ಶೇಕಡಾ 5ರಷ್ಟು ಮೀಸಲಾತಿ ರದ್ದು, ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಸೌಲಭ್ಯ ನಿಲ್ಲಿಸಿದೆ ಈ ರಾಜ್ಯ... Muslim Quota
ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ವಿಚಾರವಾಗಿ ಕರ್ನಾಟಕದ ನೆರೆ ರಾಜ್ಯದಲ್ಲಿ ದೊಡ್ಡ ವಿವಾದ ಭುಗಿಲೆದ್ದು, ರಾಜಕೀಯ ಚರ್ಚೆಗಳು ಕೂಡ ಜೋರಾಗಿದ್ದವು. ಚುನಾವಣೆಗೆ ಕೂಡ ಇದೇ ಅಸ್ತ್ರ ಬಳಸಿಕೊಂಡು ಸೋಲು & ಗೆಲುವಿನ ಲೆಕ್ಕಾಚಾರ ಕೂಡ ಆರಂಭ ಆಗಿತ್ತು. ಸುಮಾರು 12 ವರ್ಷಗಳ ಕಾಲ ನಡೆದುಕೊಂಡು ಬಂದ ಈ ತಿಕ್ಕಾಟ ಈಗ ದಿಢೀರ್ ಅಂತ್ಯವಾಗಿದೆ. ಅಂದಹಾಗೆ ಮಹಾರಾಷ್ಟ್ರ ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಿದ್ದ ಮೀಸಲಾತಿ ವಿಚಾರವಾಗಿ ಮಹತ್ವದ ತೀರ್ಮಾನವನ್ನ ಕೈಗೊಂಡಿದೆ ದೇವೇಂದ್ರ ಫಡ್ನವಿಸ್ ಅವರ ಸರ್ಕಾರ. 2014ರ ಸಮಯದಲ್ಲಿ ಮಹಾರಾಷ್ಟ್ರ ಸರ್ಕಾರ ಕೈಗೊಂಡಿದ್ದ ನಿರ್ಧಾರವನ್ನು ಈಗ ರದ್ದುಪಡಿಸಲಾಗಿದೆ.
ಈ ಬಗ್ಗೆ ಮಹಾರಾಷ್ಟ್ರ ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆ ಮಹತ್ವದ ಆದೇಶವನ್ನು ಹೊರಡಿಸಿದೆ. ಮಹಾರಾಷ್ಟ್ರ ಸರ್ಕಾರದ ನಿರ್ಣಯದ ಪ್ರಕಾರ ಇದೀಗ ಮೀಸಲಾತಿ ವಿಚಾರದಲ್ಲಿ ದೊಡ್ಡ ಬದಲಾವಣೆ ಆಗಲಿದೆ. ಎಂದರೆ ಶಿಕ್ಷಣ ಸಂಸ್ಥೆಗಳು ಮತ್ತು ಸರ್ಕಾರಿ ಹಾಗೂ ಅರೆಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಂ ಸಮುದಾಯಕ್ಕೆ ಶೇಕಡಾ 5 ರಷ್ಟು ಮೀಸಲಾತಿ ನೀಡಿದ್ದ 2014ರ ಆದೇಶ ರದ್ದಾಗಿದೆ. ಈ ಮೂಲಕವಾಗಿ ಇದೀಗ 2014 ಅಂದರೆ ಸುಮಾರು 12 ವರ್ಷಗಳ ಹಿಂದೆ ಜಾರಿ ಮಾಡಿದ್ದ ಆದೇಶವು ರದ್ದಾಗಿದೆ. ಜುಲೈ 2014 ಸಮಯದಲ್ಲಿ ಮುಸ್ಲಿಮರನ್ನ ವಿಶೇಷ ಹಿಂದುಳಿದ ವರ್ಗ-ಎ (SBC-A) ಅಡಿಯಲ್ಲಿ ವರ್ಗೀಕರಿಸುವ ಮಹತ್ವದ ನಿರ್ಧಾರವನ್ನು ಸುಗ್ರೀವಾಜ್ಞೆ ಮೂಲಕ ಕೈಗೊಳ್ಳಲಾಗಿತ್ತು. ಆ ಮೂಲಕ ಮೀಸಲಾತಿಯನ್ನ ನೀಡಲು ನಿರ್ಧಾರ ಕೈಗೊಳ್ಳಲಾಗಿತ್ತು, ಆದರೆ ಅದು ಇದೀಗ ರದ್ದಾಗಿದೆ.

2008ರ ಸಮಯದಲ್ಲಿ ಸಮಿತಿ ರಚನೆ
SBC-A ಅಡಿಯಲ್ಲಿ ಪ್ರಯೋಜನವೂ ಸೇರಿ ಮೀಸಲಾತಿಗೆ ಸಂಬಂಧಪಟ್ಟ ಹಿಂದಿನ ಎಲ್ಲ ನಿರ್ಣಯಗಳನ್ನ ಇದೀಗ ಮಹಾರಾಷ್ಟ್ರ ಸರ್ಕಾರವು ರದ್ದುಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ. 2008ರ ಸಮಯದಲ್ಲಿ ಕಾಂಗ್ರೆಸ್ ಮತ್ತು ಎನ್‌ಸಿಪಿ ಸರ್ಕಾರ ಮಹಾರಾಷ್ಟ್ರದಲ್ಲಿ ಅಧಿಕಾರ ನಡೆಸುತ್ತಿದ್ದಾಗ, ನಿವೃತ್ತ ಐಎಎಸ್ ಅಧಿಕಾರಿ ಮೆಹಮೂದ್ ಉರ್ ರೆಹಮಾನ್ ನೇತೃತ್ವದಲ್ಲಿ ಒಂದು ಸಮಿತಿ ರಚನೆ ಮಾಡಿತ್ತು. ಈ ಸಮಿತಿ ಮಹಾರಾಷ್ಟ್ರದ ಮುಸ್ಲಿಂ ಸಮುದಾಯದ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಯ ಅಧ್ಯಯನ ಮಾಡಲು ನೇಮಕಾಗಿತ್ತು. ಕೊನೆಗೆ ಅಧ್ಯಯನ ಪೂರ್ಣಗೊಂಡ ನಂತರ ಮುಸ್ಲಿಂ ಮೀಸಲಾತಿ ಬೇಡಿಕೆ ಸಾಂಸ್ಥಿಕ ಸ್ವರೂಪ ಪಡೆದಿತ್ತು, ಹಾಗೂ ಆ ನಂತರ ಹಲವು ವರ್ಷಗಳ ಚರ್ಚೆ ನಡೆದು ಮೀಸಲಾತಿ ಪ್ರಕಟವಾಗಿತ್ತು. ಆದರೆ ಇದೀಗ ಅದನ್ನು ರದ್ದು ಮಾಡಿ ಆದೇಶ ಹೊರಡಿಸಿದೆ ಮಹಾರಾಷ್ಟ್ರ ಸರ್ಕಾರ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications