Rape Case: ಸಾವಿರಾರು ಜನರಿಂದ ದೀದಿ ನಿವಾಸಕ್ಕೆ ಮುತ್ತಿಗೆ- ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನಾಕಾರರ ಆಕ್ರೋಶ!
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಆಗ್ರಹಿಸಿ ಕೋಲ್ಕತ್ತಾದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ವಿದ್ಯಾರ್ಥಿಗಳು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದರು. ಪೊಲೀಸ್ ಬ್ಯಾರಿಕೇಡ್‌ಗಳನ್ನು ತಳ್ಳಿ ನುಗ್ಗಲು ಪ್ರಯತ್ನಿಸಿದರು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗಿಳಿದು ವಿದ್ಯಾರ್ಥಿಗಳು ಪ್ರತಿಭಟಿಸಿದರು.
ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಈ ಪ್ರತಿಭಟನೆಗೆ ನಬಣ್ಣ ಅಭಿಯಾನ (Nabanna Protest) ಎಂದು ಹೆಸರಿಡಲಾಗಿದೆ. ಹೌರಾದಲ್ಲಿರುವ ನಬಣ್ಣ ಭವನ ರಾಜ್ಯ ಸಚಿವಾಲಯವಾಗಿದ್ದು, ಈ ಸ್ಥಳದಲ್ಲಿ ಪ್ರತಿಭಟನಾಕಾರರು ಹೆಚ್ಚಿನ ಸಂಖ್ಯೆಯಲ್ಲಿ ನರೆದಿದ್ದರು. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಬಿಗಿ ಭದ್ರತೆಯನ್ನು ಈ ಸ್ಥಳದಲ್ಲಿ ಒದಗಿಸಲಾಗಿದೆ.

ಹೌದು... ಕೋಲ್ಕತ್ತಾದಲ್ಲಿ ಪ್ರತಿಭಟನೆಯ ನಿಮಿತ್ತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿತ್ತು. ಹೌರಾ ಸೇತುವೆಯನ್ನು ಮುಚ್ಚಿ, ಸೇತುವೆಯ ಮೇಲೆ ಪೊಲೀಸರು ಕಬ್ಬಿಣದ ತಡೆ ಗೋಡೆಯನ್ನು ನಿರ್ಮಿಸಿದ್ದರು. ಜೊತೆಗೆ ಸಿಎಂ ನಿವಾಸಕ್ಕೂ ಬಿಗಿ ಭದ್ರತೆ ನೀಡಲಾಗಿತ್ತು. ಅಲ್ಲದೆ ಕೋಲ್ಕತ್ತಾದ ಹೇಸ್ಟಿಂಗ್ಸ್‌ನಲ್ಲಿರುವ ಫೋರ್ಟ್ ವಿಲಿಯಂ ಹಿಂಭಾಗದ ಚೆಕ್ ಗೇಟ್‌ಗಳ ಮೇಲೆ ತೈಲವನ್ನು ಲೇಪಿಸಿರುವುದು ಕಂಡುಬಂದಿದೆ. ಹೀಗೆ ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಹತ್ತುವುದನ್ನು ತಡೆಯಲಾಯಿತು.
#WATCH | West Bengal: Protestors climb atop Police barricades, clash with Police personnel and break away the barricades at Santragachi in Howrah, as they carry out 'Nabanna Abhiyan' march over RG Kar Medical College and Hospital rape-murder case. pic.twitter.com/5fZKLJCQv6
— ANI (@ANI) August 27, 2024
ಪ್ರತಿಭಟನಾಕಾರರನ್ನು ಹತ್ತಿಕ್ಕಲು ಮೊದಲು ಹೇಸ್ಟಿಂಗ್ಸ್‌ನಲ್ಲಿ ಪೊಲೀಸರು ನೀರಿನ ಫಿರಂಗಿಗಳನ್ನು ಬಳಸಿದರು. ಇದರಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಅಲ್ಲದೆ ಡ್ರೋನ್‌ಗಳ ಮೂಲಕವೂ ನಿಗಾ ಇಡಲಾಗಿತ್ತು. ಹೌರಾ ಕಮಿಷನರೇಟ್‌ನ ಸುಮಾರು ಎರಡು ಸಾವಿರ ಪೊಲೀಸರನ್ನು ನಬಣ್ಣ ಸುತ್ತಮುತ್ತ ನಿಯೋಜಿಸಲಾಗಿತ್ತು.

6,000 ಹೆಚ್ಚುವರಿ ಪೊಲೀಸರ ನಿಯೋಜನೆ
ನಗರದಲ್ಲಿ ಯಾವುದೇ ಅಶಾಂತಿ ಉಂಟಾಗದಂತೆ ಸುಮಾರು 6,000 ಹೆಚ್ಚುವರಿ ಪೊಲೀಸರನ್ನು ರಸ್ತೆಗಳಲ್ಲಿ ನಿಯೋಜಿಸಲಾಗಿದೆ. 19 ಕಡೆ ಬ್ಯಾರಿಕೇಡ್ ಹಾಕಲಾಗಿದೆ. ಹೆಚ್ಚುವರಿ ಪೊಲೀಸ್ ಕಮಿಷನರ್ ಮಟ್ಟದ ಅಧಿಕಾರಿಗಳು ಸಹ ರಸ್ತೆಗಳಲ್ಲಿ ನಿಂತು ಭದ್ರತಾ ವ್ಯವಸ್ಥೆಗಳ ಮೇಲೆ ಕಣ್ಣಿಟ್ಟಿರುವುದು ಕಂಡುಬಂದಿದೆ.
#WATCH | West Bengal: 'Nabanna Abhiyan' march begins; protestors gather at Santragachi in Howrah over RG Kar Medical College and Hospital rape-murder case. pic.twitter.com/4y7aeAjPYd
— ANI (@ANI) August 27, 2024
ಕೋಲ್ಕತ್ತಾದಲ್ಲಿ ಪ್ರತಿಭಟನೆ ನಡೆಸುತ್ತಿರುವವರು ಯಾರು?
ವಿದ್ಯಾರ್ಥಿ ಸಂಘಟನೆಗಳಾದ 'ಪಶ್ಚಿಮ ಬಂಗಾ ಛತ್ರ ಸಮಾಜ' ಮತ್ತು 'ಸಂಗ್ರಾಮಿ ಜೌತ ಮಂಚ್' ತಮ್ಮ 'ನಬಣ್ಣ ಅಭಿಜನ್' ರ್ಯಾಲಿಯನ್ನು ಆಯೋಜಿಸಿವೆ. ಪಶ್ಚಿಮ ಬಂಗಾ ಛತ್ರ ಸಮಾಜವು ನೋಂದಾಯಿಸದ ವಿದ್ಯಾರ್ಥಿ ಸಮೂಹವಾಗಿದೆ, ಆದರೆ ಸಂಗ್ರಾಮಿ ಜೌತಾ ಮಂಚ್ ರಾಜ್ಯ ಸರ್ಕಾರಿ ನೌಕರರನ್ನು ಪ್ರತಿನಿಧಿಸುತ್ತದೆ.
#WATCH | West Bengal: Check gates at the backside of Fort William at Hastings, in Kolkata being greased by civic volunteers, in an attempt to likely thwart protesters from scaling the barricades.
— ANI (@ANI) August 27, 2024
A march to Nabanna has been called today, over RG Kar Medical College and Hospital… pic.twitter.com/nHGg9lyIRF
ಮಮತಾ ಬ್ಯಾನರ್ಜಿ ವಿರುದ್ಧ ಪ್ರತಿಭಟನೆ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ-ಕೊಲೆ ಪ್ರಕರಣದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು. ಆಡಳಿತ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕೂಡಲೆ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಬೇಕು ಎಂದು ಘೋಷಣೆಗಳನ್ನು ಕೂಗಿದರು. ಈ ವೇಳೆ ಮುತ್ತಿಗೆ ಹಾಕಲು ಮುಂದಾದ ವಿದ್ಯಾರ್ಥಿಗಳನ್ನು ಪೊಲೀಸರು ತಡೆಯಲು ಜಲಫಿರಂಗಿ ಬಳಕೆ ಮಾಡಿ ವಿದ್ಯಾರ್ಥಿಗಳನ್ನು ಚದುರಿಸುವ ಪ್ರಯತ್ನ ಮಾಡಿದರು.
-
ಕನ್ನಡಿಗರಿಗಿಂತ ಕೇರಳದವರೇ ಅದೃಷ್ಟವಂತರು: ವಯನಾಡಿಗೆ ಸಿದ್ದರಾಮಯ್ಯರಿಂದ 10 ಕೊಟಿ ರೂ ಅನುದಾನ: ಆಕ್ರೋಶ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
ಇಡೀ ಸರ್ಕಾರವೇ ಉಮೇಶ್ ಮೇಟಿ ಜೊತೆಗಿದೆ: ಬಾಗಲಕೋಟೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಡಿ.ಕೆ.ಶಿವಕುಮಾರ್ ಅಭಯ -
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications