ಎಲ್ಲ ನಾಗರಿಕರಿಗೂ ಏಕರೂಪದ ವಿಚ್ಚೇದನ ಕಾನೂನು: ಮುಸ್ಲಿಂ ಕಾನೂನು ಮಂಡಳಿ ವಿರೋಧ
ನವದೆಹಲಿ, ಫೆಬ್ರವರಿ 13: ದೇಶದ ಎಲ್ಲ ನಾಗರಿಕರಿಗೂ ಏಕರೂಪದ ವಿಚ್ಚೇದನಾ ಪದ್ಧತಿ ಜಾರಿಗೆ ತರುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ವಿರುದ್ಧ ಅಖಿಲ ಭಾರತ ಮುಸ್ಲಿಂ ವೈಯಕ್ತಕ ಕಾನೂನು ಮಂಡಳಿ (ಎಐಎಂಪಿಎಲ್ಬಿ) ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಸಂವಿಧಾನದ ಉದ್ದೇಶಗಳು ಮತ್ತು ಅಂತಾರಾಷ್ಟ್ರೀಯ ಸಮಾವೇಶಗಳ ತೀರ್ಮಾನಗಳನ್ನು ಮುಂದಿಟ್ಟುಕೊಂಡು ಈ ಆಕ್ಷೇಪ ವ್ಯಕ್ತಪಡಿಸಿದೆ.
ಬಿಜೆಪಿ ನಾಯಕ ಮತ್ತು ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಸಂವಿಧಾನದ 14, 15, 21 ಮತ್ತು 44ರ ವಿಧಿಗಳ ಪ್ರಕಾರ ವೈಯಕ್ತಿಕ ಕಾನೂನುಗಳ ಅಡಿಯಲ್ಲಿ ವಿಚ್ಚೇದನವನ್ನು ಪರಿಗಣಿಸಬಾರದು. ಹೀಗಾಗಿ ವಿಚ್ಚೇದನಕ್ಕೆ ಏಕರೂಪದ ನೆಲೆ ಇರಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು.
ಹಿಂದೂಗಳಲ್ಲಿನ ಮದುವೆಗಳು ಮತ್ತು ವಿಚ್ಚೇದನಕ್ಕೆ ಸಂಬಂಧಿಸಿದ ಕಾನೂನುಗಳಲ್ಲಿಯೇ ಏಕರೂಪತೆ ಇಲ್ಲ. ಆದರೆ ಈ ಸಂಪ್ರದಾಯ ಮತ್ತು ರೂಢಿಗಳನ್ನು ಸ್ವತಃ ಕಾನೂನು ರಕ್ಷಿಸಿದೆ ಎಂದು ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ತನ್ನ ಅರ್ಜಿಯಲ್ಲಿ ವಾದಿಸಿದೆ.

ಉಪಾಧ್ಯಾಯ್ ಅವರು ಸಲ್ಲಿಸಿದ ಅರ್ಜಿ ಆಧಾರದಲ್ಲಿ ಕೇಂದ್ರ ಸರ್ಕಾರಕ್ಕೆ ಕಳೆದ ವರ್ಷದ ಡಿ. 16ರಂದು ಸುಪ್ರೀಂಕೋರ್ಟ್ ನೋಟಿಸ್ ನೀಡಿತ್ತು. ವಿಚ್ಚೇದನ ಕಾನೂನಿನಲ್ಲಿರುವ ವೈಪರೀತ್ಯಗಳನ್ನು ತೆಗೆದುಹಾಕಬೇಕು ಮತ್ತು ಧರ್ಮ, ಜನಾಂಗ, ಜಾತಿ, ಲಿಂಗ ಅಥವಾ ಜನ್ಮಸ್ಥಳಗಳ ಆಧಾರದಲ್ಲಿ ಯಾವುದೇ ಪೂರ್ವಗ್ರಹಗಳಿಲ್ಲದೆ ಎಲ್ಲ ನಾಗರಿಕರಿಗೂ ಏಕರೂಪದ ಕಾನೂನು ತರಬೇಕು ಎಂದು ಕೇಂದ್ರ ಸರ್ಕಾರಕ್ಕೆ ಆದೇಶಿಸುವಂತೆ ಅವರು ಕೋರಿದ್ದರು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ












Click it and Unblock the Notifications