ಪ್ರಣಬ್ ಮುಖರ್ಜಿ, ನಾನಾಜಿ, ಭೂಪೇನ್ ಹಜಾರಿಕಾಗೆ ಭಾರತರತ್ನ
Recommended Video

Siddaganga Swamiji : ಸಿದ್ದಗಂಗಾ ಮಠದ ಹೊಸ ಪೀಠಾಧಿಪತಿಗಳಾದ ಸಿದ್ದಲಿಂಗ ಸ್ವಾಮಿಗಳ ಪರಿಚಯ | Oneindia Kannada
ನವದೆಹಲಿ, ಜನವರಿ 25: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಗಾಯಕ ಭೂಪೇನ್ ಹಜಾರಿಕಾ ಹಾಗೂ ನಾನಾಜಿ ದೇಶ್ ಮುಖ್ ಅವರಿಗೆ ಪ್ರಸಕ್ತ ಸಾಲಿನ ದೇಶದ ಅತ್ಯುನ್ನತ ನಾಗರಿಕ ಗೌರವವಾದ 'ಭಾರತರತ್ನ' ಘೋಷಿಸಲಾಗಿದೆ.
70ನೇ ಗಣರಾಜ್ಯೋತ್ಸವದ ಅಂಗವಾಗಿ ಭಾರತರತ್ನ, ಪದ್ಮ ಪ್ರಶಸ್ತಿ ಹಾಗೂ ಶೌರ್ಯ ಪ್ರಶಸ್ತಿಗಳನ್ನು ಘೋಷಿಸಲಾಗುತ್ತದೆ. ಅದರಂತೆ ಈ ಬಾರಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ದೇಶದ ಅತ್ಯುನ್ನತ ಗೌರವ ಸಿಗಲಿದೆ.

ಗ್ರಾಮೀಣಾಭಿವೃದ್ಧಿಗಾಗಿ ಶ್ರಮಿಸಿದ ಆರೆಸ್ಸೆಸ್ ಮುಖಂಡ, ರಾಜಕಾರಣಿ ನಾನಾಜಿ ದೇಶ್ ಮುಖ್ ಹಾಗೂ ಜಾನಪದ ಗಾಯಕ ಭೂಪೇನ್ ಹಜಾರಿಕಾ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿ ಘೋಷಣೆಯಾಗಿದೆ. ಗಣರಾಜ್ಯೋತ್ಸವದ ಶುಭ ಸಂದರ್ಭದಲ್ಲಿ ರಾಷ್ಟ್ರಪತಿ ಭವನದಲ್ಲಿ ನಡೆಯುವ ಸಮಾರಂಭದಲ್ಲಿ ದೇಶದ ಪ್ರಥಮ ಪ್ರಜೆ ರಾಮನಾಥ್ ಕೋವಿಂದ್ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.












Click it and Unblock the Notifications