ಮಹಾರಾಷ್ಟ್ರ ನಂತರ ಮತ್ತೊಂದು ರಾಜ್ಯದಲ್ಲಿ ಲಾಕ್‌ಡೌನ್‌ ವಿಸ್ತರಣೆ

ಕೊಹಿಮಾ, ಜೂನ್ 29: ಕೊರೊನಾ ವೈರಸ್ ಲಾಕ್‌ಡೌನ್‌ನ ಇನ್ನೊಂದು ಹಂತ ಈ ತಿಂಗಳ ಅಂತ್ಯಕ್ಕೆ ಮುಕ್ತಾಯವಾಗಲಿದೆ. ಲಾಕ್‌ಡೌನ್‌ ಕಡೆಯಿಂದ ಅನ್‌ಲಾಕ್‌ ಕಡೆ ಹೆಜ್ಜೆಯಿಟ್ಟಿದ್ದ ಭಾರತ ಈಗ ಮತ್ತೊಮ್ಮೆ ಲಾಕ್‌ಡೌನ್‌ ಕಡೆ ಸಾಗುತ್ತಿದೆ. ಹೌದು, ಜೂನ್ 30ರ ಬಳಿಕ ದೇಶದಲ್ಲಿ ಮತ್ತೆ ಲಾಕ್‌ಡೌನ್‌ ಮುಂದುವರಿಯುವ ಸೂಚನೆ ಸಿಕ್ಕಿದೆ.

Recommended Video

      Lunar Eclipse July 5th : ಜುಲೈ 5ಕ್ಕೆ ಚಂದ್ರ ಗ್ರಹಣ , ಇಲ್ಲಿದೆ ಕಂಪ್ಲೀಟ್ ಮಾಹಿತಿ | Oneindia Kannada

      ಒಂದರ ಹಿಂದೆ ಮತ್ತೊಂದರಂತೆ ರಾಜ್ಯಗಳು ಲಾಕ್‌ಡೌನ್‌ ವಿಸ್ತರಣೆ ಮಾಡುತ್ತಿದೆ. ಸೋಮವಾರ ಮಧ್ಯಾಹ್ನವಷ್ಟೇ ಮಹಾರಾಷ್ಟ್ರ ಸರ್ಕಾರ ಜುಲೈ 30ರ ವರೆಗೂ ರಾಜ್ಯದಲ್ಲಿ ಲಾಕ್‌ಡೌನ್‌ ಘೋಷಣೆ ಮಾಡಿತ್ತು. ಇದೀಗ, ಸಂಜೆ ವೇಳೆಗೆ ಇನ್ನೊಂದು ರಾಜ್ಯ ಲಾಕ್‌ಡೌನ್‌ ಜಾರಿ ಮಾಡಿದೆ.

      ನಾಗಲ್ಯಾಂಡ್‌ ಸರ್ಕಾರವೂ ರಾಜ್ಯದಲ್ಲಿ ಲಾಕ್‌ಡೌನ್‌ ಮುಂದುವರಿಸುತ್ತಿದ್ದು, ಜುಲೈ 15ರ ವರೆಗೂ ರಾಜ್ಯವನ್ನು ಬಂದ್ ಮಾಡುವುದಾಗಿ ಸರ್ಕಾರದ ವಕ್ತಾರ ಮಾಹಿತಿ ನೀಡಿದ್ದಾರೆ ಎಂದು ಪಿಟಿಐ ತಿಳಿಸಿದೆ.

      ನಾಗಲ್ಯಾಂಡ್ ಮುಖ್ಯಮಂತ್ರಿ ನೀಫಿಯು ರಿಯೊ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಲಾಕ್‌ಡೌನ್‌ ಮಾಡಲು ನಿರ್ಧರಿಸಲಾಗಿದೆ ಎಂದು ವಕ್ತಾರರು ಹೇಳಿದ್ದಾರೆ.

      Nagaland government has extended lockdown till July 15

      ರಾಜ್ಯದಲ್ಲಿ ಇಂದು 31 ಜನರಿಗೆ ಕೊವಿಡ್ ಸೋಂಕು ತಗುಲಿದೆ ಎಂದು ವರದಿಯಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 451ಕ್ಕೆ ಏರಿಕೆಯಾಗಿದೆ. 164 ಜನರು ಸೋಂಕಿನಿಂದ ಗುಣಮುಖರಾಗಿದ್ದು, 283 ಕೇಸ್‌ಗಳು ಸಕ್ರಿಯವಾಗಿದೆ.

      ಇದಕ್ಕೂ ಮುಂಚೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ರಾಜ್ಯದಲ್ಲಿ ಜುಲೈ 31ರ ವರೆಗೂ ಲಾಕ್‌ಡೌನ್‌ ವಿಸ್ತರಿಸಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+