ಭಯೋತ್ಪಾದನೆ ವಿರುದ್ಧ ಸಂಘಟಿತ ಹೋರಾಟಕ್ಕೆ ಮೋದಿ ಕರೆ
ಅಮೃತಸರದಲ್ಲಿ ನಡೆಯುತ್ತಿರುವ 6ನೇ ಹಾರ್ಟ್ ಆಫ್ ಏಷ್ಯಾ ಸಚಿವರ ಸಮ್ಮೇಳನದಲ್ಲಿ ಭಯೋತ್ಪಾದನೆ ವಿರುದ್ಧ ಸಂಘಟಿತ ಹೋರಾಟಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರದಂದು ಕರೆ ನೀಡಿದರು.
ಅಮೃತ್ ಸರ್(ಪಂಜಾಬ್), ಡಿಸೆಂಬರ್ 04: ಅಮೃತಸರದಲ್ಲಿ ನಡೆಯುತ್ತಿರುವ 6ನೇ ಹಾರ್ಟ್ ಆಫ್ ಏಷ್ಯಾ ಸಚಿವರ ಸಮ್ಮೇಳನದಲ್ಲಿ ಭಯೋತ್ಪಾದನೆ ವಿರುದ್ಧ ಸಂಘಟಿತ ಹೋರಾಟಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರದಂದು ಕರೆ ನೀಡಿದರು.
ಹಾರ್ಟ್ ಆಫ್ ಏಷ್ಯಾ (ಎಚ್ಒಎ) ಸಮಾವೇಶಕ್ಕೆ ವಿದ್ಯುಕ್ತ ಚಾಲನೆ ನೀಡಿ ಮಾತನಾಡಿದ ಪ್ರಧಾನಿ ಮೋದಿ, ಏಷ್ಯಾ ಖಂಡವನ್ನು ಕಾಡುತ್ತಿರುವ ಭಯೋತ್ಪಾದನೆಯನ್ನು ಹತ್ತಿಕ್ಕಲು ಪರಿಣಾಮಕಾರಿಯಾದ ಕ್ರಮ ಅನುಸರಿಸಬೇಕಿದೆ. ಉಗ್ರರಿಗೆ ಆರ್ಥಿಕ ನೆರವು ನೀಡುತ್ತಿರುವವರನ್ನು ಮೊದಲಿಗೆ ಮಟ್ಟ ಹಾಕಬೇಕಿದೆ. ದಕ್ಷಿಣ ಏಷ್ಯಾದಲ್ಲಿ ಶಾಂತಿ ಕದಡುತ್ತಿರುವವರ ವಿರುದ್ಧ ನಿರಂತರ ಹೋರಾಟ ನಡೆಸಬೇಕಿದೆ ಎಂದರು.

ಸುಮಾರು 40 ದೇಶಗಳು ಮತ್ತು ಐರೋಪ್ಯ ಒಕ್ಕೂಟದ ದೇಶಗಳು ಈ ಸಮಾವೇಶದಲ್ಲಿ ಭಾಗವಹಿಸಿವೆ. ಭಾರತ, ಚೀನಾ, ರಷ್ಯಾ, ಇರಾನ್ ಮತ್ತು ಪಾಕಿಸ್ತಾನ ಸೇರಿದಂತೆ 14 ದೇಶಗಳ ಉನ್ನತಾಧಿಕಾರಿಗಳು ಮತ್ತು 17 ಬೆಂಬಲ ರಾಷ್ಟ್ರಗಳ ಪ್ರತಿನಿಧಿಗಳು ಭಯೋತ್ಪಾದನೆ ನಿಗ್ರಹ ಕುರಿತ ಮಹತ್ವದ ವಿದ್ಯಮಾನಗಳ ಬಗ್ಗೆ ಸಮಾಲೋಚಿನೆ ನಡೆಸಿದ್ದಾರೆ.
On India’s part, our commitment to our brave Afghan brothers and sisters is absolute and unwavering: PM @narendramodi
— PMO India (@PMOIndia) December 4, 2016
ಹಾರ್ಟ್ ಆಫ್ ಏಷ್ಯಾ ಸಮಾವೇಶ ಆರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಮತ್ತು ಆಫ್ಘಾನಿಸ್ತಾನ ಅಧ್ಯಕ್ಷ ಅಶ್ರಫ್ ಘನಿ ಸಭೆ ನಡೆಸಿ, ಭಯೋತ್ಪಾದನೆ ಮತ್ತು ಬಾಹ್ಯ ಪ್ರೇರಿತ ಅಸ್ಥಿರತೆ ಬಗ್ಗೆ ಚರ್ಚೆ ನಡೆಸಿದರು.
We should all work to build stronger positive connectivity between Afghanistan and other countries of the region: PM @narendramodi
— PMO India (@PMOIndia) December 4, 2016
ಆಫ್ಘಾನಿಸ್ತಾನದ ಶಾಂತಿ, ಸ್ಥಿರತೆ ಮತ್ತು ಸಮೃದ್ಧಿಗೆ ಮಾರಕವಾಗಿರುವ ಭಯೋತ್ಪಾದನೆ ಮಟ್ಟ ಹಾಕಲು ಹಾಗೂ ಅಫ್ಘಾನಿಸ್ತಾನದ ಅಭಿವೃದ್ಧಿಗೆ ಭಾರತ ನೆರವಾಗಲಿದೆ. ಇದಕ್ಕೆ ಸಮಾನ ಮನಸ್ಕ ದೇಶಗಳ ನೆರವು ಅಗತ್ಯವಿದೆ ಎಂದರು. ಭಾರತ ಶಾಂತಿ, ಸಹಕಾರ, ಸೌಹಾರ್ದತೆಯನ್ನು ಬಯಸುತ್ತದೆ ಎಂದು ಮೋದಿ ಹೇಳಿದರು.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications