ಅನಿವಾಸಿ ಭಾರತೀಯರಿಗೆ ನರೇಂದ್ರ ಮೋದಿ ಅಭಯ
ನ್ಯೂ ಯಾರ್ಕ್, ಸೆ. 29 : ಅಮೆರಿಕದಲ್ಲಿರುವ ಅನಿವಾಸಿ ಭಾರತೀಯರಿಗೆ ನರೇಂದ್ರ ಮೋದಿ ಅಭಯ ನೀಡಿದ್ದಾರೆ. ತವರಿಗೆ ಮರಳಲು ಇದ್ದ ಎಲ್ಲ ರೀತಿಯ ವೀಸಾ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದಾರೆ.
ಇಲ್ಲಿನ ಮ್ಯಾನ್‌ಹಟನ್‌ನಲ್ಲಿರುವ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಸುಮಾರು 20 ಸಾವಿರಕ್ಕೂ ಅಧಿಕ ಎನ್ನಾರೈಗಳನ್ನು ಉದ್ದೇಶಿಸಿ ಮಾಡಿದ ಐತಿಹಾಸಿಕ ಭಾಷಣದಲ್ಲಿ ಈ ಭರವಸೆ ನೀಡಿದ್ದಾರೆ.(ಅರ್ಜಿ ಹಾಕದೆ ಅಮೆರಿಕ ವೀಸಾ ಪಡೆದ ಮೋದಿ!)

ಅಮೆರಿಕದಿಂದ ತವರಿಗೆ ಆಗಮಿಸುವವರಿಗೆ ಯಾವುದೇ ತಾಪತ್ರಯ ಉಂಟಾಗುವುದಿಲ್ಲ. ಶಾಶ್ವತ ವೀಸಾ ನೀಡಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು. ಅಲ್ಲದೇ ಈಗ ಇರುವ ಕೇವಲ 30 ದಿನದ ವೀಸಾ ಅವಧಿಯನ್ನು ಆರು ತಿಂಗಳಿಗೆ ವಿಸ್ತರಿಸುವ ಯೋಚನೆಯಿದೆ ಎಂದು ಹೇಳಿದ್ದಾರೆ.
ಅಲ್ಲದೇ ಅಮೆರಿಕದ ಪ್ರವಾಸಿಗರಿಗೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ತಕ್ಷಣ ವೀಸಾ ನೀಡುವ ವ್ಯವಸ್ಥೆ ಬಗ್ಗೆಯೂ ಚಿಂತಿಸಲಾಗುತ್ತಿದೆ. ಭಾರತೀಯ ಮೂಲದ ಅಮೆರಿಕನ್ನರಿಗೂ ಈ ಯೋಜನೆ ಅನ್ವಯಿಸುತ್ತದೆ ಎಂದು ಹೇಳಿದ್ದಾರೆ. (ಇನ್ನು ಬೆಂಗಳೂರಿನಲ್ಲಿ ಸಿಗಲಿದೆ ಇಸ್ರೇಲ್ ವೀಸಾ)
ಒಂದು ವೇಳೇ ವೀಸಾ ಮುಗಿದರೂ ಅಂದರೆ 180 ದಿನಕ್ಕೂ ಮೀರಿ ಪ್ರವಾಸಿಗರು ಭಾರತದಲ್ಲೇ ಉಳಿದರೆ 30 ದಿನದೊಳಗೆ ಸಮೀಪದ ಪೊಲೀಸ್ ಠಾಣೆಗೋ ಅಥವಾ ಅಧಿಕಾರಿಗಳಿಗೋ ಮಾಹಿತಿ ನೀಡಬೇಕಾಗುತ್ತದೆ. ಈ ಎಲ್ಲ ಅಂಶಗಳನ್ನು ಅಳವಡಿಸಿಕೊಳ್ಳಲು ಚಿಂತಿಸಲಾಗಿದೆ ಎಂದು ತಿಳಿಸಿದ್ದಾರೆ.
ಒಮ್ಮೆ ಭಾರತದ ಪ್ರಜೆಯಾಗಿದ್ದವರಿಗೆ ಒವರ್‌ಸೀಸ್ ಸಿಟಿಜನ್ ಶಿಪ್ ಕಾರ್ಡ್(ಒಸಿಐ) ನೀಡಲಾಗುವುದು. ಇವರು ಸಹ ಎಲ್ಲ ಉಚಿತ ವೀಸಾ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ. ಆದರೆ ಕೆಲಮ ನಿರ್ಬಂಧಗಳಿವೆ ಎಂದು ಹೇಳಿದ್ದಾರೆ.
ಒಟ್ಟಿನಲ್ಲಿ ತಮ್ಮ ಭಾಷಣದಲ್ಲಿ ಮೋದಿ ಭಾರತೀಯ ಸಂಜಾತರ ಕಾರ್ಡ್(ಪಿಐಒ೦) ಮತ್ತು ಒಮ್ಮೆ ಭಾರತದ ಪ್ರಜೆಯಾಗಿದ್ದವರಿಗೆ ಒಸಿಐ ನೀಡುವ ಚಿಂತನೆ ಹರಿಯಬಿಟ್ಟರು. ಅಲ್ಲದೇ ಇದರ ಸಾಧಕ ಮತ್ತು ಸೌಲಭ್ಯ ಬಳಸಿಕೊಳ್ಳುವ ರೀತಿಯನ್ನು ವಿವರಿಸಿದರು.
-
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ












Click it and Unblock the Notifications