ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಯೋತ್ಪಾದನೆ,ಗೂಂಡಾ ರಾಜಕೀಯ ನಮ್ಮ ಪಕ್ಷ ಸಹಿಸಲ್ಲ: ನಳಿನ್‍ಕುಮಾರ್ ಕಟೀಲ್

|
Google Oneindia Kannada News

ಬೆಂಗಳೂರು,ಡಿಸೆಂಬರ್ 2: ಭಯೋತ್ಪಾದನೆ, ಕ್ರಿಮಿನಲ್ ಚಟುವಟಿಕೆ ಮತ್ತು ಗೂಂಡಾ ರಾಜಕೀಯದಂಥ ದೇಶವಿರೋಧಿ ಚಟುವಟಿಕೆಯನ್ನು ನಮ್ಮ ಪಕ್ಷ ಸಹಿಸುವುದಿಲ್ಲ ಹಾಗೂ ಒಪ್ಪಿಕೊಳ್ಳುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಹೇಳಿದರು.

ಈ ಕುರಿತು ಶುಕ್ರವಾರ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ "ಜಗನ್ನಾಥ ಭವನ"ದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮೊನ್ನೆ ಯಾವುದೋ ಒಂದು ಕಾರ್ಯಕ್ರಮದ ವೇದಿಕೆಯಲ್ಲಿ ನಮ್ಮವರು ಪಾಲ್ಗೊಂಡಿದ್ದನ್ನು ಗಮನಿಸಿದ್ದೇನೆ. ಆ ಕುರಿತಂತೆ ವಿವರಣೆ ಕೇಳಿದ್ದೇನೆ. ಯಾವುದೇ ಕಾರಣಕ್ಕೆ ಕ್ರಿಮಿನಲ್ ಹಿನ್ನೆಲೆ ಉಳ್ಳವರನ್ನು ಪಕ್ಷಕ್ಕೆ ಸೇರಿಸುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದೇನೆ. ಇಲ್ಲಿಗೆ ಈ ವಿಷಯಕ್ಕೆ ಮುಕ್ತಾಯ ಹಾಕುತ್ತೇನೆ ಎಂದು ತಿಳಿಸಿದರು.

ಬೆಂಗಳೂರು ಬಳಿ ಚಿರತೆ ಪ್ರತ್ಯಕ್ಷ, ಜನರ ಆತಂಕ ಬೆಂಗಳೂರು ಬಳಿ ಚಿರತೆ ಪ್ರತ್ಯಕ್ಷ, ಜನರ ಆತಂಕ

ಡಿ.ಕೆ.ಶಿವಕುಮಾರ್ ಯಾರ ಶಿಷ್ಯ?

ಎಲ್ಲಿಂದ ರಾಜಕಾರಣಕ್ಕೆ ಬಂದರು ಎಂದು ನಾನೇನೂ ಬಹಿರಂಗ ಪಡಿಸಬೇಕಿಲ್ಲ. ಡಿ.ಕೆ.ಶಿವಕುಮಾರ್ ಇತಿಹಾಸ, ವ್ಯವಸ್ಥೆಗಳು, ರಕ್ತಸಿಕ್ತ ಕಾಂಗ್ರೆಸ್‍ನ ಚಟುವಟಿಕೆಗಳು ನನಗಿಂತ ಹೆಚ್ಚಾಗಿ ಬೆಂಗಳೂರಿನ ಜನರಿಗೆ ತಿಳಿಸಿದೆ ಎಂದರು.

nalin kumar kateel outraged on Dk shivakumar

ದೆಹಲಿ ಸೇರಿ ದೇಶದಲ್ಲಿ ಸಿಕ್ಖರ ನರಮೇಧ ಯಾರು ಮಾಡಿದ್ದಾರೆ ಎಂಬುದಕ್ಕೆ ನಾವೇನೂ ಉತ್ತರ ಕೊಡುವ ಅವಶ್ಯಕತೆ ಇಲ್ಲ. ಹಿಂದೆ ಬಾಣಲೆಯಲ್ಲಿ ಬೆಂಕಿ ಹಾಕಿ ಯಾರನ್ನೋ ಸುಟ್ಟಿದ್ದಕ್ಕೆ ಕಾಂಗ್ರೆಸ್‍ನಲ್ಲಿ ಉದಾಹರಣೆಗಳಿವೆ.

ರಾಜಕೀಯ ವ್ಯವಸ್ಥೆಯಲ್ಲಿ ಸಹಜವಾಗಿ ಕೆಲವೊಂದು ಅಚಾತುರ್ಯಗಳಾಗುತ್ತವೆ. ಇಂಥ ಘಟನೆಗಳು, ಕ್ರಿಮಿನಲ್ ಕೇಸುಗಳ ಕಾರಣವನ್ನೂ ಗಮನಿಸುತ್ತೇವೆ. ಎಲ್ಲ ಪ್ರಕರಣಗಳನ್ನೂ ಒಂದೇರೀತಿ ನೋಡಲು ಸಾಧ್ಯವಿಲ್ಲ. ನಮ್ಮ ಸಂಘಟನೆಯ ಎಲ್ಲರ ಮೇಲೂ ಪ್ರಕರಣಗಳನ್ನು ದಾಖಲಿಸಿದ್ದಾರೆ. ಹಿಂದುತ್ವದ ಪರವಾದ ಹೋರಾಟ ಮಾಡಿದ್ದರ ವಿರುದ್ಧ ಕೇಸುಗಳೂ ಇವೆ.

ಕಾಂಗ್ರೆಸ್ ಆಡಳಿತದಲ್ಲಿ ಇದ್ದಾಗ ಎಲ್ಲರ ಮೇಲೆ ಪ್ರಕರಣ ದಾಖಲಿಸಿದೆ; ರೌಡಿ ಲಿಸ್ಟ್‍ಗೆ ಸೇರಿಸಿದೆ. ಅಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಕೆಲಸ ಮಾಡಿದ ಹತ್ತಾರು ಜನ ಪತ್ರಕರ್ತರನ್ನೂ ಸಿದ್ದರಾಮಣ್ಣ ಸರಕಾರವು ಜೈಲಿಗೆ ತಳ್ಳಿತ್ತು ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ಹೀಗಾಗಿ ಎಲ್ಲವನ್ನೂ ನಾವು ತುಲನೆ ಮಾಡುತ್ತಿದ್ದೇವೆ. ಇಂಥ ಅಚಾತುರ್ಯಗಳ ಕೇಸುಗಳ ಕುರಿತು ಪರಿಶೀಲಿಸುತ್ತಿದ್ದೇವೆ ಎಂದ ಅವರು ತಿಳಿಸಿದರು.

nalin kumar kateel outraged on Dk shivakumar

ಏನಿದು ವಿವಾದ?

ಚಾಮರಾಜಪೇಟೆಯ ಬಿ.ಎಸ್‌. ವೆಂಕಟರಾಮ್‌ ಕಲಾಭವನದಲ್ಲಿಸೈಲೆಂಟ್‌ ಸುನೀಲ್‌ ಭಾನುವಾರ ಬೃಹತ್‌ ರಕ್ತದಾನ ಶಿಬಿರ ಈ ಕಾರ್ಯಕ್ರಮದಲ್ಲಿ ತೇಜಸ್ವಿ ಸೂರ್ಯ, ಪಿ.ಸಿ. ಮೋಹನ್‌, ಬಿಜೆಪಿ ಶಾಸಕ ಉದಯ್‌ ಗರುಡಾಚಾರ್‌, ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಎನ್‌.ಆರ್‌. ರಮೇಶ್‌ ಹಾಗೂ ಇತರರು ಸೈಲೆಂಟ್‌ ಸುನೀಲ್‌ ಜತೆಗೆ ವೇದಿಕೆ ಹಂಚಿಕೊಂಡಿದ್ದ ಬಗ್ಗೆ ವ್ಯಾಪಕ ಆಕ್ಷೇಪ ಕೇಳಿಬಂದಿತ್ತು. ಇದು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.

English summary
BJP will not tolerate anti-national activities like goon politics says nalin kumar kateel
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X