Nagaland Landslide: ಕಾರುಗಳ ಮೇಲೆ ಉರುಳಿದ ಬಂಡೆಗಳು, ಇಬ್ಬರು ಸಾವು: ಭಯಾನಕ ವಿಡಿಯೋ!

ಉತ್ತರ ಭಾರತದಲ್ಲಿ ಭಾರಿ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಗುಡ್ಡಗಾಡು ರಾಜ್ಯವಾದ ನಾಗಾಲ್ಯಾಂಡ್‌ನಲ್ಲಿ ಕೂಡ ಭಾರಿ ಮಳೆಯಾಗುತ್ತಿದ್ದು ಹಲವು ಕಡೆಗಳಲ್ಲಿ ಭೂ ಕುಸಿತವಾದ ವರದಿಗಳಾಗಿವೆ. ಆದರೆ ಮಂಗಳವಾರ ನಡೆದ ದುರಂತದಲ್ಲಿ ಬಂಡೆಗಳು ಕಾರಿನ ಮೇಲೆ ಉರುಳಿ ಇಬ್ಬರನ್ನು ಬಲಿ ಪಡೆದುಕೊಂಡಿವೆ.

ಇಲ್ಲಿನ ಕೊಹಿಮಾ-ದಿಮಾಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಬಂಡೆಗಳು ಉರುಳಿ ಮೂರು ಕಾರುಗಳನ್ನು ಧ್ವಂಸಗೊಳಿಸಿವೆ. ಪೊಲೀಸ್ ಚೆಕ್‌ಪೋಸ್ಟ್ ಬಳಿಯ ಚುಮೌಕೆಡಿಮಾದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.

 Nagaland Landslide: Cars Smashed by Massive Rock in Terrifying Incident

ಗಾಯಗೊಂಡವರು ದಿಮಾಪುರದ ರೆಫರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇನ್ನೊಬ್ಬರ ಪರಿಸ್ಥಿತಿ ಗಂಭೀರವಾಗಿದೆ.

ಭಯಾನಕ ಘಟನೆ ವಿಡಿಯೋ ವೈರಲ್

ಇನ್ನು ಈ ಘಟನೆಯ ಭಯಾನಕ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದೆ. ಕೊಹಿಮಾದಿಂದ ಬರುತ್ತಿದ್ದ ವಾಹನಗಳು, ಪೊಲೀಸ್‌ ತಪಾಸಣೆ ಸ್ಥಳದಲ್ಲಿ ನಿಲ್ಲಿಸಿದ್ದಾಗ ಈ ದುರ್ಘಟನೆ ನಡೆದಿದೆ. ಬೆಟ್ಟದ ಮೇಲಿಂದ ಉರುಳಿ ಬರುವ ಬಂಡೆಗಳು ಕಾರನ್ನು ಧ್ವಂಸಗೊಳಿಸುವುದನ್ನು ವಿಡಿಯೋದಲ್ಲಿ ಕಾಣಬಹುದು. ಒಂದು ಬಂಡೆ ಎರಡು ಕಾರುಗಳನ್ನು ಧ್ವಂಸಗೊಳಿಸಿದರೆ, ಅದರ ಮುಂದೆ ನಿಂತಿದ್ದ ಇನ್ನೊಂದು ಕಾರಿಗೆ ಮತ್ತೊಂದು ಬೃಹತ್ ಬಂಡೆ ಅಪ್ಪಳಿಸಿ ಕಾರು ಪಲ್ಟಿಯಾಗಿ ಪಕ್ಕದಲ್ಲಿ ನಿಂತಿದ್ದ ಟ್ರಕ್‌ಗೆ ಅಪ್ಪಳಿಸುತ್ತದೆ. ಅಪಘಾತದ ದೃಶ್ಯ ಅವರ ಹಿಂದೆ ಇದ್ದ ವಾಹನದ ಡ್ಯಾಶ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಉತ್ತರ ಭಾರತದಲ್ಲಿ ಮಳೆಯ ಅಬ್ಬರ

ಉತ್ತರ ಮತ್ತು ಈಶಾನ್ಯ ಭಾರತದಲ್ಲಿ ಮಳೆ ತೀವ್ರವಾಗಿದ್ದು ಹಲವು ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಹಿಮಾಚಲ ಪ್ರದೇಶ, ದೆಹಲಿ, ನಾಗಾಲ್ಯಾಂಡ್, ಅಸ್ಸಾಂ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದೆ. ದೆಹಲಿ, ಗುರುಗ್ರಾಮಗಳಲ್ಲಿ ಭಾರಿ ಮಳೆಯ ಪರಿಣಾಮ ಹಲವು ರಸ್ತೆಗಳು ಜಲಾವೃತವಾಗಿದ್ದು ವಾಹನ ಸವಾರರು ಪರದಾಡುವಂತಾಗಿದೆ.

ಭಾರಿ ಮಳೆಯಿಂದಾಗಿ ಹಲವು ಕಡೆಗಳಲ್ಲಿ ಭೂಕುಸಿತ ಸಂಭವಿಸಿದ ಬಗ್ಗೆ ಕೂಡ ವರದಿಯಾಗಿದೆ. ಉತ್ತರ ಪ್ರದೇಶದ ಲಕ್ನೋದಲ್ಲಿ ರಸ್ತೆಯೊಂದು ಕುಸಿದು ಕಾರುಗಳು ಹಾನಿಗೊಂಡಿವೆ. ದೆಹಲಿಯ ಜನಕಪುರಿಯಲ್ಲಿ ರಸ್ತೆ ಗುಂಡಿ ಬಿದ್ದ ನಂತರ ದೊಡ್ಡ ಹೊಂಡ ನಿರ್ಮಾಣವಾಗಿದೆ.

ಬಾರಿ ಮಳೆ ಮುನ್ಸೂಚನೆ

ಭಾರತದ ಹಲವು ರಾಜ್ಯಗಳಲ್ಲಿ ಮುಂಗಾರು ಚುರುಕುಗೊಂಡಿದ್ದು ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಹಲವು ರಾಜ್ಯಗಳಿಗೆ ಭಾರಿ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ದೆಹಲಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಭಾರತದ ಹಲವು ಭಾಗಗಳಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.

ಕೇರಳ ರಾಜ್ಯದಲ್ಲಿ ಕೂಡ ಭಾರಿ ಮಳೆಯಾಗುತ್ತಿದ್ದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆಂಧ್ರ ಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಕೂಡ ಮುಂದಿನ ಎರಡು ದಿನಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+