Breaking: ನಾಂದೇಡ್‌ ಸಂಸದ ವಸಂತರಾವ್ ಚವ್ಹಾಣ್ ನಿಧನ

ಬೆಂಗಳೂರು, ಆಗಸ್ಟ್ 26: ಮಹಾರಾಷ್ಟ್ರದ ನಾಂದೇಡ್ ಲೋಕಸಭಾ ಕ್ಷೇತ್ರದ ಸಂಸದ, ಕಾಂಗ್ರೆಸ್ ನಾಯಕ ವಸಂತರಾವ್ ಚವ್ಹಾಣ್ ವಿಧಿವಶರಾದರು. 2024ರ ಲೋಕಸಭೆ ಚುನಾವಣೆಯಲ್ಲಿ ಅವರು 5,28,894 ಮತಗಳನ್ನು ಪಡೆದು ಜಯಗಳಿಸಿದ್ದರು. ನಾಂದೇಡ್‌ನಲ್ಲಿಯೇ ಸಂಜೆ ಅಂತ್ಯ ಸಂಸ್ಕಾರ ನಡೆಸಲಾಗುತ್ತದೆ ಎಂದು ಕುಟುಂಬದವರು ಹೇಳಿದ್ದಾರೆ. ಮಹಾರಾಷ್ಟ್ರ ರಾಜ್ಯದ ಕಾಂಗ್ರೆಸ್ ನಾಯಕರು ವಸಂತರಾವ್ ಚವ್ಹಾಣ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ 64 ವರ್ಷದ ವಸಂತರಾವ್ ಚವ್ಹಾಣ್ ಸೋಮವಾರ ಬೆಳಗ್ಗೆ ನಿಧನ ಹೊಂದಿದರು. ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ ಮತ್ತು ಪಕ್ಷದ ಇತರ ನಾಯಕರು ವಸಂತರಾವ್ ಚವ್ಹಾಣ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಹಲವು ನಾಯಕರು ಸಂಜೆ ನಡೆಯುವ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲಿದ್ದಾರೆ.

Nanded MP And Congress Leader Vasant Chavan Passes Away

ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ವಸಂತರಾವ್ ಚವ್ಹಾಣ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಪೋಸ್ಟ್ ಹಾಕಿರುವ ಅವರು, "ಹಿರಿಯ ನಾಯಕ, ನಾಂದೇಡ್ ಲೋಕಸಭಾ ಕ್ಷೇತ್ರದ ಸಂಸದ ವಸಂತರಾವ್ ಚವ್ಹಾಣ್ ಹಠಾತ್ ನಿಧನದ ಬಹುದೊಡ್ಡ ನಷ್ಟ. ಕಷ್ಟ ಕಾಲದಲ್ಲಿಯೂ ಅವರ ಪಕ್ಷನಿಷ್ಠೆಯನ್ನು ನೆನಪು ಮಾಡಿಕೊಳ್ಳಬೇಕು. ಅವರ ಕುಟುಂಬದ ದುಃಖದಲ್ಲಿ ಪಕ್ಷವೂ ಭಾಗಿ" ಎಂದು ಹೇಳಿದ್ದಾರೆ.

ಬೀದರ್ ಸಂಸದ ಸಾಗರ್ ಖಂಡ್ರೆ ಸಹ ವಸಂತರಾವ್ ಚವ್ಹಾಣ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. 'ಲೋಕಸಭೆಯಯಲ್ಲಿ ನನ್ನ ಸಹೋದ್ಯೋಗಿಗಳು, ಮಹಾರಾಷ್ಟ್ರದ ನಾಂದೇಡ್ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಶ್ರೀ ವಸಂತರಾವ್ ಚವ್ಹಾಣ್ ಅವರ ಹಠಾತ ನಿಧನದ ಸುದ್ದಿ ತಿಳಿದು ದುಃಖವಾಗಿದೆ. ದೇವರು ಮೃತ ಸಂಸದರ ಆತ್ಮಕ್ಕೆ ಶಾಂತಿಯನ್ನು ನೀಡಲಿ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬ ವರ್ಗದವರಿಗೆ ಹಾಗೂ ಅವರ ಅಭಿಮಾನಿಗಳಿಗೆ ನೀಡಲೆಂದು ಪ್ರಾರ್ಥಿಸುತ್ತೇನೆ' ಎಂದು ಪೋಸ್ಟ್ ಹಾಕಿದ್ದಾರೆ.

ರಾಜ್ಯಸಭಾ ಸದಸ್ಯ ಹಾಗೂ ಮಹಾರಾಷ್ಟ್ರದ ಮಾಜಿ ಸಿಎಂ ಅಶೋಕ್ ಚವ್ಹಾಣ್ ವಸಂತರಾವ್ ಚವ್ಹಾಣ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅವರ ಜೊತೆಗಿನ ಒಡನಾಟವನ್ನು ನೆನಪು ಮಾಡಿಕೊಂಡಿದ್ದಾರೆ. "ವಸಂತರಾವ್ ಚವ್ಹಾಣ್ ನಿಧನದ ಸುದ್ದಿ ಕೇಳಿ ದಿಗ್ಭ್ರಮೆ ಉಂಟಾಯಿತು. ಚಿಕಿತ್ಸೆಗೆ ಸ್ಪಂದಿಸುತ್ತಿದ್ದ ಅವರು ಬೇಗ ಗುಣಮುಖರಾಗಲಿದ್ದಾರೆ ಎಂದು ಅಂದಾಜಿಸಲಾಗಿತ್ತು. ವಸಂತರಾವ್ ಚವ್ಹಾಣ್ ಮತ್ತು ನಾನು ಉತ್ತಮ ಬಾಂಧವ್ಯ ಹೊಂದಿದ್ದೆವು" ಎಂದು ಹೇಳಿದ್ದಾರೆ.

"ವಸಂತರಾವ್ ಚವ್ಹಾಣ್ ಮತ್ತು ನಾನು ಹಲವಾರು ವರ್ಷಗಳ ಕಾಲ ಒಟ್ಟಿಗೆ ರಾಜಕೀಯದಲ್ಲಿ ಇದ್ದೆವು. ವಸಂತರಾವ್ ಚವ್ಹಾಣ್ ತಂದೆ ಮತ್ತು ನಮ್ಮ ತಂದೆ ಒಟ್ಟಿಗೆ ರಾಜಕಾರಣ ಮಾಡಿದ್ದರು. ವಸಂತರಾವ್ ಚವ್ಹಾಣ್ ನಿಧನದಿಂದ ಜನರ ನಾಡಿ ಮಿಡಿತ ಅರಿತಿದ್ದ ನಾಯಕನನ್ನು ಕಳೆದುಕೊಂಡಂತೆ ಆಗಿದೆ" ಎಂದು ಅಶೋಕ್ ಚವ್ಹಾಣ್ ಸಂತಾಪ ಸೂಚಿಸಿದ್ದಾರೆ.

ವಸಂತರಾವ್ ಚವ್ಹಾಣ್ 2024ರ ಲೋಕಸಭೆ ಚುನಾವಣೆಯಲ್ಲಿ 5,28,894 ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿಯಾಗಿದ್ದ ಪ್ರತಾಪೋ ಗೋವಿಂದರಾವ್ ಅವರನ್ನು (469,452 ಮತ) ಸೋಲಿಸಿ ಸಂಸದರಾಗಿ ಆಯ್ಕೆಯಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+