ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Nagaland Assembly Election 2023: ಬಿಜೆಪಿ 20 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!

ನಾಗಾಲ್ಯಾಂಡ್‌ನಲ್ಲಿ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಇಂದು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

|
Google Oneindia Kannada News

ಕೋಹಿಮ ಫೆಬ್ರವರಿ 2: ನಾಗಾಲ್ಯಾಂಡ್‌ನಲ್ಲಿ ವಿಧಾನಸಭೆ ಚುನಾವಣೆಗೆ ಪಕ್ಷಗಳ ಸಕಲ ಸಿದ್ದತೆ ಭರದಿಂದ ಸಾಗಿದೆ. ಚುನಾವಣೆಗೆ ಇನ್ನೇನು ಒಂದು ತಿಂಗಳು ಬಾಕಿ ಇದ್ದು ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಗಳನ್ನು ಬಿಡುಗಡೆ ಮಾಡುತ್ತಿವೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಇಂದು ತನ್ನ 20 ಅಭ್ಯರ್ಥಿಗಳನ್ನು ಘೋಷಿಸಿದೆ. ಪಕ್ಷವು ತನ್ನ ರಾಜ್ಯಾಧ್ಯಕ್ಷ ತೆಮ್ಜೆನ್ ಇಮ್ನಾ ಅವರನ್ನು ಅಲೋಂಗ್ಟಾಕಿ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಿದೆ.

ಬಿಜೆಪಿಯು ನಾಗಾಲ್ಯಾಂಡ್‌ನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನ್ಯಾಷನಲ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (NDPP) ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಲು ನಿರ್ಧರಿಸಿದೆ. ಬಿಜೆಪಿ 20 ಸ್ಥಾನಗಳಲ್ಲಿ ಮತ್ತು ಎನ್‌ಡಿಪಿಪಿ 40 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

ಕರ್ನಾಟಕ ಬಿಜೆಪಿಯು 300 ಪರ್ಸೆಂಟ್ ಕಮಿಷನ್ ಸರ್ಕಾರ: ಸಿದ್ದರಾಮಯ್ಯಕರ್ನಾಟಕ ಬಿಜೆಪಿಯು 300 ಪರ್ಸೆಂಟ್ ಕಮಿಷನ್ ಸರ್ಕಾರ: ಸಿದ್ದರಾಮಯ್ಯ

ನಾಗಾಲ್ಯಾಂಡ್‌ನಲ್ಲಿ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಜನವರಿ 18ರಂದು ಪ್ರಕಟಿಸಿತು. ಪ್ರಸ್ತುತ ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (ಎನ್‌ಡಿಪಿಪಿ) ಅಧಿಕಾರದಲ್ಲಿರುವ ಈಶಾನ್ಯ ರಾಜ್ಯದಲ್ಲಿ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ. ನಾಗಾಲ್ಯಾಂಡ್‌ನಲ್ಲಿ ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಫೆಬ್ರವರಿ 27 ರಂದು ಮತದಾನ ನಡೆಯಲಿದ್ದು, ಮಾರ್ಚ್ 2 ರಂದು ಮತ ಎಣಿಕೆ ನಡೆಯಲಿದೆ.

Nagaland Assembly Election 2023: BJP Releases List of 20 Candidates!

ತ್ರಿಪುರಾ ಮತ್ತು ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯ ದಿನಾಂಕಗಳನ್ನು ಚುನಾವಣಾ ಆಯೋಗ ಜನವರಿ 18ರಂದು ಪ್ರಕಟಿಸಿತು. ಆಯೋಗದ ಪ್ರಕಾರ, ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾ ಒಟ್ಟು 62.8 ಲಕ್ಷ ಮತದಾರರನ್ನು ಹೊಂದಿದ್ದು, ಇದರಲ್ಲಿ 31.47 ಲಕ್ಷ ಮಹಿಳಾ ಮತದಾರರು, ಇವರಲ್ಲಿ 97,000 ಮತದಾರರು 80+ ವಯಸ್ಸಿನವರಾಗಿದ್ದಾರೆ ಮತ್ತು 31,700 ವಿಕಲಚೇತನ ಮತದಾರರು ಇದ್ದಾರೆ. ಚುವಾವ್‌ನಲ್ಲಿ ವಿಕಲಚೇತನ ಮತದಾರರಿಗೆ ಪ್ರತ್ಯೇಕ ಮತದಾನದ ವ್ಯವಸ್ಥೆ ಮಾಡಲಾಗುವುದು ಎಂದು ಆಯೋಗ ತಿಳಿಸಿದೆ.

ನಾಗಾಲ್ಯಾಂಡ್ ವಿಧಾನಸಭೆ ಚುನಾವಣೆ 2018

2018 ರ ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯಲ್ಲಿ ನಾಗಾ ಪೀಪಲ್ಸ್ ಫ್ರಂಟ್ 26 ಸ್ಥಾನಗಳನ್ನು ಗೆದ್ದಿದೆ. ನ್ಯಾಷನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ 18 ಸ್ಥಾನಗಳನ್ನು, ಭಾರತೀಯ ಜನತಾ ಪಕ್ಷ 12 ಸ್ಥಾನಗಳನ್ನು ಗೆದ್ದಿದೆ. ಇನ್ನೂ ನ್ಯಾಷನಲ್ ಪೀಪಲ್ಸ್ ಪಾರ್ಟಿ 2 ಸ್ಥಾನಗಳನ್ನು ಗೆದ್ದಿದೆ, ಜೆಡಿ-ಯು 1 ಸ್ಥಾನ ಮತ್ತು 1 ಸ್ಥಾನವನ್ನು ಸ್ವತಂತ್ರ ಅಭ್ಯರ್ಥಿ ಗೆದ್ದಿದ್ದಾರೆ. ಚುನಾವಣೆಯ ನಂತರ NDPP ಮತ್ತು ಭಾರತೀಯ ಜನತಾ ಪಾರ್ಟಿಯ ಒಕ್ಕೂಟ ರಾಜ್ಯ ಸರ್ಕಾರವನ್ನು ರಚಿಸಿತು, ನೇಫಿಯು ರಿಯೊ ಮುಖ್ಯಮಂತ್ರಿಯಾದರು.

Nagaland Assembly Election 2023: BJP Releases List of 20 Candidates!

ನಾಗಾಲ್ಯಾಂಡ್‌ನ ವಿಧಾನಸಭೆಯು 60 ಸ್ಥಾನಗಳನ್ನು ಹೊಂದಿದೆ. ಆಡಳಿತಾರೂಢ ಮಿತ್ರ ಪಕ್ಷಗಳು ಯುನೈಟೆಡ್ ಡೆಮಾಕ್ರಟಿಕ್ ಅಲೈಯನ್ಸ್ (ಯುಡಿಎ) ಎನ್‌ಡಿಪಿಪಿ, ಬಿಜೆಪಿ ಮತ್ತು ನಾಗಾ ಪೀಪಲ್ಸ್ ಫ್ರಂಟ್ (ಎನ್‌ಪಿಎಫ್) ಈ ಬಾರಿ ಜಯ ಸಾಧಿಸಲು ಚುನಾವಣಾ ಕಣಕ್ಕಿಳಿಯಲಿವೆ.

English summary
Bharatiya Janata Party (BJP) today announced its 20 candidates for the Assembly elections in Nagaland. The party has fielded its state president Temzen Imna from Alongtaki assembly constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X