ಕೋವಿಡ್-19: ಎಲ್ಲ ರಾಜ್ಯಗಳ ಸಿಎಂಗಳ ಜೊತೆಗೆ ಪ್ರಧಾನಿ ವಿಡಿಯೋ ಕಾನ್ಫರೆನ್ಸ್

ನವದೆಹಲಿ, ಏಪ್ರಿಲ್ 26: ಭಾರತದಲ್ಲಿ ಕೋವಿಡ್-19 ಸಾಂಕ್ರಾಮಿಕ ಪಿಡುಗಿನ ಹಾವಳಿಗೆ ಕೆಲವು ರಾಜ್ಯಗಳು ಸಾಕ್ಷಿ ಆಗುತ್ತಿವೆ. ಕಳೆದ ಎರಡ್ಮೂರು ತಿಂಗಳಿನಿಂದ ಇಲ್ಲದ ಕೋವಿಡ್-19 ಅಂಕಿ ಸಂಖ್ಯೆಗಳು ಏಪ್ರಿಲ್ ತಿಂಗಳಿನಲ್ಲಿ ವರದಿಯಾಗುತ್ತಿವೆ.

ಮಹಾರಾಷ್ಟ್ರದ ಮುಂಬೈನಲ್ಲಿ ಫೆಬ್ರವರಿ ನಂತರ ಮೊದಲ ಬಾರಿಗೆ ಗರಿಷ್ಠ ಸೋಂಕಿತ ಪ್ರಕರಣಗಳು ವರದಿಯಾಗಿವೆ. ದೆಹಲಿಯಲ್ಲಿ ಪ್ರತಿನಿತ್ಯ ಸೋಂಕಿತರ ಸಂಖ್ಯೆ 1,000 ಗಡಿ ದಾಟುತ್ತಿದೆ. ಇದರ ಮಧ್ಯೆ ಬುಧವಾರ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಭೆ ನಡೆಸಲಿದ್ದಾರೆ.

ದೇಶದಲ್ಲಿ ಕೊರೊನಾವೈರಸ್ ಏರಿಕೆ ನಡುವೆ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಈ ಪರಿಶೀಲನಾ ಸಭೆಯಲ್ಲಿ ಆಯಾ ರಾಜ್ಯಗಳಲ್ಲಿನ ಕೋವಿಡ್-19 ಪರಿಸ್ಥಿತಿ ಹಾಗೂ ಅಂಕಿ-ಅಂಶಗಳ ಕುರಿತು ಚರ್ಚೆ ನಡೆಯಲಿದೆ. ದೇಶದ ಕೋವಿಡ್-19 ವಸ್ತುಸ್ಥಿತಿ ಹಾಗೂ ಪ್ರಧಾನಿ ಸಭೆಯ ಕುರಿತು ಪ್ರಮುಖ ಅಂಶಗಳನ್ನು ಇಲ್ಲಿ ತಿಳಿಯೋಣ.

Mumbai Soar To Highest Level Since February; PM Modi To Hold Review Meeting Today with All States CM

- ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಆರೋಗ್ಯ ಸಚಿವಾಲಯದ ಹಿರಿಯ ಅಧಿಕಾರಿಗಳು, ಗೃಹ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಹಾಗೂ ಇನ್ನೂ ಕೆಲವು ಸಚಿವರು ಹಾಜರಿರಲಿದ್ದಾರೆ.

- ಕೇಂದ್ರ ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಕೋವಿಡ್-19 ಕುರಿತು ಮಾಹಿತಿ ಮಂಡನೆ ಮಾಡಲಿದ್ದಾರೆ. ರಾಜ್ಯವಾರು ಕೋವಿಡ್-19 ಪ್ರಕರಣಗಳ ಏರಿಳಿತ, ಕೊರೊನಾವೈರಸ್ ಲಸಿಕೆ ವಿತರಣೆ ಪ್ರಮಾಣ, ವಿಶೇಷವಾಗಿ ಬೂಸ್ಟರ್ ಡೋಸ್ ಲಸಿಕೆ ವಿತರಣೆಯ ವೇಗದ ಬಗ್ಗೆ ಪ್ರಧಾನಿ ನೇತೃತ್ವದ ಸಭೆಯಲ್ಲಿ ಹೇಳಲಿದ್ದಾರೆ.

- ದೆಹಲಿಯಲ್ಲಿ ಮಂಗಳವಾರ 1,204 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿವೆ, ಫೆಬ್ರವರಿ 10 ರಿಂದ ಕೊರೊನಾವೈರಸ್ ಪ್ರಕರಣಗಳಲ್ಲಿ ಅತಿ ಹೆಚ್ಚು ಏರಿಕೆಯಾಗಿದೆ. ದೆಹಲಿಯಲ್ಲಿ ಒಂದು ಸಾವಿನ ಪ್ರಕರಣ ದಾಖಲಾಗಿದ್ದು, ಪಾಸಿಟಿವಿಟಿ ದರವು ಶೇ. 4.64ರಷ್ಟಿದೆ. ದೆಹಲಿ ಆರೋಗ್ಯ ಇಲಾಖೆ ಮಾಹಿತಿಯ ಪ್ರಕಾರ. ರಾಜಧಾನಿಯಲ್ಲಿ ನಿರಂತರವಾಗಿ ಐದನೇ ದಿನದಂದು ಒಂದೇ ದಿನದಲ್ಲಿ 1,000 ಕ್ಕೂ ಹೆಚ್ಚು ಹೊಸ ಪ್ರಕರಣಗಳು ದಾಖಲಾಗಿದೆ.

- ರಾಷ್ಟ್ರ ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ 18,77,091 ಮತ್ತು ಸಾವಿನ ಸಂಖ್ಯೆ 26,169 ಆಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಸೋಮವಾರ ದೆಹಲಿಯಲ್ಲಿ ಒಟ್ಟು 25,963 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ. ಸೋಮವಾರ ದೆಹಲಿಯಲ್ಲಿ 1,011 ಪ್ರಕರಣಗಳು ಮತ್ತು ಒಂದು ಸಾವು ವರದಿಯಾಗಿದೆ, ಆದರೆ ಪಾಸಿಟಿವಿಟಿ ದರ 6.42 ಪ್ರತಿಶತಕ್ಕೆ ಏರಿಕೆಯಾಗಿದೆ.

- ಭಾನುವಾರ ದೆಹಲಿಯಲ್ಲಿ 1,083 ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಪಾಸಿಟಿವಿಟಿ ದರ ಶೇ.4.48ರಷ್ಟಿದೆ. ಸೋಂಕಿಗೆ ಒಬ್ಬ ವ್ಯಕ್ತಿ ಬಲಿಯಾಗಿದ್ದು, ನಗರದಲ್ಲಿ ಶನಿವಾರ 1,094 COVID-19 ಸೋಂಕುಗಳನ್ನು ವರದಿಯಾಗಿತ್ತು. ಇದು ಫೆಬ್ರವರಿ 10ರ ನಂತರದ ಗರಿಷ್ಠ ಏರಿಕೆಯಾಗಿದ್ದು, ಪಾಸಿಟಿವಿಟಿ ದರ ಶೇ.4.82ರಷ್ಟಿದೆ. ದೆಹಲಿಯಲ್ಲಿ ಶುಕ್ರವಾರ 1,042 ಪ್ರಕರಣಗಳು ಪಾಸಿಟಿವಿಟಿ ದರ ಶೇ.4.64 ಹಾಗೂ ಎರಡು ಸಾವುಗಳು ದಾಖಲಾಗಿವೆ. ಗುರುವಾರ, ನಗರದಲ್ಲಿ 965 ಪ್ರಕರಣಗಳು ಪತ್ತೆಯಾಗಿದ್ದು, ಪಾಸಿಟಿವಿಟಿ ದರ 4.71ರಷ್ಟಿದೆ.

- ದೆಹಲಿಯಲ್ಲಿ ಇದುವರೆಗೆ ಆಸ್ಪತ್ರೆಗೆ ದಾಖಲಾಗುವ ಪ್ರಮಾಣ ಕಡಿಮೆಯಿದ್ದು, ಒಟ್ಟು ಸಕ್ರಿಯ ಪ್ರಕರಣಗಳಲ್ಲಿ ಶೇಕಡಾ ಮೂರಕ್ಕಿಂತ ಕಡಿಮೆಯಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಪ್ರಸ್ತುತ, 114 ಕೋವಿಡ್-19 ರೋಗಿಗಳು ದೆಹಲಿಯ ಆಸ್ಪತ್ರೆಗಳಲ್ಲಿ ದಾಖಲಾಗಿದ್ದರೆ, 3,190 ಜನರು ಮನೆಯಲ್ಲಿ ಪ್ರತ್ಯೇಕವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದೆ. ವಿವಿಧ ಆಸ್ಪತ್ರೆಗಳಲ್ಲಿ COVID-19 ರೋಗಿಗಳಿಗೆ ಲಭ್ಯವಿರುವ 9,378 ಹಾಸಿಗೆಗಳಲ್ಲಿ 130 (1.39 ಪ್ರತಿಶತ) ಮಾತ್ರ ಆಕ್ರಮಿಸಿಕೊಂಡಿವೆ ಎಂದು ಅಂಕಿ-ಅಂಶಗಳು ಹೇಳುತ್ತವೆ.

- ಮಹಾರಾಷ್ಟ್ರದ ಮುಂಬೈ ನಗರವೊಂದರಲ್ಲೇ 102 ಸೇರಿದಂತೆ 153 ಹೊಸ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ದಾಖಲಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಮಂಗಳವಾರ 102 ಹೊಸ ಸೋಂಕುಗಳು ಬೆಳಕಿಗೆ ಬರುವುದರೊಂದಿಗೆ ಫೆಬ್ರವರಿ 27 ರ ನಂತರ ಮುಂಬೈ ಗರಿಷ್ಠ ಏರಿಕೆಯನ್ನು ದಾಖಲಿಸಿದೆ. ಮಹಾರಾಷ್ಟ್ರದ COVID-19 ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 1.87 ರಷ್ಟಿದೆ.

- ಮಹಾರಾಷ್ಟ್ರದ ಸಿಂಧುದುರ್ಗ, ರತ್ನಗಿರಿ, ಸತಾರಾ, ನಂದೂರ್‌ಬಾರ್, ಲಾತೂರ್, ವಾಶಿಮ್, ಒಸ್ಮಾನಾಬಾದ್, ಭಂಡಾರಾ ಮತ್ತು ಚಂದ್ರಾಪುರ ಜಿಲ್ಲೆಗಳಲ್ಲಿ ಯಾವುದೇ ಸಕ್ರಿಯ ಪ್ರಕರಣಗಳಿಲ್ಲ. ಕಳೆದ 24 ಗಂಟೆಗಳಲ್ಲಿ 135 ರೋಗಿಗಳು ಚೇತರಿಸಿಕೊಂಡಿದ್ದು, ರಾಜ್ಯದಲ್ಲಿ ಒಟ್ಟು ಚೇತರಿಸಿಕೊಂಡ ರೋಗಿಗಳ ಸಂಖ್ಯೆ 77,28,297 ಕ್ಕೆ ತಲುಪಿದೆ. ಚೇತರಿಕೆಯ ಪ್ರಮಾಣವು 98.11 ಪ್ರತಿಶತದಷ್ಟಿದೆ.

- ಭಾರತದ ವಯಸ್ಕ ಜನಸಂಖ್ಯೆಯ ಶೇಕಡಾ 86 ರಷ್ಟು ಜನರು ಈಗ ಕೊರೊನಾವೈರಸ್ ಸೋಂಕಿನ ವಿರುದ್ಧ ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಮಂಗಳವಾರ ಹೇಳಿದ್ದಾರೆ. ದೇಶದಲ್ಲಿ ಇದುವರೆಗೂ 188 ಕೋಟಿಗೂ ಹೆಚ್ಚು ಡೋಸ್ ಲಸಿಕೆಯನ್ನು ವಿತರಣೆೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+