Rain Alert: ಭಾರೀ ಮಳೆ ಎಚ್ಚರಿಕೆ: ಮಹಾನಗರ ಶಾಲೆ-ಕಾಲೇಜುಗಳಿಗೆ ರಜೇ ಘೋಷಣೆ...School Holidays
School Holidays: ಬದಲಾದ ಹವಾಮಾನ ವೈಪರೀತ್ಯಗಳು, ಚಂಡಮಾರುತ ಪರಿಚಲನೆಯಿಂದ ಮುಂಗಾರು ಮಳೆ ಮುಂದುವರಿದಿದೆ. ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಮಳೆ ತೀವ್ರಗೊಂಡಿದೆ. ಕೆಲವು ದಿನಗಳಿಂದ ಸುರಿಯುತ್ತಿದ್ದ ಮಳೆ ಇದೀಗ ಹೆಚ್ಚಾಗಿದ್ದು, ಭಾರೀ ಪ್ರಯಾಣದಲ್ಲಿ ದಾಖಲಾಗುತ್ತಿದೆ. ಹೀಗಾಗಿ ಮುಂಬೈನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಭಾರತ ಹವಾಮಾನ ಇಲಾಖೆ (IMD) ಮುಂಬೈ ಮಹಾನಗರಕ್ಕೆ ಮಂಗಳವಾರ ಆಗಸ್ಟ್ 19 ರಂದು ಬಿರುಗಾಳಿ ಸಹಿತ ಅತ್ಯಧಿಕ ಮಳೆ ಬರಲಿದೆ. ಹೀಗಾಗಿ ಮುಂಬೈ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ದೇಶದ ಬೇರೆ ಬೇರೆ ಭಾಗಗಳಲ್ಲಿ ಸಹ ರೆಡ್ ಅಲರ್ಟ್ ಮತ್ತು ಆರೆಂಜ್ ಅಲರ್ಟ್ ನೀಡಲಾಗಿದೆ. ಮುಂಬೈನಲ್ಲಿ ಮಂಗಳವಾರ ಕನಿಷ್ಠ 200 ಮಿಲಿ ಮೀಟರ್ ಮಳೆ ಆಗುವ ಎಲ್ಲ ಸಾಧ್ಯತೆ ಇದೆ.

ಶಾಲೆ-ಕಾಲೇಜುಗಳಿಗೆ ರಜೆ ನೀಡಿದ BMC
ಭಾರೀ ಮಳೆ ನಿರೀಕ್ಷೆ ಕಾರಣಕ್ಕೆ ಮಕ್ಕಳ ಹಿತದೃಷ್ಟಿಯಿಂದ ಮುಂಬೈ ನಗರ ಮತ್ತು ಉಪನಗರಗಳಲ್ಲಿನ ಎಲ್ಲಾ ಶಾಲೆಗಳು ಮತ್ತು ಕಾಲೇಜುಗಳು ಮಂಗಳವಾರ (ಆಗಸ್ಟ್ 19) ರಜೆ ಘೋಷಣೆ ಮಾಡಲಾಗಿದೆ. ಈ ಬಗ್ಗೆ ಸೋಮವಾರ ಸಂಜೆ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಆದೇಶ ಹೊರಡಿಸಿದೆ. ಮಂಗಳವಾರ ಮುಂಬೈನಲ್ಲಿ "ಅತ್ಯಂತ ಭಾರೀ ಮಳೆ" ಬೀಳುವ ಸಾಧ್ಯತೆ ಇದ್ದು, ಹೀಗಾಗಿ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾಗಿ ಐಎಂಡಿ ಮಳೆ ಮುನ್ಸೂಚನೆಯನ್ನು ಆದೇಶದಲ್ಲಿ ಬಿಎಂಸಿ ಉಲ್ಲೇಖಿಸಿದೆ.
ಮುಂಬೈ ನಗರ ಮತ್ತು ಉಪನಗರ ಒಳಗೊಂಡಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಪುರಸಭೆಯ ಶಾಲೆಗಳು ಮತ್ತು ಕಾಲೇಜುಗಳಿಗೆ ಈ ರಜೆ ಅನ್ವಯವಾಗಲಿದೆ. ಒಂದೆರಡು ವಾರಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇಲ್ಲಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಅನೇಕ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನಿಂತು ಸಮಸ್ಯೆ ಸೃಷ್ಟಿಸಿದೆ. ಈ ಪ್ರಮುಖ ಮಾರ್ಗಗಳಲ್ಲಿ ವಾಹನ ದಟ್ಟಣೆ, ರಸ್ತೆಗಳು ಜಲಾವೃತ ಆಗಿರುವುದು ಕಂಡು ಬರುತ್ತಿದೆ.
ಮಳೆ ಕಾರಣಕ್ಕೆ ಏಳು ಮಂದಿ ಸಾವು
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಳೆ, ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ್ದಾರೆ. ಹಾವಾಮಾನ ಇಲಾಖೆ, ಶೈಕ್ಷಣಿಕ ಸಂಸ್ಥೆಗಳು ಹಾಗೂ ವಿಪತ್ತು ನಿರ್ವಹಣಾ ತಂಡದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರುತವಂತೆ ಸಚಿವರಿಗೆ, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈಗಾಗಲೇ ಅಗತ್ಯ ಪ್ರದೇಶಗಳಲ್ಲಿ ನಾಗರಿಕೆ ಮುನ್ನೆಚ್ಚರಿಕೆ ನೀಡಲಾಗಿದೆ. ಸಿಎಂ ಹೇಳಿಕೆ ಪ್ರಕಾರ, ಮಹಾರಾಷ್ಟ್ರದಲ್ಲಿ ಭಾರೀ ಮಳೆಯಿಂದಾಗಿ ವಿವಿಧ ಘಟನೆಗಳಲ್ಲಿ ಒಟ್ಟು 07 ಮಂದಿ ಜನರು ಸಾವನ್ನಪ್ಪಿದ್ದಾರೆ.
ಆಗಸ್ಟ್ 21 ರ ನಡುವೆ ರಾಜ್ಯದ ಹಲವಾರು ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಿ, ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಹೆಚ್ಚಿನ ಅದ್ಯತೆ ವಹಿಸಬೇಕು ಎಂಬ ಸೂಚನೆ ನೀಡಲಾಗಿದೆ. ಈಗಾಗಲೇ ಕೊಂಕಣ ಪ್ರದೇಶದ ನದಿಗಳು ಅಪಾಯ ಮಟ್ಟ ಮೀರಿ ಹರಿಯುತ್ತಿವೆ. ಮಳೆಗೆ 4 ಲಕ್ಷ ಹೆಕ್ಟೇರ್‌ಗಳಲ್ಲಿ ಬೆಳೆಗಳು ನಷ್ಟ ಉಂಟಾಗಿದೆ. ಸುಮಾರು 800 ಹಳ್ಳಿಗಳ ಮೇಲೆ ಮಳೆಯ ವ್ಯತಿರಿಕ್ತ ಪರಿಣಾಮ ಬೀರಿದೆ.












Click it and Unblock the Notifications