ಮಣಿಪುರದ ಮುಖ್ಯಮಂತ್ರಿಯಾಗಿ ಬಿರೇನ್ ಸಿಂಗ್ ಪ್ರಮಾಣ ವಚನ ಸ್ವೀಕಾರ
ಇಂಫಾಲ, ಮಾರ್ಚ್ 21: ಮಣಿಪುರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಎನ್ ಬಿರೇನ್ ಸಿಂಗ್ ಅವರು ಇಂದು ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲರಾದ ಗಣೇಶನ್ ಅವರು ಬಿರೇನ್ ಸಿಂಗ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಸರಳ ಸಮಾರಂಭಕ್ಕೆ ಸಾಕ್ಷಿಯಾಗಿದ್ದರು.
''ಎಲ್ಲರೂ ಒಮ್ಮತದಿಂದ ತೆಗೆದುಕೊಂಡ ನಿರ್ಧಾರ ಇದು. ಇದು ಮಣಿಪುರದಲ್ಲಿ ಸ್ಥಿರ ಮತ್ತು ಜವಾಬ್ದಾರಿಯುತ ಸರ್ಕಾರವನ್ನು ಹೊಂದಿದೆ ಎಂದು ಖಚಿತಪಡಿಸುತ್ತದೆ ಏಕೆಂದರೆ ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರವು ಈಶಾನ್ಯ ರಾಜ್ಯಗಳಿಗೆ ವಿಶೇಷ ಗಮನವನ್ನು ನೀಡುತ್ತದೆ,'' ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಿರೇನ್ ಸಿಂಗ್ ಆಯ್ಕೆ ಬಗ್ಗೆ ಪ್ರತಿಕ್ರಿಯಿಸಿದ್ದರು.
N Biren Singh takes oath as the Chief Minister of Manipur in Imphal. pic.twitter.com/of0TNRh94p
— ANI (@ANI) March 21, 2022
ಬಿಜೆಪಿಯ ಹಿರಿಯ ನಾಯಕ ತೊಂಗಂ ಬಿಸ್ವಜಿತ್ ಸಿಂಗ್ ಹೆಸರು ಕೇಳಿ ಬಂದಿತು. ಈಗ ಹಾಲಿ ಸ್ಪೀಕರ್ ಯುಮ್ನಮ್ ಖೇಮ್‌ಚಂದ್ ಸಿಂಗ್ ಹೆಸರು ಮುಂಚೂಣಿಯಲ್ಲಿತ್ತು. ಆದರೆ, ಅಂತಿಮವಾಗಿ ಎನ್ ಬಿರೇನ್ ಸಿಂಗ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಮತ್ತೊಂದು ಅವಧಿಗೆ ಆಯ್ಕೆಯಾಗಿದ್ದಾರೆ.

ರಾಜ್ಯದಲ್ಲಿ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಯನ್ನು ವೀಕ್ಷಕರಾದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕಾನೂನು ಸಚಿವ ಕಿರಣ್ ರಿಜಿಜು ಅವರು ಪ್ರಕಟಿಸಿದರು.
ಪ್ರಸ್ತುತ ಮಣಿಪುರ ಸರ್ಕಾರದ ಅವಧಿಯು ಮಾರ್ಚ್ 20, 2017 ರಂದು ಪ್ರಾರಂಭವಾಯಿತು ಮತ್ತು ಮಾರ್ಚ್ 19, 2022 ರಂದು ಕೊನೆಗೊಳ್ಳಲಿದೆ.
2022ರ ವಿಧಾನಸಭೆ ಫಲಿತಾಂಶ 60 ಸ್ಥಾನಗಳ ವಿಧಾನಸಭೆಯಲ್ಲಿ ಬಿಜೆಪಿ 32 ಸ್ಥಾನ, ಜನತಾ ದಳ (ಯುನೈಟೆಡ್) 6, ಕಾಂಗ್ರೆಸ್ 5, ಎನ್ ಪಿ ಪಿ 7, ಎನ್ ಪಿಎಫ್ 5, ಕುಕಿ ಪೀಪಲ್ಸ್ ಮೈತ್ರಿಕೂಟ 2 ಸ್ಥಾನ ಗೆದ್ದುಕೊಂಡಿವೆ. ಬಿಜೆಪಿ ಶೇ 37.83, ಕಾಂಗ್ರೆಸ್ 16.83%, ಜೆಡಿಯು 10.77%, ಎನ್ ಪಿ ಇ ಪಿ 17.29%, ಎನ್ ಪಿ ಎಫ್ 8.09 %, ಇತರೆ 7.53 % ಬಂದಿದೆ.
ಈ ನಡುವೆ ಮಣಿಪುರದಲ್ಲಿ ಶೇ 10.77ರಷ್ಟು ಮತ ಗಳಿಕೆ ಮೂಲಕ 6 ಸ್ಥಾನ ಗೆದ್ದಿರುವ ಜನತಾ ದಳ(ಸಂಯುಕ್ತ) ಪಕ್ಷವು ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಭಾರತೀಯ ಜನತಾ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಈಗಾಗಲೇ ಎನ್ ಪಿ ಎಫ್ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಿರೇನ್ ಸಿಂಗ್, ಮುಂದಿನ ಸರ್ಕಾರದಲ್ಲಿ ಎನ್‌ಪಿಪಿ ನಮ್ಮೊಂದಿಗೆ ಇರುತ್ತದೆ ಎಂದು ನಾನು ಭಾವಿಸುವುದಿಲ್ಲ ಎಂದಿದ್ದಾರೆ. ಈ ಮೂಲಕ ಜೆಡಿಯು ಶಾಸಕರಿಗೆ ಸಚಿವರಾಗುವ ಅವಕಾಶ ಲಭ್ಯವಾಗಲಿವೆ. ಎನ್‌ಪಿಎಫ್ ಹಾಗೂ ಎನ್‌ಪಿಪಿ ಎರಡೂ ಪಕ್ಷಗಳು ಬಿಜೆಪಿ ನೇತೃತ್ವದ ಪ್ರಸ್ತುತ ಆಡಳಿತ ಮೈತ್ರಿಕೂಟದ ಭಾಗವಾಗಿದೆ. ಆದಾಗ್ಯೂ, ಎರಡೂ ಪಕ್ಷಗಳು ಬಿಜೆಪಿಯೊಂದಿಗೆ ಯಾವುದೇ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿಲ್ಲ. ಎಲ್ಲಾ 60 ಸ್ಥಾನಗಳಲ್ಲಿ ಏಕಾಂಗಿಯಾಗಲು ಸ್ಪರ್ಧಿಸಿತ್ತು.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications