• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನಾಗಾಲ್ಯಾಂಡ್ ನಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತ

|

ನವದೆಹಲಿ, ಫೆಬ್ರವರಿ.23: ದೇಶಾದ್ಯಂತ ಇಂಧನ ಬೆಲೆ ಏರುಮುಖವಾಗಿ ಸಾಗುತ್ತಿದೆ. ನಾಗಾಲ್ಯಾಂಡ್ ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ವಿಧಿಸಿದ್ದ ತೆರಿಗೆಯನ್ನು ಕಡಿತಗೊಳಿಸಲಾಗಿದೆ. ಸೋಮವಾರ ಮಧ್ಯರಾತ್ರಿಯಿಂದಲೇ ಹೊಸ ದರ ಜಾರಿಗೆ ಬರಲಿದೆ.

ನಾಗಾಲ್ಯಾಂಡ್ ನಲ್ಲಿ ಒಂದು ಲೀಟರ್ ಪೆಟ್ರೋಲ್ ಮೇಲಿನ ತೆರಿಗೆ ದರದಲ್ಲಿ ಶೇ.29.80ರಿಂದ ಶೇ.25ಕ್ಕೆ ಇಳಿಸಲಾಗಿದೆ. ಇದರಿಂದ ಪೆಟ್ರೋಲ್ ದರದ ಮೇಲೆ ವಿಧಿಸಿದ್ದ ತೆರಿಗೆಯು 18.26 ರೂಪಾಯಿಯಿಂದ 16.04 ರೂಪಾಯಿ ಆಗುತ್ತದೆ.

ಸಿಹಿಸುದ್ದಿ: ಈ ನಾಲ್ಕು ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಕಡಿಮೆ!

ರಾಜ್ಯ ಸರ್ಕಾರದಿಂದ ಡೀಸೆಲ್ ಮೇಲೆ ವಿಧಿಸುತ್ತಿದ್ದ ತೆರಿಗೆ ದರವನ್ನು ಇಳಿಕೆ ಮಾಡಲಾಗಿದೆ. ಡೀಸೆಲ್ ಮೇಲೆ ಶೇ.17.50ರ ಬದಲಿಗೆ ಶೇ.16.50ರಷ್ಟು ತೆರಿಗೆ ವಿಧಿಸಲಾಗುತ್ತದೆ. ಈ ಹಿನ್ನೆಲೆ ಡೀಸೆಲ್ ಮೇಲಿನ ತೆರಿಗೆ ದರವು 11.08 ರಿಂದ 10.51 ರೂಪಾಯಿಗೆ ಇಳಿಕೆಯಾಗಿದೆ.

ಪೆಟ್ರೋಲ್, ಡೀಸೆಲ್ ದರ ಇಳಿಕೆ:

ನಾಗಾಲ್ಯಾಂಡ್ ನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ ಮೇಲೆ 2.22 ರೂಪಾಯಿ ಇಳಿಕೆ ಮಾಡಲಾಗಿದೆ. ಡೀಸೆಲ್ ದರದಲ್ಲಿ 57 ಪೈಸೆ ಇಳಿಸಲಾಗಿದೆ. ರಾಜ್ಯದ ದೀಮಾಪುರ್ ನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 92 ರೂಪಾಯಿ ಮತ್ತು ಡೀಸೆಲ್ ದರ 83 ರೂಪಾಯಿ ಇದೆ. ಕೋಹಿಮಾದಲ್ಲಿ ಒಂದು ಲೀಟರ್ ಪೆಟ್ರೋಲ್ ದರ 93 ರೂಪಾಯಿಯಿದ್ದು, ಡೀಸೆಲ್ ದರವು 84 ರೂಪಾಯಿ ಇದೆ. ರಾಜ್ಯದ ಪ್ರಯಾಣಿಕರಿಗೆ ಮತ್ತು ಸಾರಿಗೆ ವ್ಯವಸ್ಥೆಗೆ ಧಕ್ಕೆ ಬಾರದಂತೆ ನೋಡಿಕೊಳ್ಳುವ ಉದ್ದೇಶದಿಂದಾಗಿ ಭಾರತದ ನಾಲ್ಕು ರಾಜ್ಯಗಳಲ್ಲಿ ಇಂಧನ ಬೆಲೆಯ ಮೇಲೆ ತೆರಿಗೆ ವಿನಾಯಿತಿ ನೀಡಲಾಗಿದೆ. ಪಶ್ಚಿಮ ಬಂಗಾಳ, ರಾಜಸ್ಥಾನ, ಅಸ್ಸಾಂ ಮತ್ತು ಮೇಘಾಲಯಗಳಲ್ಲಿ ವಿನಾಯಿತಿ ನೀಡಲಾಗಿದೆ.

English summary
Nagaland Government Cuts Taxes On Petrol And Diesel From 29.80% To 25% Per Litre.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X