದೆ.

ನಾಲ್ಕು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ

ನಾಲ್ಕು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ

ಕಳೆದ ಅಕ್ಟೋಬರ್ 14 ರಂದು, ಉನಾದ ಅಂಬ್ ಅಂಡೌರಾದಿಂದ ನವದೆಹಲಿಗೆ ನಾಲ್ಕನೇ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ರೈಲಿನ ಸಂಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. ಇದರ ಹೊರತಾಗಿ ಇನ್ನೂ ಎರಡು ವಂದೇ ಭಾರತ್ ರೈಲುಗಳು ಸಂಚರಿಸುತ್ತಿವೆ. ನವದೆಹಲಿಯಿಂದ ಉತ್ತರ ಪ್ರದೇಶದ ವಾರಣಾಸಿ ಮತ್ತು ನವದೆಹಲಿಯಿಂದ ಹಿಮಾಚಲ ಪ್ರದೇಶದ ಶ್ರೀ ಮಾತಾ ವೈಷ್ಣೋ ದೇವಿ ಕತ್ರಾ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಸಂಚರಿಸುತ್ತಿವೆ.

ಕರುನಾಡಲ್ಲಿ ಓಡಲಿದೆ 5ನೇ ವಂದೇ ಭಾರತ್ ಎಕ್ಸ್‌ಪ್ರೆಸ್

ಕರುನಾಡಲ್ಲಿ ಓಡಲಿದೆ 5ನೇ ವಂದೇ ಭಾರತ್ ಎಕ್ಸ್‌ಪ್ರೆಸ್

ಭಾರತದ ಐದನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಕರ್ನಾಟಕದಲ್ಲಿ ಓಡಲಿದೆ. ಚೆನ್ನೈ-ಬೆಂಗಳೂರು-ಮೈಸೂರು ಮಧ್ಯೆ ಈ ರೈಲು ಸಂಚರಿಸಲಿದೆ. ಮುಂಬರುವ ನವೆಂಬರ್ 10ರಂದು ಈ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಇಂಟಿಗ್ರಲ್ ಕೋಚ್ ಫ್ಯಾಕ್ಟರಿ (ಐಸಿಎಫ್‌) ಚೆನ್ನೈ, ಸೆಮಿ ಹೈ ಸ್ಪೀಡ್‌ನ ರೈಲು ವಂದೇ ಭಾರತ್‌ ಎಕ್ಸ್‌ಪ್ರೆಸ್‌ನ್ನು ಮೊದಲ ರೈಲನ್ನು ಹೊರತಂದ ನಾಲ್ಕು ವರ್ಷಗಳ ನಂತರ ದಕ್ಷಿಣ ರೈಲ್ವೆಗೆ ಅದರ ಮೊದಲ ರೈಲನ್ನು ನೀಡಲಾಗಿದೆ.

ವಂದೇ ಭಾರತ್ ರೈಲಿನ ವಿಶೇಷತೆ ಬಗ್ಗೆ ತಿಳಿಯಿರಿ

ವಂದೇ ಭಾರತ್ ರೈಲಿನ ವಿಶೇಷತೆ ಬಗ್ಗೆ ತಿಳಿಯಿರಿ

ವಂದೇ ಭಾರತ್ 2.0 ದೇಶೀಯವಾಗಿ ಅಭಿವೃದ್ಧಿಪಡಿಸಿದ ರೈಲು ಡಿಕ್ಕಿ ತಪ್ಪಿಸುವ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಕವಾಚ್ ಸೇರಿದಂತೆ ಸುಧಾರಿತ ಅತ್ಯಾಧುನಿಕ ಸುರಕ್ಷತಾ ವೈಶಿಷ್ಟ್ಯಗಳನ್ನು ಈ ರೈಲು ಹೊಂದಿದೆ. ರೈಲು 52 ಸೆಕೆಂಡುಗಳಲ್ಲಿ ಗಂಟೆಗೆ 0 ರಿಂದ 100 ಕಿಮೀ ವೇಗವನ್ನು ತಲುಪುತ್ತದೆ. ಗಂಟೆಗೆ 180 ಕಿಮೀ ಗರಿಷ್ಠ ವೇಗವನ್ನು ಹೊಂದಿರುತ್ತದೆ. ವಂದೇ ಭಾರತ್ ರೈಲನ್ನು ಸಂಪೂರ್ಣವಾಗಿ ಭಾರತದಲ್ಲಿ ಸಿದ್ಧಪಡಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+