ಅತಿ ಹೆಚ್ಚು ಆಡಳಿತ ನಡೆಸಿದ ಕಾಂಗ್ರೆಸೇತರ ಪ್ರಧಾನಿ ಮೋದಿ
ನವದೆಹಲಿ, ಆಗಸ್ಟ್ 13 : ಅತಿ ಹೆಚ್ಚು ಅವಧಿಗೆ ಆಡಳಿತ ನಡೆದಿ ಕಾಂಗ್ರೆಸೇತರ ಪ್ರಧಾನಿ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಭಾಜನರಾಗಿದ್ದಾರೆ. ಹೆಚ್ಚು ಆಡಳಿತ ನಡೆಸಿದ ಪ್ರಧಾನಿಗಳ ಪಟ್ಟಿಯಲ್ಲಿ ಮೋದಿ ನಾಲ್ಕನೇ ಸ್ಥಾನದಲ್ಲಿದ್ದಾರೆ.
ಗುರುವಾರ ನರೇಂದ್ರ ಮೋದಿ ಅತಿ ಹೆಚ್ಚು ದಿನ ಆಡಳಿತ ನಡೆಸಿದ ಕಾಂಗ್ರೆಸೇತರ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಟಲ್ ಬಿಹಾರಿ ವಾಜಪೇಯಿ ಅವರು 2,268 ದಿನ ಆಡಳಿತವನ್ನು ನಡೆಸಿದ್ದರು.
ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ಈ ಕುರಿತು ಗುರುವಾರ ಟ್ವೀಟ್ ಮಾಡಿದ್ದಾರೆ. ನೆಹರೂ, ಇಂದಿರಾ ಗಾಂಧಿ, ಮನಮೋಹನ್ ಸಿಂಗ್ ಹೆಚ್ಚು ದಿನ ಆಡಳಿತ ನಡೆಸಿದ ಪ್ರಧಾನಿಗಳ ಪಟ್ಟಿಯಲ್ಲಿದ್ದಾರೆ.

ಅತಿ ಹೆಚ್ಚು ದಿನ ಆಡಳಿತ ನಡೆಸಿದ ಕಾಂಗ್ರೆಸೇತರ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಮೋದಿ, ಅತಿ ಹೆಚ್ಚು ದಿನ ಆಡಳಿತ ನಡೆಸಿದ ಪ್ರಧಾನಿಗಳ ಪಟ್ಟಿಯಲ್ಲಿ 4ನೇ ಸ್ಥಾನದಲ್ಲಿದ್ದಾರೆ.
Today, PM Narendra Modi becomes the fourth longest serving PM in the history of India!
— Amit Malviya (@amitmalviya) August 13, 2020
He now also holds the distinction of being the longest serving non-Congress PM.
Vajpayee ji served for 2,268 days, with all his terms put together. Today PM Modi has surpassed that duration.
2014ರಿಂದ 2019ರ ತನಕ ನರೇಂದ್ರ ಮೋದಿ ಪ್ರಧಾನಿಯಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. 2019ರ ಲೋಕಸಭೆ ಚುನಾವಣೆ ಬಳಿಕ 2ನೇ ಅವಧಿಗೂ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಮುಂದುವರೆದಿದ್ದಾರೆ.












Click it and Unblock the Notifications