ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಬೈ, ಪುಣೆ ಕಂಟೈನ್ಮೆಂಟ್ ಮಾದರಿ ಎಂದ ಆರೋಗ್ಯ ಸಚಿವಾಲಯ

|
Google Oneindia Kannada News

ಮುಂಬೈ, ಮೇ 11; ದೇಶವ ವಿವಿಧ ರಾಜ್ಯಗಳಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಕೋವಿಡ್ 2ನೇ ಅಲೆಯಲ್ಲಿ ಈಗ ಮೈಕ್ರೋ ಕಂಟೈನ್ಮೆಂಟ್ ಝೋನ್‌ಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಮುಂಬೈ ಮತ್ತು ಪುಣೆ ಮಾದರಿ ಬಗ್ಗೆ ಕೇಂದ್ರ ಸರ್ಕಾರ ಮೆಚ್ಚುಗೆ ವ್ಯಕ್ತಪಡಿಸಿದೆ.

ಪ್ರಧಾನಿ ನರೇಂದ್ರ ಮೋದಿ ಕಳೆದ ತಿಂಗಳು ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಮೈಕ್ರೋ ಕಂಟೈನ್ಮೆಂಟ್ ಝೋನ್‌ ನಿರ್ಮಾಣ ಮಾಡುವ ಬಗ್ಗೆ ಮುಖ್ಯಮಂತ್ರಿಗಳ ಸಭೆಯಲ್ಲಿ ಮಾತನಾಡಿದ್ದರು.

 ಕೊರೊನಾ ನಿಯಂತ್ರಣಕ್ಕೆ ದೇಶಕ್ಕೆ ಮಾದರಿ: ಏನಿದು 'ಮುಂಬೈ ಮಾಡೆಲ್', ಯಾರಿದರ ನಾಯಕ? ಕೊರೊನಾ ನಿಯಂತ್ರಣಕ್ಕೆ ದೇಶಕ್ಕೆ ಮಾದರಿ: ಏನಿದು 'ಮುಂಬೈ ಮಾಡೆಲ್', ಯಾರಿದರ ನಾಯಕ?

ಮಂಗಳವಾರ ರಾಜ್ಯಗಳ ಕೋವಿಡ್ ಪರಿಸ್ಥಿತಿ ಬಗ್ಗೆ ಚರ್ಚಿಸಲು ನಡೆದ ಉನ್ನತ ಮಟ್ಟದ ಸಭೆಯಲ್ಲಿಯೂ ಇದೇ ವಿಚಾರ ಪ್ರಸ್ತಾಪವಾಗಿದೆ. ಕೇಂದ್ರ ಆರೋಗ್ಯ ಸಚಿವಾಲಯ ಮೈಕ್ರೋ ಕಂಟೈನ್ಮೆಂಟ್ ಝೋನ್ ಮಾಡಿ ಸೋಂಕು ತಡೆಯುವ ಬಗ್ಗೆ ರಾಜ್ಯಗಳಿಗೆ ನಿರ್ದೇಶನಗಳನ್ನು ನೀಡಿದೆ.

ಮುಂಬೈ; 2ನೇ ದಿನವೂ ಕೊವ್ಯಾಕ್ಸಿನ್ ಲಸಿಕೆ ಇಲ್ಲ ಮುಂಬೈ; 2ನೇ ದಿನವೂ ಕೊವ್ಯಾಕ್ಸಿನ್ ಲಸಿಕೆ ಇಲ್ಲ

Mumbai, Pune Model Covid Containment Needed At National Level Says Govt

ಮಹಾರಾಷ್ಟ್ರದ ಪುಣೆ, ಮುಂಬೈ ನಗರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಿತ್ತು. ಮೈಕ್ರೋ ಕಂಟೈನ್ಮೆಂಟ್ ಝೋನ್ ಮಾಡುವ ಮೂಲಕ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ತರಲಾಗಿದೆ.

ಕೊರೊನಾ ಸೋಂಕು ತಡೆಗೆ ಡಬಲ್ ಮಾಸ್ಕ್: ಎಂಥಾ ಮಾಸ್ಕ್ ಧರಿಸಬೇಕು, ಎಂಥದ್ದು ಧರಿಸಕೂಡದು? ಕೊರೊನಾ ಸೋಂಕು ತಡೆಗೆ ಡಬಲ್ ಮಾಸ್ಕ್: ಎಂಥಾ ಮಾಸ್ಕ್ ಧರಿಸಬೇಕು, ಎಂಥದ್ದು ಧರಿಸಕೂಡದು?

ದೇಶದಲ್ಲಿ ಕೋವಿಡ್ ಹರಡುವಿಕೆ ತಡೆಯಲು ಪುಣೆ, ಮುಂಬೈ ರೀತಿಯ ಕಂಟೈನ್ಮೆಂಟ್ ಮಾದರಿ ದೇಶದ್ಯಾಂತ ಜಾರಿಗೆ ಬರಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಮಂಗಳವಾರ ಪುಣೆಯಲ್ಲಿ 7,665 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 9,38,474ಕ್ಕೆ ಏರಿಕೆಯಾಗಿದೆ. ಮುಂಬೈನಲ್ಲಿ 1,717 ಹೊಸ ಪ್ರಕರಣ ದಾಖಲಾಗಿದೆ.

ಜಿಲ್ಲಾ ಮಟ್ಟದಲ್ಲಿ ಕೋವಿಡ್ ಸೋಂಕು ಹರಡುವಿಕೆ ಬಗ್ಗೆ ಕೇಂದ್ರ ಸರ್ಕಾರ ಕಳವಳ ವ್ಯಕ್ತಪಡಿಸಿದೆ. ಸೋಂಕು ನಿಯಂತ್ರಣಕ್ಕೆ ತರಲು ರಾಜ್ಯಗಳು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸೂಚನೆ ನೀಡಿದೆ.

English summary
Union health ministry appreciated Covid-19 containment models of Mumbai and Pune. Such models need to be replicated at the national level said ministry.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X