Namaz: ಪಶ್ಚಿಮ ಬಂಗಾಳ ಏರ್‌ಪೋರ್ಟ್: 136 ವರ್ಷಗಳ ಹಳೆಯ ಬಂಕ್ರಾ ಮಸೀದಿಗೆ ಪ್ರವೇಶ ನಿರ್ಬಂಧ!, ಕಾರಣವೇನು
Namaz: ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಲವು ಮಹತ್ವದ ಬದಲಾವಣೆಗಳು ಆಗಿವೆ. ಇದೀಗ ಪಶ್ವಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದ ಏರ್‌ಪೋರ್ಟ್‌ನಲ್ಲಿ ಮಹತ್ವದ ಕ್ರಮ ತೆಗೆದುಕೊಳ್ಳಲಾಗಿದೆ. ಪಶ್ವಿಮ ಬಂಗಾಳದ ಏರ್‌ಪೋರ್ಟ್‌ನ ವ್ಯಾಪ್ತಿಯ 136 ವರ್ಷಗಳ ಹಳೆಯ ಬಂಕ್ರಾ ಮಸೀದಿಗೆ ಪ್ರವೇಶವನ್ನು ಅನಿರ್ದಿಷ್ಟಾವಧಿಗೆ ನಿಲ್ಲಿಸಲಾಗಿದೆ. ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ಭದ್ರತೆ ಸಂಬಂಧಿಸಿದಂತೆ ಕೆಲವೊಂದು ಕಳವಳ ವ್ಯಕ್ತಪಡಿಸಿದ ಬೆನ್ನಲ್ಲೇ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗಿದೆ. ಇಲ್ಲಿನ ಮಸೀದಿಯಲ್ಲಿ ನಮಾಜ್ ಮಾಡಲು ಅನುಮತಿ ನೀಡಲು ಸದ್ಯಕ್ಕೆ ಸಾಧ್ಯವಿಲ್ಲ ಎಂದು ಕೋಲ್ಕತ್ತಾ ವಿಮಾನ ನಿಲ್ದಾಣದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾ ವಿಮಾನ ನಿಲ್ದಾಣ ವ್ಯಾಪ್ತಿಯಲ್ಲಿರುವ 136 ವರ್ಷ ಹಳೆಯ ಬಂಕ್ರಾ ಮಸೀದಿಗೆ ಪ್ರವೇಶವನ್ನು ಅನಿರ್ದಿಷ್ಟಾವಧಿಗೆ ನಿಲ್ಲಿಸಲಾಗಿದೆ ಎಂದು TOI ವರದಿ ಮಾಡಿದೆ. ಅಲ್ಲದೆ ಆಧಾರ್ ಕಾರ್ಡ್‌ಗಳನ್ನು ಪರಿಶೀಲನೆ ಮಾಡಿ ಮಾತ್ರ ನಿರ್ದಿಷ್ಟ ಸಮುದಾಯದವರಿಗೆ ಪ್ರವೇಶವನ್ನು ಅನುಮತಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಭಾರೀ ಚರ್ಚೆ ನಡೆದಿದೆ.
ಭದ್ರತಾ ವಿಚಾರದಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಆದರೆ ಇದಕ್ಕೂ ಮೊದಲು ಮಳೆಯಿಂದಾಗಿ ಗೌರಿಪುರ ಜಾಮೆ ಮಸೀದಿಗೆ ಪ್ರವೇಶವನ್ನು ಎರಡು ದಿನಗಳವರೆಗೆ ಸ್ಥಗಿತಗೊಳಿಸಿರುವುದಾಗಿ ಹೇಳಲಾಗಿತ್ತು. ಮಳೆಯಿಂದ ಈ ಪ್ರದೇಶದ ಪ್ರಸಿದ್ಧ ಮಸೀದಿಯಲ್ಲಿ ತುರ್ತು ದುರಸ್ತಿ ಕಾರ್ಯ ನಡೆಯುತ್ತಿದೆ ಎಂದು ಹೇಳಲಾಗುತ್ತಿತ್ತು. ನಿಗದಿತ ಸಮಯದಲ್ಲಿ ಕೆಲಸ ಪೂರ್ಣಗೊಂಡರೆ ಸೋಮವಾರದಿಂದ ಪ್ರಾರ್ಥನೆ ಪುನರಾರಂಭಿಸಬಹುದು ಎಂದೂ ಮುಸ್ಲೀಮರಿಗೆ ತಿಳಿಸಲಾಗಿತ್ತು. ಆದರೆ ಇದೀಗ ಮತ್ತೊಂದು ಕಾರಣಕ್ಕೆ ಪ್ರವೇಶ ನಿರ್ಬಂಧಿಸಲಾಗುತ್ತಿದೆ ಎಂದು ವರದಿಯಾಗಿದೆ.

ಮಸೀದಿ ಪ್ರವೇಶಕ್ಕೆ ನಿರ್ಬಂಧವೇಕೆ
ಇನ್ನು ಪಶ್ಚಿಮ ಬಂಗಾಳದ ಕೋಲ್ಕತ್ತಾದ ಏರ್‌ಪೋರ್ಟ್‌ನಲ್ಲಿ ಬಂಕ್ರಾ ಮಸೀದಿಗೆ ಯಾಕೆ ಪ್ರವೇಶ ನೀಡುತ್ತಿಲ್ಲ ಎನ್ನುವುದಕ್ಕೆ ವಿವರಣೆ ನೀಡಲಾಗಿದೆ. ಇದರಲ್ಲಿ ಮುಖ್ಯವಾಗಿ ಭದ್ರತಾ ವಿಷಯವನ್ನು ಉಲ್ಲೇಖಿಸಲಾಗಿದೆ. ಆದಾಗ್ಯೂ, ದುರಸ್ತಿ ಪೂರ್ಣಗೊಂಡಿದ್ದರೂ ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ (BCAS) ಭದ್ರತೆಗೆ ಸಂಬಂಧಿಸಿದಂತೆ ತನ್ನ ಕಳವಳ ಪಡಿಸಿರುವುದೇ ಇದಕ್ಕೆ ಕಾರಣ ಎಂದು ಹೇಳಲಾಗಿದೆ. ಮಸೀದಿಯಲ್ಲಿ ನಮಾಜ್ ಮಾಡಲು ಅನುಮತಿ ನೀಡಲು ಸಾಧ್ಯವಿಲ್ಲ ಎಂದು ಕೋಲ್ಕತ್ತಾ ವಿಮಾನ ನಿಲ್ದಾಣದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ಹೇಳಲಾಗಿದೆ.
ಆಧಾರ್ ಕಾರ್ಡ್ ಆಧಾರದ ಮೇಲೆ ಪ್ರಾರ್ಥನೆಗೆ ಅವಕಾಶ
ಕೋಲ್ಕತ್ತಾದ ವಿಮಾನ ನಿಲ್ದಾಣದಲ್ಲಿ ಭದ್ರತೆ ದೃಷ್ಟಿಯಿಂದ ಸಿಐಎಸ್‌ಎಫ್ ಸಿಬ್ಬಂದಿಯ ಮುಂದೆ ತಮ್ಮ ಆಧಾರ್ ಕಾರ್ಡ್‌ಗಳನ್ನು ತೋರಿಸಿದ ನಂತರ, ಪ್ರತಿದಿನ ಸುಮಾರು 70 ಭಕ್ತರಿಗೆ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಲಾಗುತ್ತಿತ್ತು ಎಂದೂ ಹೇಳಲಾಗಿದೆ. ಭಕ್ತರು ಮಸೀದಿಯನ್ನು ತಲುಪಲು ಬಳಸುವ ಪ್ರವೇಶ ದ್ವಾರವಾದ ಗೇಟ್ 8 ರಲ್ಲಿ ಸಿಐಎಸ್‌ಎಫ್ ಸಿಬ್ಬಂದಿ, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಿಂದ (ಎಎಐ) ಸಿಬ್ಬಂದಿ ನೇಮಕ ಅಥವಾ ಮೊದಲಿನಂತೆ ಪ್ರಾರ್ಥನೆ ಮಾಡುವುದಕ್ಕೆ ಯಾವುದೇ ಆದೇಶ ಬಂದಿಲ್ಲ ಎಂದು ಹೇಳಲಾಗಿದೆ.


Click it and Unblock the Notifications
